ನವೆ೦ಬರ್ 26ರ ಗುರುವಾರ ಲಕ್ಷದೀಪೋತ್ಸವ ಮತ್ತು 27ರ ಶುಕ್ರವಾರದ೦ದು ಓಕುಳಿಯು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪತ್ರಿಯ ವಾಡಿಕೆಯ೦ತೆ ಲಕ್ಷದೀಪೋತ್ಸವವು ಜರಗಲಿದೆ....

ಶಿರ್ವ: ಹಲ್ಲೆ ನಡೆಸಿ ಚಿನ್ನಾಭರಣ ಸುಲಿಗೆ ಪ್ರಕರಣ; ಆರೋಪಿ ಪಡುಬೆಳ್ಳೆ ನಿವಾಸಿ ಮುರಳಿಕೃಷ್ಣ ಉಪಾಧ್ಯಾಯ ಸೆರೆ

ಉಡುಪಿ: ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ.

ಪಡುಬೆಳ್ಳೆ ನಿವಾಸಿ ಮುರಳಿಕೃಷ್ಣ ಉಪಾಧ್ಯಾಯ (47) ಬಂಧಿತ ಆರೋಪಿ. ಈತ ನ.24ರಂದು ರಾತ್ರಿ ಕುಂಜಾರುಗಿರಿ ದುರ್ಗಾದೇವಿ ದೇವಸ್ಥಾನದಲ್ಲಿ ದೀಪೋತ್ಸವ ಕಾರ್ಯಕ್ರಮಕ್ಕೆ ಹೋಗಿದ್ದ ರಾಜಮೂರ್ತಿ ಭಟ್(68) ಎಂಬವರನ್ನು ಮಾತನಾಡಲು ಇದೆ ಎಂದು ಹೇಳಿ, ದೇವಳದ ಹೊರಗೆ ಕರೆದುಕೊಂಡು ಹೋಗಿದ್ದನು.

ಬಳಿಕ ಆತನ ಕಾರಿನಲ್ಲಿ ಕುಳ್ಳಿರಿಸಿ ಭತ್ತದ ಬೇಸಾಯ 200 ಎಕರೆಗೆ ವಿಸ್ತರಿಸಲು 25 ಲಕ್ಷ ರೂ. ಹಣದ ಅವಶ್ಯಕತೆ ಇದ್ದು, ಸಹಾಯ ಮಾಡುವಂತೆ ಕೇಳಿದನು. ಇದಕ್ಕೆ ರಾಜಮೂರ್ತಿ ಭಟ್ ಒಪ್ಪಲಿಲ್ಲ. ಅದಕ್ಕೆ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರಗಳನ್ನು ದೋಚುವ ಉದ್ದೇಶದಿಂದ ಸುತ್ತಿಗೆಯಿಂದ ಹಲ್ಲೆ ಮಾಡಿ ಗಾಯಗೊಳಿಸಿದನು.

ಆಗ ರಾಜಮೂರ್ತಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಅವರನ್ನು ಬೆನ್ನಟ್ಟಿ ದೂಡಿ 4,50,000ರೂ. ಮೌಲ್ಯದ ಸುಮಾರು 20 ಗ್ರಾಂ ತೂಕದ ಚಿನ್ನದ ಸರ ಮತ್ತು 28 ಗ್ರಾಂ ತೂಕದ ತುಳಸಿ ಮಣಿ ಚಿನ್ನದ ಸರವನ್ನು ಕಿತ್ತು ಕಾರು ಸಮೇತ ಪರಾರಿಯಾದನು ಎಂದು ದೂರಲಾಗಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ನ.25ರಂದು ಬಂಧಿಸಿ, ತುಳಸಿ ಮಣಿಗಳು ಇರುವ ತುಂಡಾದ ಚಿನ್ನದ ಸರ ಮತ್ತು ತುಂಡಾದ ಹವಳದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ಕಾರನ್ನು ವಶ ಪಡಿಸಿ ಕೊಂಡಿದ್ದಾರೆ. ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

No Comments

Leave A Comment