ದೀಪಾವಳಿಯನ್ನು ಉಡುಪಿಯ ಜನಪ್ರಿಯ ಬಲ್ಲಾಳ್ ಮೊಬೈಲ್ಸ್ ನೊಂದಿಗೆ ಆಚರಿಸಿ: ಗೆಲ್ಲಿರಿ ರೂ.25 ಲಕ್ಷಕ್ಕೂ ಅಧಿಕ ಮೌಲ್ಯದ ಆಕರ್ಷಕ ಬಹುಮಾನ, ವಿವೋ ಗ್ರಾಹಕರಿಗೂ ಕಾದಿದೆ ಬಂಪರ್ ಬಹುಮಾನಗಳ ಸುರಿಮಳೆ....
ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ ಬಂಧನ; 3.8 ಕೆ.ಜಿ. ಗಾಂಜಾ ಸಹಿತ ಕಾರು ವಶ
ಮಂಗಳೂರು : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 23 ವರ್ಷದ ಯುವಕನನ್ನು ಪಣಂಬೂರು ಪೊಲೀಸರು ಬಂಧಿಸಿದ್ದು, ಆತನಿಂದ ಸುಮಾರು 3 ಕೆ.ಜಿ. 800 ಗ್ರಾಂ ಗಾಂಜಾ ಸೇರಿದಂತೆ ಕಾರು ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.
ನವೆಂಬರ್ 5ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಕ್ರಾಸ್ ರೈಲ್ವೆ ಬ್ರಿಡ್ಜ್ ಬಳಿ ಗಾಂಜಾ ಮಾರಾಟ ಮಾಡಲು ತಂದಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಹಾಗೂ ಪಣಂಬೂರು ಪೊಲೀಸರು ಜಂಟಿಯಾಗಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಡ್ನೂರು ನಿವಾಸಿ ಮೊಹಮ್ಮದ್ ನಿಸಾರ್ (23) ಎಂದು ಗುರುತಿಸಲಾಗಿದೆ.
ವಶಪಡಿಸಿಕೊಂಡ ವಸ್ತುಗಳು:
3 ಕೆ.ಜಿ. 800 ಗ್ರಾಂ ಗಾಂಜಾ – ಅಂದಾಜು ಮೌಲ್ಯ ರೂ.1,90,000
ಒಂದು ಮೊಬೈಲ್ ಫೋನ್ –ರೂ. 4,000
ಗಾಂಜಾ ಸಾಗಾಟಕ್ಕೆ ಬಳಸಿದ ಕಾರು (KL 14 1662)
ರೂ.2,00,000 ಒಟ್ಟು ರೂ.3,94,000 ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಹಲವು ಪ್ರದೇಶಗಳಲ್ಲಿ ಗಾಂಜಾ ಮಾರಾಟ…
ಆರೋಪಿಯು ಸುರತ್ಕಲ್, ಪಣಂಬೂರು, ಕಾವೂರು ಸೇರಿದಂತೆ ಮಂಗಳೂರು ನಗರದ ಪ್ರಮುಖ ಪ್ರದೇಶಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದನೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಹಿಂದೆ ಕೂಡ ಹಲವು ಬಾರಿ ಮಂಗಳೂರು ನಗರದಲ್ಲಿ ಗಾಂಜಾ ಮಾರಾಟ ಮಾಡಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.ಹಡಗು ಕಾಯ್ದಿರಿಸಿ
ಈ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 137/2026ರಂತೆ NDPS ಕಾಯ್ದೆಯ ಕಲಂ 8(C), 20(b)(ii)(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.