ಉಡುಪಿಯ ಶ್ರೀಕೃಷ್ಣಮಠದಲ್ಲಿ ಜರಗಲಿರುವ ಲಕ್ಷದೀಪೋತ್ಸವಕ್ಕೆ ಭರದ ಸಿದ್ದತೆ-ಉತ್ಥಾನ ದ್ವಾದಶಿಯಿ೦ದ ಲಕ್ಷದೀಪೋತ್ಸವ ಆರ೦ಭ.....ನವೆ೦ಬರ್ 26ರ ಗುರುವಾರ ಮತ್ತು 27ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪತ್ರಿಯ ವಾಡಿಕೆಯ೦ತೆ ಲಕ್ಷದೀಪೋತ್ಸವವು ಜರಗಿದೆ....

ಬೆಂಗಳೂರು: ಮಕ್ಕಳಾಗಿಲ್ಲವೆಂದು ಕಿರುಕುಳ ನೀಡುತ್ತಿದ್ದ ಗಂಡನನ್ನು ಚುಚ್ಚಿ ಕೊಂದ ಪತ್ನಿ

ಬೆಂಗಳೂರು: ಮಕ್ಕಳಾಗಿಲ್ಲವೆಂದು ಹೊಡೆದು ಬಡಿದು ಕಿರುಕುಳ ನೀಡುತ್ತಿದ್ದ ಪತಿಯನ್ನು ಪತ್ನಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನ ಕೆಂಪೇಗೌಡ ನಗರದ ಲಕ್ಷೀಪುರದಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ರಾಜಶೇಖರ್ (44) ಎಂದು ಗುರುತಿಸಲಾಗಿದ್ದು, ಪತಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತ್ನಿ ಮಾಲಾಶ್ರೀ(35)ಯನ್ನು ಬಂಧಿಸಲಾಗಿದೆ.

ಖಾಸಗಿ ಬ್ಯಾಂಕಿನ ಲೋನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ರಾಜಶೇಖರ್, ಪ್ರತಿದಿನ ರಾತ್ರಿ ಮದ್ಯದ ನಶೆಯಲ್ಲಿ ಮನೆಗೆ ಬಂದು ಪತ್ನಿಯೊಂದಿಗೆ ಜಗಳವಾಡುತ್ತಿದ್ದನು. ದಂಪತಿಗೆ ಮಕ್ಕಳಾಗಿರಲಿಲ್ಲ ಎಂಬ ಕಾರಣಕ್ಕೆ ಈ ವಿಷಯ ಮುಂದಿಟ್ಟುಕೊಂಡು ಆಗಾಗ ಗಲಾಟೆ ನಡೆಯುತ್ತಿತ್ತು. ಬೆಳಗ್ಗೆ ತುಂಬಾ ಚೆನ್ನಾಗಿ ನೋಡಿಕೊಳ್ತಿದ್ದ ಪತಿ ರಾತ್ರಿಯಾದರೆ ಸಾಕು ಕುಡಿದು ಬಂದು ಪತ್ನಿಗೆ ನಿತ್ಯವೂ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.

ನಿನ್ನೆ ರಾತ್ರಿಯೂ ಎಂದಿನಂತೆ ಕುಡಿದು ಬಂದ ರಾಜಶೇಖರ್ ಮಕ್ಕಳ ವಿಚಾರವಾಗಿ ಜಗಳ ತೆಗೆದಿದ್ದಾನೆ. ಆಕ್ರೋಶಗೊಂಡ ಮಾಲಾಶ್ರೀ, ಮನೆಯಲ್ಲಿದ್ದ ಅಡುಗೆ ಮನೆಯ ಚಾಕುವಿನಿಂದ ಪತಿಯ ಎದೆಗೆ ಚುಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾಳೆ. ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ರಾಜಶೇಖರ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಬಂಧ ಕೆಂಪೇಗೌಡ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

No Comments

Leave A Comment