ಉಡುಪಿಯ ಶ್ರೀಕೃಷ್ಣಮಠದಲ್ಲಿ ಜರಗಲಿರುವ ಲಕ್ಷದೀಪೋತ್ಸವಕ್ಕೆ ಭರದ ಸಿದ್ದತೆ-ಉತ್ಥಾನ ದ್ವಾದಶಿಯಿ೦ದ ಲಕ್ಷದೀಪೋತ್ಸವ ಆರ೦ಭ.....ನವೆ೦ಬರ್ 26ರ ಗುರುವಾರ ಲಕ್ಷದೀಪೋತ್ಸವ ಮತ್ತು 27ರ ಶುಕ್ರವಾರದ೦ದು ಓಕುಳಿಯು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪತ್ರಿಯ ವಾಡಿಕೆಯ೦ತೆ ಲಕ್ಷದೀಪೋತ್ಸವವು ಜರಗಲಿದೆ....

ಉಡುಪಿ: ರಸ್ತೆ ಅಪಘಾತದಲ್ಲಿ ಆರ್‌ಎಸ್‌ಎಸ್ ಮುಖಂಡ ಸಾವು!

ಉಡುಪಿ: ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದ ಆರ್‌ಎಸ್‌ಎಸ್‌ನ ಹಿರಿಯ ಮುಖಂಡರೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ಉಡುಪಿಯ ಕೋಟ ಜಂಕ್ಷನ್‌ನಲ್ಲಿ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಉಡುಪಿ ಜಿಲ್ಲೆಯ ಕೋಟ ಮಣೂರು ನಿವಾಸಿ ಗುರುದಾಸ್ ಶೆಣೈ (65) ಎಂದು ಗುರುತಿಸಲಾಗಿದೆ. ಅವರು ಅಮೃತೇಶ್ವರಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಉಡುಪಿಯಿಂದ ಕುಂದಾಪುರದ ಕಡೆಗೆ ಸಾಗುತ್ತಿದ್ದ ಕಾರೊಂದು ಅವರ ಸೈಕಲ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿದೆ.

ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

No Comments

Leave A Comment