ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದು, 2 ವಾರಗಳಲ್ಲಿ ಸೆಷನ್ಸ್ ಕೋರ್ಟ್‌ಗೆ ಶರಣಾಗುವಂತೆ ಸೂಚಿಸಿದೆ.ಡಾ.ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠ ಈ ಆದೇಶ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.
ಹೈಕೋರ್ಟ್ ನೀಡಿರುವ ಜಾಮೀನು ಮತ್ತು ಶಿಕ್ಷೆ ಅಮಾನತು ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಸಿಬಿಐ ಮತ್ತು ಮೃತ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೇ ಪ್ರಕರಣದಲ್ಲೀಗ ವಿನಯ್ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ಜಿಮ್‌ನಲ್ಲಿ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಅವರನ್ನು ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆ ಮಾಡಿತ್ತು.
ಆರಂಭದಲ್ಲಿ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಬಳಿಕ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು. ತನಿಖೆ ನಡೆಸಿದ ಸಿಬಿಐ, ಕೊಲೆಯ ಹಿಂದೆ ರಾಜಕೀಯ ದ್ವೇಷ ಹಾಗೂ ಸಂಚಿನ ಆರೋಪಗಳನ್ನು ಮುಂದಿಟ್ಟಿತ್ತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದಾರೆ.