.....ದೇಶದೆಲ್ಲೆಡೆಯಲ್ಲಿ ಸ೦ಭ್ರಮದ ದೀಪಾವಳಿ ಹಬ್ಬ...ಗೂಡುದೀಪ,ಸಿಹಿತಿ೦ಡಿ,ಹೊಸಬಟ್ಟೆ
ಯ ಖರೀದಿಯಲ್ಲಿ ನಾಡಿನ ಜನತೆ-ಎಲ್ಲೆಡೆಯಲ್ಲಿ ಪಟಾಕಿಯ ಸದ್ದು.......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ,ಓದುಗರಿ ಬೆಳಕಿನ ಹಬ್ಬ ದೀಪಾವಳಿಯು ಶುಭವನ್ನು೦ಟುಮಾಡಲಿ ಎ೦ದು ಕರಾವಳಿಕಿರಣ ಡಾಟ್ ಶುಭವನ್ನು ಕೋರುತ್ತಿದೆ....
ಹೆಜಮಾಡಿ ನಾರಾಯಣ ಎಸ್. ಪೂಜಾರಿ ನಿಧನ
ಪಡುಬಿದ್ರೆ: ನ.7: ಹೆಜಮಾಡಿಯ ಹಿರಿಯ ಕಾಂಗ್ರೆಸ್ ಮುಖಂಡ, ತಾಲೂಕು ಪಂಚಾಯತ್ ಮಾಜಿ ಸದಸ್ಯರೂ ಆಗಿರುವ ನಾರಾಯಣ ಪೂಜಾರಿ (78) ಇಂದು ಮುಂಜಾನೆ ನಿಧನಾದರು.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಕಾಪು ಕ್ಷೇತ್ರದ ಚಾಲಗೇಣಿ ರೈತರ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದ ಅವರು, 1970ರ ದಶಕದಲ್ಲಿ ಕಾಪು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಅಪಾರ ಶ್ರಮ ವಹಿಸಿದ್ದರು.
ಉಡುಪಿ ತಾಲೂಕು ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.