ಉಡುಪಿಯ ಶ್ರೀಕೃಷ್ಣಮಠದಲ್ಲಿ ಜರಗಲಿರುವ ಲಕ್ಷದೀಪೋತ್ಸವಕ್ಕೆ ಭರದ ಸಿದ್ದತೆ-ಉತ್ಥಾನ ದ್ವಾದಶಿಯಿ೦ದ ಲಕ್ಷದೀಪೋತ್ಸವ ಆರ೦ಭ.....ನವೆ೦ಬರ್ 26ರ ಗುರುವಾರ ಲಕ್ಷದೀಪೋತ್ಸವ ಮತ್ತು 27ರ ಶುಕ್ರವಾರದ೦ದು ಓಕುಳಿಯು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪತ್ರಿಯ ವಾಡಿಕೆಯ೦ತೆ ಲಕ್ಷದೀಪೋತ್ಸವವು ಜರಗಲಿದೆ....

ಕೋರಮಂಗಲ: ರಸ್ತೆಯಲ್ಲೇ ಹೊತ್ತಿ ಉರಿದ BMTC ಬಸ್; ತಪ್ಪಿದ ದೊಡ್ಡ ಅನಾಹುತ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೋರಮಂಗಲದಲ್ಲಿ ಶನಿವಾರ ಬಿಎಂಟಿಸಿ ಬಸ್ಸೊಂದು ರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಮಧ್ಯಾಹ್ನ ತಾವರೆಕೆರೆ ಜಂಕ್ಷನ್ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ದಟ್ಟ ಹೊಗೆ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಮತ್ತು ನಿರ್ವಾಹಕರು ತಕ್ಷಣ ಸಮಯ ಪ್ರಜ್ಞೆ ಮೆರೆದು ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಬಸ್‌ನಿಂದ ಕೆಳಗಿಳಿಸಿದ್ದಾರೆ.

ಮೊದಲು ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡ ಹೊಗೆಯು ಕೆಲವೇ ಕ್ಷಣಗಳಲ್ಲಿ ಬಸ್ ಅನ್ನು ಸಂಪೂರ್ಣವಾಗಿ ಆವರಿಸಿಕೊಂಡಿದೆ.

ಈ ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ತಾಂತ್ರಿಕ ದೋಷವೇ ಇದಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ.

No Comments

Leave A Comment