..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ಕಳಚಿ ಹೋಯಿತು ಉದುಪಿ ತೆ೦ಕಪೇಟೆಯ ವಾರ್ಡಿನ ಬಿಜೆಪಿಯ ಜಿ.ಎಸ್.ಜಿ ಸಮಾಜದ ನಗರ ಸಭೆಯ ಸದಸ್ಯತ್ವ ಸ್ಥಾನಮಾನ. ಬ್ರಾಹ್ಮಣ ಸಮಾಜದ ತೆಕ್ಕೆಗೆ. ಮಧುಕರ್ ಮುದ್ರಾಡಿ ಮು೦ದಿನ ನಗರ ಸಭೆಯ ಚುನಾಣೆಯ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ...
KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ
ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣದಲ್ಲಿ ಜೈಲು ಪಾಲಾಗಿರುವ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಸದಸ್ಯೆ ಬಿವಿ ಗೀತಾ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ ಬುಧವಾರ ಜಾರಿ ನಿರ್ದೇಶನಾಲಯ(ಇಡಿ)ದ ವಶಕ್ಕೆ ನೀಡಿ ಆದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಎರಡನೇ ಬಾರಿ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಇಡಿ, ಮನೆಯಲ್ಲೇ ಇದ್ದ ಶಿವಶಂಕರಪ್ಪ ಅವರನ್ನು ಬಂಧಿಸಿತ್ತು.
ಇನ್ನೊಂದೆಡೆ ಇದೇ ಪ್ರಕರಣದಲ್ಲಿ ಕೆಪಿಎಸ್ಸಿ ಸದಸ್ಯೆ ಬಿ.ವಿ.ಗೀತಾ ಅವರನ್ನು ಬೆಂಗಳೂರಿನ ಅವರ ಮನೆಯಲ್ಲಿ ಬಂಧಿಸಿದ್ದ ಇಡಿ ಅಧಿಕಾರಿಗಳು ಇಂದು ಇಬ್ಬರೂ ಆರೋಪಿಗಳನ್ನು ಬೆಂಗಳೂರಿನ 4ನೇ ಸಿಸಿಎಚ್ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಹೆಚ್ಚಿನ ವಿಚಾರಣೆಗಾಗಿ ಇಬ್ಬರು ಆರೋಪಿಗಳನ್ನು ನಮ್ಮ ವಶಕ್ಕೆ ನೀಡುವಂತೆ ಇಡಿ ಅಧಿಕಾರಿಗಳು ಕೋರ್ಟ್ ಗೆ ಮನವಿ ಮಾಡಿದರು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಶಿವಶಂಕರಪ್ಪ ಪರ ವಕೀಲರು, ನಮ್ಮ ಕಕ್ಷಿದಾರರು ಎಲ್ಲೂ ಹೋಗಲ್ಲ, ಇಲ್ಲೇ ಇರ್ತಾರೆ. ತನಿಖೆಗೆ ಸಹಕಾರ ನೀಡುತ್ತಾರೆ ಕಸ್ಟಡಿಗೆ ಬೇಡ ಎಂದು ವಾದಿಸಿದರು.
ವಾದ, ಪ್ರತಿವಾದ ಆಲಿಸಿದ 4ನೇ ಸಿಸಿಹೆಚ್ ನ್ಯಾಯಾಲಯ, ಅಂತಿಮವಾಗಿ ಶಿವಶಂಕರಪ್ಪ ಸಾಹುಕಾರ್ ಮತ್ತು ಬಿ.ವಿ.ಗೀತಾ ಅವರನ್ನು 13 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಅಲ್ಲದೇ ಅಕ್ಟೋಬರ್ 19ರಂದು ಮಧ್ಯಾಹ್ನ 3 ಗಂಟೆಗೆ ಆರೋಪಿಗಳನ್ನು ಕೋರ್ಟ್ಗೆ ಹಾಜರು ಪಡಿಸುವಂತೆ ಇಡಿಗೆ ಸೂಚನೆ ನೀಡಿದೆ.