ಉಡುಪಿಯ ಶ್ರೀಕೃಷ್ಣಮಠದಲ್ಲಿ ಜರಗಲಿರುವ ಲಕ್ಷದೀಪೋತ್ಸವಕ್ಕೆ ಭರದ ಸಿದ್ದತೆ-ಉತ್ಥಾನ ದ್ವಾದಶಿಯಿ೦ದ ಲಕ್ಷದೀಪೋತ್ಸವ ಆರ೦ಭ.....ನವೆ೦ಬರ್ 26ರ ಗುರುವಾರ ಮತ್ತು 27ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪತ್ರಿಯ ವಾಡಿಕೆಯ೦ತೆ ಲಕ್ಷದೀಪೋತ್ಸವವು ಜರಗಿದೆ....

ಮಂಗಳೂರು: ವ್ಯಕ್ತಿ ಅಪಹರಿಸಿ 1.15 ಕೋಟಿ ರೂ. ದರೋಡೆ; ಸಂಚಾರ ಪೊಲೀಸ್ ಸಿಬ್ಬಂದಿ ಸೇರಿ ಐವರ ಬಂಧನ

ಮಂಗಳೂರು: ವ್ಯಕ್ತಿಯೊಬ್ಬರನ್ನು ಅಪಹರಿಸಿ 1.15 ಕೋಟಿ ರೂ. ನಗದು ದರೋಡೆ ಮಾಡಿದ ಆರೋಪದ ಮೇಲೆ ಕಾರವಾರ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಸೇರಿದಂತೆ ಐವರನ್ನು ಉರ್ವ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಅಕ್ಟೋಬರ್ 28ರಂದು ಮಂಗಳೂರಿನ ಲಾಲ್‌ಬಾಗ್‌ನಲ್ಲಿ ಈ ಘಟನೆ ನಡೆದಿತ್ತು. ಬಂಧಿತರನ್ನು ಕಾಪು ಮೂಲದ ರಿಯಾಜ್, ಹಳಿಯಾಳದ ನಸ್ರುಲ್ಲಾ ಖಾನ್, ಕಾರವಾರದ ನಿತ್ಯಾನಂದ, ಫರಂಗಿಪೇಟೆಯ ಖಾಲಿದ್ ಮತ್ತು ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಶೈಲ್ ಎಂದು ಗುರುತಿಸಲಾಗಿದೆ. ಪ್ರಕರಣದ ಮತ್ತೊಬ್ಬ ಆರೋಪಿ ಕಾರವಾರದ ಗಣೇಶ್ ಕೋಳಂಕರ ತಲೆಮರೆಸಿಕೊಂಡಿದ್ದಾನೆ.

ದಾವಣಗೆರೆಯ ನಿವಾಸಿ ಸತ್ಯನಾರಾಯಣ ಎಂಬುವವರು ತಮ್ಮ ಮಾಲೀಕ ನಾಗರಾಜ್ ಶೆಟ್ ಅವರ ಸೂಚನೆಯಂತೆ ಮಂಗಳೂರಿಗೆ ಬಂದಿದ್ದರು. ನಾಗರಾಜ್ ಶೆಟ್ ಅವರು ದಾವಣಗೆರೆಯಲ್ಲಿ ಅಡಿಕೆ ತೋಟ ಹಾಗೂ ಆಭರಣ ಮಳಿಗೆಯನ್ನು ಹೊಂದಿದ್ದಾರೆ.

ಲಾಲ್‌ಬಾಗ್‌ನಲ್ಲಿ ಬಸ್‌ನಿಂದ ಇಳಿದ ಸ್ವಲ್ಪ ಸಮಯದಲ್ಲೇ ನಾಲ್ವರು ಅಪರಿಚಿತರು ಸತ್ಯನಾರಾಯಣ ಅವರನ್ನು ಅಪಹರಿಸಿದ್ದರು ಎನ್ನಲಾಗಿದೆ.

ಬಳಿಕ ಆರೋಪಿಗಳು ಸುಮಾರು ಒಂದು ಗಂಟೆ ಕಾಲ ನಗರದ ವಿವಿಧೆಡೆ ಕಾರಿನಲ್ಲಿ ಸುತ್ತಾಡಿಸಿ, ಕಾವೂರು ಗುಡ್ಡೆಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಅವರ ಬಳಿಯಿದ್ದ 1.15 ಕೋಟಿ ರೂ. ನಗದು ಹಾಗೂ ಮೊಬೈಲ್ ಫೋನ್ ಕಸಿದುಕೊಂಡು ಅವರನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದರು ಎಂದು ಆರೋಪಿಸಲಾಗಿದೆ.

ಸತ್ಯನಾರಾಯಣ ನೀಡಿದ ದೂರಿನ ಆಧಾರದ ಮೇಲೆ ಉರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ತನಿಖೆ ಮುಂದುವರಿದಿದ್ದು, ಮತ್ತೊಬ್ಬ ಆರೋಪಿ ಗಣೇಶ್ ಕೋಳಂಕರನಿಗಾಗಿ ಶೋಧ ನಡೆಸಲಾಗುತ್ತಿದೆ.

No Comments

Leave A Comment