Arnab ಬಳಿಕ ಮತ್ತೊಂದು ಇರುಸು 'ಮುರಸು': ನ.3ರಂದು ಆಂಧ್ರ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ!.....ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು: ಸಚಿವ ಅಶ್ವಿನಿ ವೈಷ್ಣವ್ ಚಾಲನೆ...
'ನಂದಿನಿ ಹಾಲು ದರ 8 ಅಲ್ಲ, ಗರಿಷ್ಠ 12 ರೂ ಏರಿಕೆ'; ರೊಚ್ಚಿಗೆದ್ದ ಗ್ರಾಹಕರು...
ಸ್ಟಿಂಗ್ ಆಪರೇಷನ್ ಕೇಸ್: ಕೃಪಾ ಆಳ್ವಾ ಸೇರಿ ಮೂವರಿಗೆ ಬಿಗ್ ರಿಲೀಫ್; ನಿರೀಕ್ಷಣಾ ಜಾಮೀನು ಮಂಜೂರು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಛಾಟಿತ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಸೇರಿದಂತೆ ಮೂವರಿಗೆ ಬೆಂಗಳೂರು ಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಹೆಸರು ಕೇಳಿಬಂದಿದ್ದು, ಮಹತ್ವದ ತಿರುವು ಪಡೆದುಕೊಂಡಿದೆ.
ಇದರ ಬೆನ್ನಲ್ಲೇ ಪ್ರಕರಣದ ಪ್ರಮುಖ ಆರೋಪಿಗಳಾಗಿರುವ ಕೃಪಾ ಆಳ್ವಾ, ವಿನೋದ್ ಕುಮಾರ್ ಹಾಗೂ ಪ್ರಶಾಂತ್ ಕುಮಾರ್ ಅವರಿಗೆ ಬೆಂಗಳೂರಿನ 66ನೇ ಸಿಸಿಹೆಚ್ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಿದೆ.
ತನಿಖಾಧಿಕಾರಿಗಳು(IO) ತನಿಖೆಗೆ ಕರೆದಾಗ ಆರೋಪಿಗಳು ತನಿಖೆಗೆ ಸಹಕರಿಸಬೇಕು. ಸಾಕ್ಷಿಗಳಿಗೆ ಯಾವುದೇ ರೀತಿಯ ಬೆದರಿಕೆ ಅಥವಾ ಪ್ರಭಾವ ಬೀರುವಂತಿಲ್ಲ ಎಂದು ಕೋರ್ಟ್ ಷರತ್ತು ವಿಧಿಸಿದೆ.
ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ ಅವರಿಗೆ ನೋಟಿಸ್ ನೀಡಿದರೂ ಪ್ರತಿಕ್ರಿಯಿಸಿರಲಿಲ್ಲ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರ ಸೂಚನೆ ಮೇರೆಗೆ ಕೃಪಾ ಆಳ್ವಾ ಅವರನ್ನ ಕಾಂಗ್ರೆಸ್‌ನಿಂದ ಉಚ್ಚಾಟನೆ ಮಾಡಲಾಗಿದೆ.