Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶನಿವಾರ ಮತ್ತು ಭಾನುವಾರದ೦ದು ಸಮಾಜ ಬಾ೦ಧವರ ಮಕ್ಕಳಿಗೆ ಬೇಸಿಗೆ ಶಿಬಿರ ನಡೆಯಲಿದೆ....

ರಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ, ಕುಸ್ತಿಯಲ್ಲಿ ಸಾಕ್ಷಿಗೆ ಕಂಚು

Sakshiರಿಯೋ ಡಿ ಜನೈರೋ: ರಿಯೋ ಒಲಿಂಪಿಕ್ಸ್ ನಲ್ಲಿ ಕಂಚು ಪದಕ ಗೆಲ್ಲುವ ಮೂಲಕ ಕುಸ್ತಿಪಟು ಸಾಕ್ಷಿ ಮಲಿಕ್ ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದಾರೆ. 

58 ಕೆಜಿ ಫ್ರೀ ಸ್ಟೈಲ್ ಮಹಿಳೆಯರ ವಿಭಾಗದಲ್ಲಿ ಸಾಕ್ಷಿ ಮಲಿಕ್ ಕಿರ್ಗಿಸ್ತಾನದ ಐಸಿಲೂ ಟೈನೀಬೆಕೋವಾ ವಿರುದ್ಧ ಗೆಲ್ಲುವ ಮೂಲಕ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಮೊದಲ ಹಂತದಲ್ಲಿ 0-5 ಅಂಕಗಳಿಂದ ಹಿನ್ನಡೆ ಅನುಭವಿಸಿದ್ದ ಸಾಕ್ಷಿ ಮಲ್ಲಿಕ್ ಎರಡನೇ ಹಂತದಲ್ಲಿ ಅಮೋಘ ಪ್ರದರ್ಶನ ನೀಡಿ 8-5 ಅಂತರದ ಗೆಲವು ಸಾಧಿಸಿದರು. 

ಈ ಪಂದ್ಯಕ್ಕೂ ಮುನ್ನ ನಡೆದ ಪಂದ್ಯದಲ್ಲಿ ಸಾಕ್ಷಿ ಮಂಗೋಲಿಯಾದ ಅರ್ಕೋನ್ ಪುರುವ್ಡೇಜ್ ವಿರುದ್ಧ 12-03 ಅಂಕಗಳ ಅಂತರದಲ್ಲಿ ಗೆದ್ದ ಸಾಕ್ಷಿ ಮಲ್ಲಿಕ್ ಪದಕದ ಆಸೆ ಜೀವಂತವಾಗಿರಿಸಿದ್ದರು.

No Comments

Leave A Comment