..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪ್ರಸಕ್ತ ವರ್ಷ125ನೇ ವರ್ಷದ ಸಂಭ್ರಮಾಚರಣೆಗೆ ಕರಸೇವೆಯ ಮೂಲಕ ಗಾಂಧಿ ಜಯಂತಿ ಆಚರಣೆಯೊಂದಿಗೆ ಶುಕ್ರವಾರ ಚಾಲನೆ ನೀಡಲಾಯಿತು....

‘ಜ್ಞಾನೇಶ್ ರಾಜೀನಾಮೆ ನೀಡದಿದ್ದರೆ ಮೋದಿ ರಾಜೀನಾಮೆಗೆ ದೇಶವ್ಯಾಪಿ ಹೋರಾಟ’-ಅಭಿಜಿತ್‌ ದೀಪ್ಕೆ

ಮುಂಬೈ:ಅ.02. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಕ್ಷಣವೇ ರಾಜೀನಾಮೆ ನೀಡಬೇಕು, ಒಂದು ವೇಳೆ ಅವರು ರಾಜೀನಾಮೆ ನೀಡದಿದ್ದರೆ ಮುಂದಿನ ದಿನಗಳಲ್ಲಿ ನಾವು ನೇರವಾಗಿ ನರೇಂದ್ರ ಮೋದಿಅವರ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಹೇಳಿದ್ದಾರೆ.

ಮುಂಬೈ ಶಿವಾಜಿ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ಸುಮಾರು 13 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಜ್ಞಾನೇಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚುನಾವಣೆಗಳನ್ನು ಗೆಲ್ಲಿಸಿಕೊಡಲು ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು

ನರೇಂದ್ರ ಮೋದಿ ಸರ್ಕಾರದ “ಒಂದು ದೇಶ, ಒಂದು ಚುನಾವಣೆ” ಎಂಬುದು ಕೇವಲ ಒಂದು ಘೋಷಣೆಯಷ್ಟೇ. ಅದರ ಆ ಮರೆಯಲ್ಲಿ ಬಿಜೆಪಿ ದೇಶದಲ್ಲಿ “ಒಂದು ದೇಶ, ಒಂದು ಪಕ್ಷ” ಎಂಬ ಸರ್ವಾಧಿಕಾರಿ ಆಡಳಿತವನ್ನು ತರಲು ಬಯಸುತ್ತಿದೆ ಎಂದು ದೀಪ್ಕೆ ಗಂಭೀರ ಆರೋಪ ಮಾಡಿದರು.

No Comments

Leave A Comment