ಉಡುಪಿ: ರಸ್ತೆ ಅಪಘಾತದಲ್ಲಿ ಆರ್ಎಸ್ಎಸ್ ಮುಖಂಡ ಸಾವು!....ಅಕ್ಟೋಬರ್ 28ರಂದು ಆಂಧ್ರ ಕರಾವಳಿಗೆ 'ಅರ್ನಾಬ್' ಚಂಡಮಾರುತ, ತೀವ್ರ ಸ್ವರೂಪ, 3 ದಿನ ಮಳೆ ಸಾಧ್ಯತೆ IMD...
ಪಂಜಾಬ್ ಚುನಾವಣೆ: ಎಎಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 40 ಮಂದಿಗೆ ಟಿಕೆಟ್, ಧುರಿಯಿಂದ ಭಗವಂತ್ ಮಾನ್ ಕಣಕ್ಕೆ
ಚಂಡೀಗಢ: ಆಮ್ ಆದ್ಮಿ ಪಕ್ಷವು (ಎಎಪಿ) ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಗಾಗಿ 40 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ. ಹಾಲಿ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಧುರಿ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಸ್ಪರ್ಧಿಸಲಿದ್ದಾರೆ.
ಎಎಪಿಯ ರಾಜಕೀಯ ವ್ಯವಹಾರಗಳ ಸಮಿತಿಯ (PAC) ಸಭೆಯ ನಂತರ, ತಮ್ಮ ಹೆಸರೂ ಸೇರಿದಂತೆ ಒಟ್ಟು 40 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಮುಖ್ಯಮಂತ್ರಿ ಮಾನ್ ತಿಳಿಸಿದ್ದಾರೆ.
ಪಂಜಾಬ್ ವಿಧಾನಸಭಾ ಚುನಾವಣೆ 2027ರ ಆರಂಭದಲ್ಲಿ ನಡೆಯಲಿದ್ದು, ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಮತದಾನ ನಡೆಯುವ ನಿರೀಕ್ಷೆಯಿದೆ.
117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯ ಐದು ವರ್ಷಗಳ ಅವಧಿಯು 2027ರ ಮಾರ್ಚ್ 16ರಂದು ಕೊನೆಗೊಳ್ಳಲಿದೆ.