..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ಕಳಚಿ ಹೋಯಿತು ಉದುಪಿ ತೆ೦ಕಪೇಟೆಯ ವಾರ್ಡಿನ ಬಿಜೆಪಿಯ ಜಿ.ಎಸ್.ಜಿ ಸಮಾಜದ ನಗರ ಸಭೆಯ ಸದಸ್ಯತ್ವ ಸ್ಥಾನಮಾನ. ಬ್ರಾಹ್ಮಣ ಸಮಾಜದ ತೆಕ್ಕೆಗೆ. ಮಧುಕರ್ ಮುದ್ರಾಡಿ ಮು೦ದಿನ ನಗರ ಸಭೆಯ ಚುನಾಣೆಯ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ...
ಹಿ೦ದಿಚಿತ್ರದ ಅಭಿಮಾನಿಗಳಿಗೆ,ಭಾರತೀಯ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ-ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ
ಪಣಜಿ:ಅ.08, ಭಾರತೀಯ ಚಿತ್ರರಂಗಕ್ಕೆ ಗುರುವಾರ (ಇ೦ದು) ಬೆಳಗ್ಗೆ ಆಘಾತಕಾರಿ ಸುದ್ದಿ ಎದುರಾಗಿದೆ. ಬಾಲಿವುಡ್ ಹಾಗೂ ಮರಾಠಿ ಚಿತ್ರರಂಗದ ಹಿರಿಯ ನಟ, ದಿಗ್ಗಜ ಕಲಾವಿದ ನಾನಾ ಪಾಟೇಕರ್ ಅವರು 75ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಗೋವಾದ ಡೋನಾ ಪೌಲಾದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಅಸ್ವಸ್ಥರಾಗಿ ಪತ್ತೆಯಾಗಿದ್ದು, ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ವರದಿಗಳ ಪ್ರಕಾರ, ಗುರುವಾರ ಬೆಳಗ್ಗೆ ಸುಮಾರು 5:20ರ ವೇಳೆಗೆ ನಾನಾ ಪಾಟೇಕರ್ ಅವರ ನಿಧನವನ್ನು ವೈದ್ಯರು ದೃಢಪಡಿಸಿದ್ದಾರೆ. ತೀವ್ರ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಆಸ್ಪತ್ರೆಗೆ ಕರೆತಂದ ಬಳಿಕ ಸುಮಾರು 45 ನಿಮಿಷಗಳ ಕಾಲ ಸಿಪಿಆರ್ ನೀಡಿದರೂ ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯ ಡಾ. ಶೇಖರ್ ಸಾಳ್ಕರ್ ತಿಳಿಸಿದ್ದಾರೆ. ಈ ಪ್ರಕರಣವನ್ನು ಮೆಡಿಕೋ-ಲೀಗಲ್ ಕೇಸ್ ಆಗಿ ದಾಖಲಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಸಾವಿನ ಕುರಿತು ಹೆಚ್ಚಿನ ವಿವರಗಳು ಸ್ಪಷ್ಟವಾಗಲಿವೆ. ಕುಟುಂಬದ ವತಿಯಿಂದ ಶೀಘ್ರದಲ್ಲೇ ಅಧಿಕೃತ ಹೇಳಿಕೆ ಹೊರಬರುವ ನಿರೀಕ್ಷೆಯಿದೆ. ನಾನಾ ಪಾಟೇಕರ್ ಅವರ ಪುತ್ರ ಮಲ್ಹಾರ್ ಅವರು ನಿಧನವನ್ನು ದೃಢಪಡಿಸಿದ್ದಾರೆ.
ನಾನಾ ಪಾಟೇಕರ್ ಅವರು ತಮ್ಮ ವಿಶಿಷ್ಟ ಅಭಿನಯ, ಗಂಭೀರ ಧ್ವನಿ ಮತ್ತು ಶಕ್ತಿಯುತ ಸಂಭಾಷಣೆಗಳ ಮೂಲಕ ಭಾರತೀಯ ಚಿತ್ರರಂಗದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದರು. ಹಿಂದಿ ಹಾಗೂ ಮರಾಠಿ ಸಿನಿಮಾಗಳಲ್ಲಿ ಹಲವು ವಿಭಿನ್ನ ಪಾತ್ರಗಳಿಗೆ ಜೀವ ತುಂಬಿದ್ದ ಅವರು ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ‘ಪರಿಂಡಾ’, ‘ಕ್ರಾಂತಿವೀರ್’, ‘ಅಬ್ ತಕ್ ಛಪ್ಪನ್’ ಸೇರಿದಂತೆ ಹಲವು ಸಿನಿಮಾಗಳಲ್ಲಿನ ಅವರ ಅಭಿನಯ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಗಂಭೀರ ಪಾತ್ರಗಳ ಜೊತೆಗೆ ‘ವೆಲ್‌ಕಮ್’ ನಂತಹ ಹಾಸ್ಯ ಸಿನಿಮಾಗಳಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿದ್ದರು. ಕನ್ನಡದಲ್ಲಿಯೂ ನಾನಾ ಪಾಟೇಕರ್ ಅವರು ‘ಯಕ್ಷ’ ಸಿನಿಮಾದಲ್ಲಿ ನಟಿಸಿದ್ದರು. ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ವಿಶಿಷ್ಟ ಸ್ಥಾನವನ್ನು ಗಳಿಸಿದ್ದ ಈ ಹಿರಿಯ ಕಲಾವಿದರ ಅಗಲಿಕೆಯಿಂದ ಸಿನಿಮಾ ಕ್ಷೇತ್ರದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.