ಉಡುಪಿ: ರಸ್ತೆ ಅಪಘಾತದಲ್ಲಿ ಆರ್ಎಸ್ಎಸ್ ಮುಖಂಡ ಸಾವು!....ಅಕ್ಟೋಬರ್ 28ರಂದು ಆಂಧ್ರ ಕರಾವಳಿಗೆ 'ಅರ್ನಾಬ್' ಚಂಡಮಾರುತ, ತೀವ್ರ ಸ್ವರೂಪ, 3 ದಿನ ಮಳೆ ಸಾಧ್ಯತೆ IMD...
ಮಾಜಿ ಸಚಿವ, ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ ನಿಧನ
ಬೈಲಹೊಂಗಲ: ಮಾಜಿ ಸಚಿವ ಹಾಗೂ ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ ಅವರು ಶುಕ್ರವಾರ ನಿಧನರಾಗಿದ್ದಾರೆ.
ಜನತಾ ದಳ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವರಾಗಿ ಅವರು ಸೇವೆ ಸಲ್ಲಿಸಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ಅವರು, ಕೆಎಲ್ಇ ಸಂಸ್ಥೆಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
ಶಿವಾನಂದ ಕೌಜಲಗಿ ಅವರು ಪತ್ನಿ ಹಾಗೂ ಪುತ್ರರಾದ ಶಾಸಕ ಮಹಾಂತೇಶ ಕೌಜಲಗಿ ಮತ್ತು ಕಾಂಗ್ರೆಸ್ ಮುಖಂಡ ಬಸವರಾಜ ಕೌಜಲಗಿ ಅವರನ್ನು ಅಗಲಿದ್ದಾರೆ. ಶನಿವಾರ ಬೆಳಗ್ಗೆ 11 ಗಂಟೆಗೆ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ.