....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಕಾಂಗೋದಲ್ಲಿ ವಿಮಾನ ಪತನ- ಇಬ್ಬರು ಹಿರಿಯ ಸೇನಾ ಅಧಿಕಾರಿಗಳು ಸೇರಿ 14 ಮಂದಿ ದುರ್ಮರಣ

ಕಿನ್ಶಾಸಾ:ಸೆ.26.ವಿಮಾನ ಪತನಗೊಂಡು ಇಬ್ಬರು ಹಿರಿಯ ಸೇನಾ ಅಧಿಕಾರಿಗಳೂ ಸೇರಿದಂತೆ 14 ಮಂದಿ ದುರ್ಮರಣ ಹೊಂದಿರುವ ಘಟನೆ ಕಾಂಗೋದಲ್ಲಿ ನಡೆದಿದೆ.

ಈ ಬಗ್ಗೆ ಕಾಂಗೋ ಸೇನೆ ದೃಢಪಡಿಸಿದ್ದು, ಅವಘಡದಲ್ಲಿ ಮಿಲಿಟರಿ ಕೋರ್ಟ್ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಮುಟೊಂಬೊ ಕಟಲಾಯಿ ಟಿಯೆಂಡೆ ಹಾಗೂ ಸಶಸ್ತ್ರ ಪಡೆಗಳ ಆಡಿಟರ್ ಜನರಲ್ ಲೆಫ್ಟಿನೆಂಟ್ ಜನರಲ್ ಬಕುಮಿ ಲಿಕುಲಿಯಾ ಕೂಡ ಮೃತಪಟ್ಟಿರೋದಾಗಿ ಮಾಹಿತಿ ನೀಡಿದೆ.

ಇಬ್ಬರು ಅಧಿಕಾರಿಗಳ ಜೊತೆಗೆ, ನಿಯೋಗದ 12 ಸದಸ್ಯರು ಹಾಗೂ ವಿಮಾನದ ಸಿಬ್ಬಂದಿಯೂ ಈ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಕಾಂಗೋ ಸೇನೆಯ ವಕ್ತಾರ ಮೇಜರ್ ಜನರಲ್ ಎಫೋಮಿ ಎಕೆಂಗೆ ತಿಳಿಸಿದ್ದಾರೆ.

ಸ್ಥಳೀಯ ಅಧಿಕಾರಿಗಳ ಪ್ರಕಾರ, ವಿಮಾನವು ನೈರುತ್ಯ ಕಾಂಗೋದ ಕಿಕ್ವಿಟ್‌ನಿಂದ ರಾಜಧಾನಿ ಕಿನ್ಶಾಸಾಗೆ ಹಿಂದಿರುಗುತ್ತಿದ್ದ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡು ಕೆಂಗೆ ಪ್ರದೇಶದಲ್ಲಿ ಪತನಗೊಂಡಿದೆ. ದುರ್ಘಟನೆಯಲ್ಲಿ ವಿಮಾನದಲ್ಲಿದ್ದ ಯಾರೂ ಬದುಕುಳಿದಿಲ್ಲ ಎನ್ನಲಾಗಿದೆ. ಆದರೆ ನಾಗರಿಕ ವಿಮಾನಯಾನ ಪ್ರಾಧಿಕಾರದ ಆಡಳಿತ ಮಂಡಳಿ ಅಧ್ಯಕ್ಷ ಗ್ರಿಫೋನ್ ಕಿನ್-ಕಿಯೆ ಮುಲುಂಬಾ, ವಿಮಾನ ಪತನಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಹೇಳಿದ್ದಾರೆ.

No Comments

Leave A Comment