ಉಡುಪಿ: ನ.3ರಿಂದ ನ.7 ರವರೆಗೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ – ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ....ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗಿರುವ ಉದ್ಯೋಗಾವಕಾಶ ಮೌಲ್ಯಮಾಪನಕ್ಕೆ ಕರವೇ ಅಭಿಯಾನ.....

ಆರೋಗ್ಯದಲ್ಲಿ ಏರುಪೇರು: ಡಿಸ್ಚಾರ್ಜ್ ಆಗಿ ಮನೆಗೆ ಬಂದ ಕೆಲವೇ ಗಂಟೆಗಳಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಾದ ಶರದ್ ಪವಾರ್

ಮುಂಬೈ: ಅನಾರೋಗ್ಯಕ್ಕೆ ತುತ್ತಾಗಿ ಪುಣೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್‌ ಪವಾರ್ ಅವರು ಬುಧವಾರ ಬಿಡುಗಡೆಯಾಗಿದ್ದರು. ಆದರೆ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದರಿಂದ ಕೆಲವೇ ಗಂಟೆಗಳಲ್ಲಿ ಮುಂಬೈ ಆಸ್ಪತ್ರೆಯಲ್ಲಿ ಮತ್ತೆ ದಾಖಲಾಗಿದ್ದಾರೆ.

ಪವಾರ್ ಅವರ ಪುತ್ರಿ ಹಾಗೂ ಬಾರಾಮತಿ ಲೋಕಸಭಾ ಕ್ಷೇತ್ರದ ಸಂಸದೆ ಸುಪ್ರಿಯಾ ಸುಳೆ ಅವರು, ತಮ್ಮ ತಂದೆ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣವೊಂದರಲ್ಲಿ ತಿಳಿಸಿದ್ದಾರೆ.

ಇದಕ್ಕೂ ಮುನ್ನ, ಕೆಮ್ಮು ಮತ್ತು ಎದೆ ನೋವಿನ ಸಮಸ್ಯೆಯಿಂದಾಗಿ ನವೆಂಬರ್ 2 ರಂದು ಪುಣೆಯ ‘ರೂಬಿ ಹಾಲ್ ಕ್ಲಿನಿಕ್’ಗೆ ದಾಖಲಾಗಿದ್ದ 85 ವರ್ಷದ ಹಿರಿಯ ರಾಜಕಾರಣಿ ಶರದ್ ಪವಾರ್, ಬುಧವಾರ ಅಲ್ಲಿಂದ ಬಿಡುಗಡೆಗೊಂಡಿದ್ದರು.

ಪವಾರ್ ಅವರು ರೂಬಿ ಹಾಲ್ ಕ್ಲಿನಿಕ್‌ನಲ್ಲಿ ದಾಖಲಾಗಿದ್ದಾಗ, ಅವರಿಗೆ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿತ್ತು ಮತ್ತು ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿತ್ತು ಎಂದು ಸುಪ್ರಿಯಾ ಸುಳೆ ತಿಳಿಸಿದ್ದರು.

ಅಲ್ಲದೆ, ರೂಬಿ ಹಾಲ್ ಕ್ಲಿನಿಕ್‌ನಿಂದ ಬಿಡುಗಡೆಗೊಂಡ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪವಾರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು ಎಂದು ಪವಾರ್ ಅವರ ಆಪ್ತ ಸಹಾಯಕರು ತಿಳಿಸಿದ್ದಾರೆ.

No Comments

Leave A Comment