..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪ್ರಸಕ್ತ ವರ್ಷ125ನೇ ವರ್ಷದ ಸಂಭ್ರಮಾಚರಣೆಗೆ ಕರಸೇವೆಯ ಮೂಲಕ ಗಾಂಧಿ ಜಯಂತಿ ಆಚರಣೆಯೊಂದಿಗೆ ಶುಕ್ರವಾರ ಚಾಲನೆ ನೀಡಲಾಯಿತು....

ರಾಜ್ಯ ಹಬ್ಬಗಳ ಹೊತ್ತಲ್ಲೆ ಜನತೆಗೆ ಬೆಲೆ ಏರಿಕೆ ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ

ಬೆಂಗಳೂರು: ದಸರಾಗೂ ಮುನ್ನ ರಾಜ್ಯದ ಜನತೆಗೆ ಮತ್ತೆ ಹಾಲಿನ ದರ ಏರಿಕೆಯ ಶಾಕ್ ಎದುರಾಗಿದೆ. ಪ್ರತಿ ಲೀಟರ್ ಹಾಲಿನ ದರ 10 ರೂಪಾಯಿ ಹೆಚ್ಚಿಸಬೇಕೆಂದು ಹಾಲು ಮಾರಾಟ ಒಕ್ಕೂಟಗಳು ಮನವಿ ಮಾಡಿತ್ತು. ಆದರೆ ಸರ್ಕಾರ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಒಲವು ವ್ಯಕ್ತಪಡಿಸಿದ್ದು, ಸಚಿವ ಸಂಪುಟ ಸಭೆಯಲ್ಲೂ ದರ ಏರಿಕೆಗೆ ಸಮ್ಮತಿ ದೊರೆತಿದೆ ಎಂದು ತಿಳಿದುಬಂದಿದೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸದ್ಯ ಹಾಲಿನ ದರ ಏರಿಕೆ ಕುರಿತು ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿಗಳ ವಿವೇಚನೆಗೆ ಬಿಡಲಾಗಿದೆ ಎನ್ನಲಾಗಿದೆ. ಇನ್ನು ಅಕ್ಟೋಬರ್ 27ರ ಬಳಿಕ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ.

No Comments

Leave A Comment