ಉಡುಪಿ: ರಸ್ತೆ ಅಪಘಾತದಲ್ಲಿ ಆರ್‌ಎಸ್‌ಎಸ್ ಮುಖಂಡ ಸಾವು!....ಅಕ್ಟೋಬರ್ 28ರಂದು ಆಂಧ್ರ ಕರಾವಳಿಗೆ 'ಅರ್ನಾಬ್' ಚಂಡಮಾರುತ, ತೀವ್ರ ಸ್ವರೂಪ, 3 ದಿನ ಮಳೆ ಸಾಧ್ಯತೆ IMD...

MLC election: BJP-JDS ಮೈತ್ರಿ ಅಭ್ಯರ್ಥಿ ರಂಗನಾಥ್ ಭರ್ಜರಿ ಗೆಲುವು; ಪುಟ್ಟಣ್ಣಗೆ ಹೀನಾಯ ಸೋಲು, ಕಾಂಗ್ರೆಸ್​ಗೆ ಮುಖಭಂಗ!

ಬೆಂಗಳೂರು: ತೀವ್ರ ಜಿದ್ದಾಜಿದ್ದಿನ ಕಣವಾಗಿದ್ದ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಪಿ ರಂಗನಾಥ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದ ಆಡಳಿತರೂಢ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು ಅಂತಿಮ ಸುತ್ತಿನಲ್ಲಿ ಹೀನಾಯ ಸೋಲು ಅನುಭವಿಸಿದ್ದಾರೆ.

ಎಪಿ ರಂಗನಾಥ್ ಅವರು ಪ್ರಥಮ ಸುತ್ತಿನಲ್ಲಿ ಕೇವಲ 150 ಮತಗಳಿಂದ ಹಿಂದೆ ಇದ್ದರು. ಎರಡು ಮೂರು ಮತ್ತು ನಾಲ್ಕನೇ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ್ದು, ಮೂಲಗಳ ಪ್ರಕಾರ ಸುಮಾರು 700 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ನಾಲ್ಕು ಬಾರಿ ಶಿಕ್ಷಕರ ಕ್ಷೇತ್ರದಿಂದ ಸತತ ಗೆಲುವು ಸಾಧಿಸಿದ ಪುಟ್ಟಣ್ಣ ಅವರಿಗೆ ಇದೇ ಪ್ರಥಮ ಬಾರಿಗೆ ಸೋಲಾಗಿದೆ. ಬಿಜೆಪಿಯಿಂದ ಗೆದ್ದು ರಾಜೀನಾಮೆ ನೀಡಿ ನಂತರ ಕಳೆದ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು.

ಆದರೆ ಮತ್ತೊಮ್ಮೆ ವಿಧಾನಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ರಂಗನಾಥ್ ಪರವಾಗಿ ಸತತವಾಗಿ ಶ್ರಮಿಸಿ ಶ್ರಮಿಸಿತ್ತು ಅದು ಈಗ ಫಲ ನೀಡಿದೆ.

ಇನ್ನು ಇತರ ಮೂರು ಕ್ಷೇತ್ರಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಸಾಧಿಸಿದ್ದು ಎಲ್ಲಾ ನಾಲ್ಕು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ದಟ್ಟವಾಗಿದೆ.

No Comments

Leave A Comment