..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪ್ರಸಕ್ತ ವರ್ಷ125ನೇ ವರ್ಷದ ಸಂಭ್ರಮಾಚರಣೆಗೆ ಕರಸೇವೆಯ ಮೂಲಕ ಗಾಂಧಿ ಜಯಂತಿ ಆಚರಣೆಯೊಂದಿಗೆ ಶುಕ್ರವಾರ ಚಾಲನೆ ನೀಡಲಾಯಿತು....

ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಮತವನ್ನು ಡಿಲೀಟ್ ಮಾಡಿಸಿ ಮತ ಕಳ್ಳತನ ನಡೆಸಿದ ಬಿಜೆಪಿ ನಾಯಕರ ನಿಜ ಬಣ್ಣವನ್ನು ಬಯಲುಗೊಳಿಸಿ ಮತದಾರರಿಗೆ ಬೆಂಬಲವಾಗಿ ನಿಂತ ರಾಜ್ಯದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್- ಸುರೇಶ್ ಶೆಟ್ಟಿ ಬನ್ನಂಜೆ

ಉಡುಪಿ: ಕಾಂಗ್ರೆಸ್ ಪಕ್ಷದ ಸಾಂಪ್ರದಾಯಕ. ಮತದಾರರಾದ ಅಲ್ಪಸಂಖ್ಯಾತರು.ಹಿಂದುಳಿದ ವರ್ಗದವರು.ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು. ಮತ್ತು ರೈತರಗಳು ಮತ್ತು ಎಲ್ಲಾ ವರ್ಗದ ಬಡ ಜನರು. ಇವರೆಲ್ಲರ ಮತವನ್ನು ಡಿಲೀಟ್ ಮಾಡಿ. ಮುಂದಿನ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆಯನ್ನು ಏರುವ ಕನಸು ಕಂಡ ರಾಜ್ಯದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಕನಸನ್ನು ನಮ್ಮ ರಾಜ್ಯದ ಡೈನಮಿಕ್ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಬಗ್ನ ಗೊಳಿಸಿದ್ದಾರೆ.

ರಾಜ್ಯದ ಮತದಾರರಿ ಗಾಗಿ ತಮ್ಮ ಸಂಪುಟದ ಸಹೋದ್ಯೋಗಿಗಳ ಜೊತೆ ರಾಜ್ಯದ ಚುನಾವಣಾ ಆಯೋಗದ ಮುಖ್ಯಸ್ಥರ ಜೊತೆ ರಾಜ್ಯದ ಮತದಾರರ ಪರವಾಗಿ ಮನವಿಯನ್ನು ನೀಡಿ ಎಲ್ಲರಿಗೂ ಮತದಾನದ ಹಕ್ಕು ನೀಡುವಂತೆ ಒತ್ತಾಯಿಸಿದ್ದಾರೆ . ಇದು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಅನಿರೀಕ್ಷಿತ ಹೊಳೆತವನ್ನು ನಮ್ಮ ಡಿಕೆ ಶಿವಕುಮಾರ್ ಅವರು ನೀಡಿದ್ದು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಂಗಾಲಾಗಿ ಹೋಗಿದ್ದಾರೆ ಅದಕ್ಕಾಗಿ ಕಾಂಗ್ರೆಸ್ ಪಕ್ಷ ಮತ್ತು ಡಿಕೆ ಶಿವಕುಮಾರ್ ಅವರ ವಿರುದ್ಧ ಸುಳ್ಳು ಹೇಳಿಕೆಯನ್ನು ನೀಡಿ ಜನಸಾಮಾನ್ಯರನ್ನು ಮೋಸಗೊಳಿಸಲು ಯತ್ನಿಸುತ್ತಿದ್ದಾರೆ.

ನಮ್ಮ ರಾಜ್ಯದ ನಿಷ್ಠಾವಂತ ಮತದಾರರು ಈ ಬಿಜೆಪಿಯ ಜೆಡಿಎಸ್ ನಾಯಕರ ಈ ಡೋಂಗಿ ಹೇಳಿಕೆಗಳಿಗೆ ಬಲಿಯಾಗದೆ ಸಂಪೂರ್ಣವಾಗಿ ಮುಂದಿನ ದಿನಗಳಲ್ಲಿ ನಮ್ಮ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸಂಪೂರ್ಣವಾಗಿ ಅಧಿಕಾರಕ್ಕೆ ಬರದಂತೆ ತಡೆಯಬೇಕಾಗಿದೆ.

ನಮ್ಮ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇವರು ಮತದಾರರ ಪರವಾಗಿ ಮಾಡಿದ ಈ ಪ್ರತಿ ರೋಧದಿಂದಾಗಿ ನಮ್ಮ ದೇಶದ 13 ಕೋಟಿ ಮತದಾರರು ಇಂದು ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ಸಾಧ್ಯವಾಗುತ್ತಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಅಧ್ಯಕ್ಷರು ಹಾಗೂ ಉಡುಪಿ ನಗರಸಭೆ ನಾಮ ನಿರ್ದೇಶಕ ಸದಸ್ಯರಾದ ಸುರೇಶ್ ಶೆಟ್ಟಿ ಬನ್ನಂಜೆ ಇವರು ತಿಳಿಸಿರುತ್ತಾರೆ

No Comments

Leave A Comment