....ನಾಡಿನ ಎಲ್ಲೆಡೆಯಲ್ಲಿ ಇ೦ದಿನಿ೦ದ (ಭಾನುವಾರದಿ೦ದ)ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ...16ರ೦ದು ಶ್ರೀಶಾರದಾ ಪೂಜೆ...

ಕೊಚ್ಚಿಯಲ್ಲಿ ಭೀಕರ ರಸ್ತೆ ಅಪಘಾತ – ಸುಳ್ಯದ ಇಯಾಸ್ ಸೇರಿ ಮೂವರ ದುರ್ಮರಣ

ಕೊಚ್ಚಿ: ಅ.11. ಅತಿವೇಗ ಮತ್ತು ಅಜಾಗರೂಕ ಚಾಲನೆಯಿಂದ ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕರ್ನಾಟಕದ ಇಯಾಸ್ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಭಾನುವಾರ ಮುಂಜಾನೆ 1.45ರ ಸುಮಾರಿಗೆ ನೆಡುಂಬಸ್ಸೇರಿ ಸಮೀಪದ ಮೂಝಿಯಲ್‌ನಲ್ಲಿ, ಸುವರ್ಣೋದಯಂ ಬಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಮೃತರನ್ನು ಕರ್ನಾಟಕದ ಕೊಡಗಿನ ಇಯಾಸ್, ವಯನಾಡಿನ ದೇವಿಕಾ ಮತ್ತು ಪಾಲಕ್ಕಾಡ್ ಜಿಲ್ಲೆಯ ಮನ್ನಾರ್ಕಾಡ್‌ನ ಗೋಪಿಕಾ ಎಂದು ಗುರುತಿಸಲಾಗಿದೆ. ನೆಡುಂಬಸ್ಸೇರಿ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಎಫ್‌ಐಆರ್‌ನಲ್ಲಿ ಈ ವಿವರಗಳಿವೆ ಎಂದು ವರದಿಯಾಗಿವೆ. ವರದಿ ಪ್ರಕಾರ, ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಲಾಗುತ್ತಿದ್ದ ಕಾರು ಹಿಂದಿನಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೂವರೂ ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆ ಮತ್ತು ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿವೆ.

ಇಯಾಸ್ ಮತ್ತು ದೇವಿಕಾರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗೋಪಿಕಾರನ್ನು ಅಂಗಮಾಲಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೂವರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನೆಡುಂಬಸ್ಸೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

No Comments

Leave A Comment