..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........

ದಸರಾ ಮುನ್ನುಡಿ: ಯುವ ಸಂಭ್ರಮ’ಕ್ಕೆ ಇಂದು ಭರ್ಜರಿ ಚಾಲನೆ; ಮಾನಸಗಂಗೋತ್ರಿಯಲ್ಲಿ 8 ದಿನಗಳ ಕಾಲ ಯುವ ಕಲರವ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಮುನ್ನುಡಿಯಾದ ‘ಯುವ ಸಂಭ್ರಮ-2026’ ಸಾಂಸ್ಕೃತಿಕ ಹಬ್ಬಕ್ಕೆ ಇಂದು ಸಂಜೆ ಭರ್ಜರಿ ಚಾಲನೆ ದೊರೆಯಲಿದೆ. ಮೈಸೂರಿನ ಮಾನಸಗಂಗೋತ್ರಿಯ ಕುವೆಂಪು ಮುಕ್ತ ಬಯಲು ರಂಗಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಂಜೆ 4:30ಕ್ಕೆ ಕಾರ್ಯಕ್ರಮವನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಒಟ್ಟು 8 ದಿನಗಳ ಕಾಲ ಈ ಸಾಂಸ್ಕೃತಿಕ ವೈಭವ

ಇಂದು ಸಂಜೆ 4.30ಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಈ ಭವ್ಯ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದು, ಉದ್ಘಾಟನಾ ಸಮಾರಂಭದಲ್ಲಿ ಸ್ಯಾಂಡಲ್‌ವುಡ್ ಖ್ಯಾತ ನಟಿ ಸಪ್ತಮಿ ಗೌಡ ಮತ್ತು ಪ್ರಸಿದ್ಧ ಹಿನ್ನೆಲೆ ಗಾಯಕ ವಿಜಯಪ್ರಕಾಶ್ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಯುವಪಡೆಯ ಉತ್ಸಾಹವನ್ನು ಹೆಚ್ಚಿಸಲಿದ್ದಾರೆ. ಅದರಂತೆ, ಇಂದಿನಿಂದ ಒಟ್ಟು 8 ದಿನಗಳ ಕಾಲ ಪ್ರತಿದಿನ ಸಂಜೆ 4:30 ಗಂಟೆಯಿಂದ ರಾತ್ರಿ 10.30 ರವರೆಗೆ, ಕರ್ನಾಟಕದ ವಿವಿಧ ಜಿಲ್ಲೆಗಳ ಸುಮಾರು 350 ಕ್ಕೂ ಹೆಚ್ಚು ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು ಈ ವೇದಿಕೆಯಲ್ಲಿ ವೈವಿಧ್ಯಮಯ ನೃತ್ಯ ಮತ್ತು ಸಾಂಸ್ಕೃತಿಕ ಪ್ರದರ್ಶನಗಳ ಮೂಲಕ ತಮ್ಮ ಕಲಾ ಪ್ರತಿಭೆಯನ್ನು ಅನಾವರಣಗೊಳಿಸಲಿದ್ದಾರೆ.

ಯುವ ದಸರಾ ವೇದಿಕೆಗೆ ಆಯ್ಕೆ

ಮಾನಸಗಂಗೋತ್ರಿಯ ಕುವೆಂಪು ಮುಕ್ತ ಬಯಲು ರಂಗಮಂದಿರದಲ್ಲಿ ನಡೆಯುವ ಯುವ ಸಂಭ್ರಮದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಆಯ್ದ ಕಾಲೇಜು ತಂಡಗಳಿಗೆ, ನವರಾತ್ರಿ ಹಬ್ಬದ ಸಂದರ್ಭದಲ್ಲಿ ಅದ್ಧೂರಿಯಾಗಿ ನಡೆಯಲಿರುವ ಯುವ ದಸರಾ ವೇದಿಕೆಯಲ್ಲೂ ಸಾಂಸ್ಕೃತಿಕ ಪ್ರದರ್ಶನ ನೀಡಲು ಸುವರ್ಣ ಅವಕಾಶ ಸಿಗಲಿದೆ.

No Comments

Leave A Comment