ಉಡುಪಿಯ ಶ್ರೀಕೃಷ್ಣಮಠದಲ್ಲಿ ಜರಗಲಿರುವ ಲಕ್ಷದೀಪೋತ್ಸವಕ್ಕೆ ಭರದ ಸಿದ್ದತೆ-ಉತ್ಥಾನ ದ್ವಾದಶಿಯಿ೦ದ ಲಕ್ಷದೀಪೋತ್ಸವ ಆರ೦ಭ.....ನವೆ೦ಬರ್ 26ರ ಗುರುವಾರ ಲಕ್ಷದೀಪೋತ್ಸವ ಮತ್ತು 27ರ ಶುಕ್ರವಾರದ೦ದು ಓಕುಳಿಯು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪತ್ರಿಯ ವಾಡಿಕೆಯ೦ತೆ ಲಕ್ಷದೀಪೋತ್ಸವವು ಜರಗಲಿದೆ....

ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ: ಮೂವರು ಆರೋಪಿಗಳಿಗೆ ಅ. 31ರವರೆಗೆ ಪೊಲೀಸ್ ಕಸ್ಟಡಿ

ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ನ್ಯಾಯಾಲಯವೊಂದು ಮೂವರು ಆರೋಪಿಗಳನ್ನು ಅಕ್ಟೋಬರ್ 31ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಈ ಪ್ರಕರಣದಲ್ಲಿ ಬಂಧಿತರಾದ ಮೂವರು ಪ್ರಮುಖ ಆರೋಪಿಗಳನ್ನು ರಾಜಸ್ಥಾನದ ಕೋಟಾದಿಂದ ಬುಧವಾರ ಮುಂಜಾನೆ ಮುಂಬೈಗೆ ಕರೆತರಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ರಸ್ತೆ ಮಾರ್ಗವಾಗಿ ಕೋಟಾದಿಂದ ಮುಂಬೈಗೆ ಕರೆತರಲಾಯಿತು. ಮುಂಬೈಗೆ ತಲುಪಿದ ಕೂಡಲೇ, ಕಡ್ಡಾಯ ವೈದ್ಯಕೀಯ ಪರೀಕ್ಷೆಗಾಗಿ ಅವರನ್ನು ಜಿ.ಟಿ. ಆಸ್ಪತ್ರೆಗೆ (GT Hospital) ಕರೆದೊಯ್ಯಲಾಯಿತು.

ವೈದ್ಯಕೀಯ ತಪಾಸಣೆಯ ನಂತರ ವಿಚಾರಣೆಗಾಗಿ ಮುಂಬೈ ಅಪರಾಧ ವಿಭಾಗದ (Mumbai Crime Branch) ದರೋಡೆ ವಿರೋಧಿ ಘಟಕದ (Anti-Extortion Cell – AEC) ಕಚೇರಿಗೆ ಕರೆದೊಯ್ಯಲಾಯಿತು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಆರೋಪಿಗಳನ್ನು ಹರಿಯಾಣದ ಸೋನಿಪತ್‌ನ ರೆಹಾನ್ ಅಲಿಯಾಸ್ ಸುಕ್ಕಾ, ಮುಂಬೈನಲ್ಲಿ ವಾಸಿಸುತ್ತಿರುವ ಬಿಹಾರದ ಬೇಗುಸರಾಯ್ ಮೂಲದ ರಿತಿಕ್ ಕುರ್ಮಿ ಹಾಗೂ ಹರಿಯಾಣದ ಫೂಲ್ ಸಿಂಗ್ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕೋಟಾ ನಗರ ಪೊಲೀಸರು ಇವರನ್ನು ಮುಂಬೈ ಪೊಲೀಸರಿಗೆ ಹಸ್ತಾಂತರಿಸಿದ್ದರು. ಮುಂಬೈ ಪೊಲೀಸರು ಅವರನ್ನು ಔಪಚಾರಿಕವಾಗಿ ಬಂಧಿಸಿ, ಅಲ್ಲಿನ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದರು. ಅವರನ್ನು ಮುಂಬೈಗೆ ಕರೆತರುವ ಸಲುವಾಗಿ ನ್ಯಾಯಾಲಯವು ‘ಟ್ರಾನ್ಸಿಟ್ ರಿಮಾಂಡ್’ (ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಕರೆದೊಯ್ಯಲು ಅನುಮತಿ) ನೀಡಿತು.

No Comments

Leave A Comment