ಉಡುಪಿ: ರಸ್ತೆ ಅಪಘಾತದಲ್ಲಿ ಆರ್ಎಸ್ಎಸ್ ಮುಖಂಡ ಸಾವು!....ಅಕ್ಟೋಬರ್ 28ರಂದು ಆಂಧ್ರ ಕರಾವಳಿಗೆ 'ಅರ್ನಾಬ್' ಚಂಡಮಾರುತ, ತೀವ್ರ ಸ್ವರೂಪ, 3 ದಿನ ಮಳೆ ಸಾಧ್ಯತೆ IMD...
ಸಂಸತ್ ಭವನದ ನಾರ್ತ್ ಬ್ಲಾಕ್ನಲ್ಲಿ ಅಗ್ನಿ ಅವಘಡ; ಬೆಂಕಿ ನಂದಿಸಲು ಸ್ಥಳಕ್ಕೆ ಧಾವಿಸಿದ 6 ಅಗ್ನಿಶಾಮಕ ವಾಹನ!
ನವದೆಹಲಿ: ದೆಹಲಿಯ ಸಂಸತ್ ಭವನದ ಸಮೀಪದಲ್ಲೇ ಇರುವ ಕೇಂದ್ರ ಸಚಿವಾಲಯದ ‘ನಾರ್ತ್ ಬ್ಲಾಕ್'(North Block) ಕಟ್ಟಡದ ಮೇಲ್ಛಾವಣಿಯಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಆರು ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಯತ್ನಿಸುತ್ತಿವೆ.
ಕಟ್ಟಡದಿಂದ ದಟ್ಟವಾದ ಹೊಗೆ ಬರುತ್ತಿರುವುದನ್ನು ಗಮನಿಸಿದ ನಂತರ, ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು.
ಕಟ್ಟಡದಲ್ಲಿ ನವೀಕರಣ ಕಾಮಗಾರಿ ನಡೆಯುತ್ತಿದ್ದು, ಒಳಭಾಗದಲ್ಲಿದ್ದ ಕೆಲವು ವಸ್ತುಗಳನ್ನು ತೆರವುಗೊಳಿಸುವ ಕೆಲಸಗಳು ನಡೆಯುತ್ತಿದ್ದವು. ಬಹುಶಃ ಇದೇ ಬೆಂಕಿ ಕಾಣಿಸಿಕೊಳ್ಳಲು ಕಾರಣವಾಗಿರಬಹುದು ಎಂದು ದೆಹಲಿ ಅಗ್ನಿಶಾಮಕ ಸೇವೆ ತಿಳಿಸಿದೆ.
ಕಟ್ಟಡದಿಂದ ಹೊಗೆ ಬರುತ್ತಿರುವ ಬಗ್ಗೆ ದೆಹಲಿ ಅಗ್ನಿಶಾಮಕ ಸೇವೆಗೆ ಇಂದು ಬೆಳಗ್ಗೆ 11.10 ಕ್ಕೆ ಕರೆ ಬಂದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಸತ್ತಿನತ್ತ ತೆರಳುತ್ತಿದ್ದ ಶಿವಸೇನಾ ಸಂಸದ ಮಿಲಿಂದ್ ದಿಯೋರಾ ಅವರು ನಾರ್ತ್ ಬ್ಲಾಕ್ನ ಹಿಂಭಾಗದಿಂದ ದಟ್ಟ ಹೊಗೆ ಏಳುತ್ತಿರುವುದನ್ನು ಗಮನಿಸಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.
ತಮ್ಮ ‘ಎಕ್ಸ್’ ಖಾತೆಯಲ್ಲಿ ದಟ್ಟ ಕಪ್ಪು ಹೊಗೆ ಆವರಿಸಿರುವ ಚಿತ್ರವನ್ನು ಹಂಚಿಕೊಂಡಿರುವ ದಿಯೋರಾ, ಎಲ್ಲರೂ ಸುರಕ್ಷಿತವಾಗಿರಲಿ ಎಂದು ಹಾರೈಸಿದ್ದು, ತುರ್ತು ಸೇವೆಗಳು ತ್ವರಿತವಾಗಿ ಸ್ಪಂದಿಸುತ್ತಿವೆ ಎಂದು ತಿಳಿಸಿದ್ದಾರೆ.