Arnab ಬಳಿಕ ಮತ್ತೊಂದು ಇರುಸು 'ಮುರಸು': ನ.3ರಂದು ಆಂಧ್ರ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ!.....ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು: ಸಚಿವ ಅಶ್ವಿನಿ ವೈಷ್ಣವ್ ಚಾಲನೆ... 'ನಂದಿನಿ ಹಾಲು ದರ 8 ಅಲ್ಲ, ಗರಿಷ್ಠ 12 ರೂ ಏರಿಕೆ'; ರೊಚ್ಚಿಗೆದ್ದ ಗ್ರಾಹಕರು...

ಉಡುಪಿಯಲ್ಲಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ

ಉಡುಪಿ: ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಉಡುಪಿ ಜಿಲ್ಲೆ ಇವರ ವತಿಯಿಂದ 71 ನೇ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ಭಾನುವಾರದ೦ದು ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.

ಕರ್ನಾಟಕ ಸರಕಾರದ ಮಾನ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಅವರು ಧ್ವಜಾರೋಹಣ ನೆರವೇರಿಸಿ, ಕರ್ನಾಟಕ ರಾಜ್ಯೋತ್ಸವದ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಯಶ್‌ಪಾಲ್ ಎ ಸುವರ್ಣ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

No Comments

Leave A Comment