..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ಕಳಚಿ ಹೋಯಿತು ಉದುಪಿ ತೆ೦ಕಪೇಟೆಯ ವಾರ್ಡಿನ ಬಿಜೆಪಿಯ ಜಿ.ಎಸ್.ಜಿ ಸಮಾಜದ ನಗರ ಸಭೆಯ ಸದಸ್ಯತ್ವ ಸ್ಥಾನಮಾನ. ಬ್ರಾಹ್ಮಣ ಸಮಾಜದ ತೆಕ್ಕೆಗೆ. ಮಧುಕರ್ ಮುದ್ರಾಡಿ ಮು೦ದಿನ ನಗರ ಸಭೆಯ ಚುನಾಣೆಯ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ...
ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲು ಸೇರಿ 6 ಮಂದಿಯ ವಿರುದ್ಧ ಗೂಂಡಾ ಕಾಯ್ದೆ
ಬಂಟ್ವಾಳ, ಸೆ.19 ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೊಳತ್ತಮಜಲು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಕೋಕಾ ಕಾಯ್ದೆ ಅಳವಡಿಸಲಾಗಿದ್ದು, ಈ ಪೈಕಿ ಆರು ಮಂದಿಯ ವಿರುದ್ಧ ಗೂಂಡಾ ಕಾಯ್ದೆ ಅಳವಡಿಸಲಾಗಿದೆ.
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಆರೋಪಿಗಳಾದ ಭರತ್ ಕುಮ್ಡೇಲು (38), ಶಿವಪ್ರಸಾದ್ (33), ಪ್ರದೀಪ್ (34), ಅಭಿನ್ ರೈ (32), ತೇಜಾಕ್ಷ (24) ಮತ್ತು ರಂಜಿತ್ (35) ಎಂಬವರ ವಿರುದ್ಧ ಕಾನೂನು ಬದ್ಧವಾಗಿ ಗೂಂಡಾ ಕಾಯ್ದೆ ಅಳವಡಿಸಲಾಗಿರುತ್ತದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.