Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶನಿವಾರ ಮತ್ತು ಭಾನುವಾರದ೦ದು ಸಮಾಜ ಬಾ೦ಧವರ ಮಕ್ಕಳಿಗೆ ಬೇಸಿಗೆ ಶಿಬಿರ ನಡೆಯಲಿದೆ....

ಬಿಜೆಪಿ ಕಾರ್ಯಕಾರಿಣಿ ಸಭೆ: ರಾಯಣ್ಣ ಬ್ರಿಗೇಡ್ ಬಗ್ಗೆ ಕೇಳಿದ ಪ್ರಶ್ನೆಗೆ ಬಿಎಸ್‍ವೈ ಸಿಡಿಮಿಡಿ

bjp_meetingಬೆಳಗಾವಿ: ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಇಂದು ಬೆಳಗಾವಿಯಲ್ಲಿ ಆರಂಭವಾಗಿದೆ. ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಕುಂದಾನಗರಿ ಬೆಳಗಾವಿಯಲ್ಲಿ ಸಭೆ ನಡೆಯಲಿದೆ.

ಇಂದು ಆರಂಭವಾದ ಸಭೆಗೆ ಬಿಜೆಪಿಯ ೩೫ ಕ್ಕೂ ಹೆಚ್ಚು ಶಾಸಕರು, ೨೦ ಕ್ಕೂ ಹೆಚ್ಚು ವಿಧಾನ ಪರಿಷತ್ ಸದಸ್ಯರು ಗೈರು ಹಾಜರಾಗಿದ್ದಾರೆ.

ಕೇಂದ್ರ ಸಚಿವ ಅನಂತಕುಮಾರ್ ಅವರು ನವದೆಹಲಿಗೆ ಹೋಗಿದ್ದರಿಂದ ಕಾರ್ಯಕಾರಿಣಿ ಸಭೆಗೆ ಆಗಮಿಸಿಲ್ಲ. ಅದೇ  ವೇಳೆ ವಿಧಾನ ಮಂಡಲ ಅಧಿವೇಶನ ಇರುವುದರಿಂದ ಹೆಚ್ಚಿನ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಕೂಡ ಭಾಗವಹಿಸಿಲ್ಲ.

ಸೋಮವಾರ ಬೆಳಗ್ಗೆ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್  ಕಾವೇರಿ ಪ್ರಕರಣ ನಿಭಾಯಿಸುವಲ್ಲಿ ರಾಜ್ಯ ಕಾಂಗ್ರೆಸ್ ವಿಫಲವಾಗಿದ್ದು, ಗೊಂದಲ ಸ್ಥಿತಿಯಲ್ಲಿದೆ ಎಂದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ಬಿಜೆಪಿ  ಮುಖಂಡರಾದ ಡಿ.ವಿ.ಸದಾನಂದಗೌಡ, ರಮೇಶ ಜಿಗಜಿಣಗಿ, ಶೋಭಾ ಕರಂದ್ಲಾಜೆ  ಇತರರು ಭಾಗಿಯಾಗಿದ್ದಾರೆ.

ಚುನಾವಣೆಗೆ ಕೇವಲ ೫೫೦ ದಿವಸ ಮಾತ್ರ ಬಾಕಿ ಇದೆ. ೨೨೪ ಕ್ಷೇತ್ರ ಸ್ಪರ್ಧೆ ಮಾಡಬೇಕಿದೆ. ಗೆಲ್ಲಬಹುದಾದ ೧೫೦ ಕ್ಷೇತ್ರಗಳನ್ನು ಗುರುತಿಸಿ ಅಲ್ಲಿ ದೊಡ್ಡ ದೊಡ್ಡ ಕಾರ್ಯಕ್ರಮಗಳನ್ನು ರೂಪಿಸಬೇಕಿದೆ. ಎಲ್ಲ ವಿಷಯಗಳ ಬಗ್ಗೆ ಇಂದು ನಾಳೆ ಚರ್ಚೆ ನಡೆಯಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಏತನ್ಮಧ್ಯೆ ಕೆ.ಎಸ್. ಈಶ್ವರಪ್ಪ ಅವರ ಕುರಿತು ಕೇಳಲಾದ ಪ್ರಶ್ನೆಗೆ ಯಡಿಯೂರಪ್ಪ ಸಿಡಿಮಿಡಿಗೊಂಡು ಉತ್ತರಿಸಲು ನಿರಾಕರಿಸಿದ್ದಾರೆ.

ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವೆ ಶೋಭಾ ಕರಂದ್ಲಾಜೆ, ಕಾವೇರಿ ನದಿಯಿಂದ ಯಾವುದೇ ಕಾರಣಕ್ಕೂ ನೀರು ಬಿಡಬಾರದು. ನಾರಿಮನ್ ನೇತೃತ್ವದ ವಕೀಲರ ತಂಡವನ್ನು ಬದಲಿಸಬೇಕು. ಕಾವೇರಿ ನದಿ ನೀರು ನಿರ್ವಹಣೆ ಮಂಡಳಿಯನ್ನು ಯಾವುದೇ ಕಾರಣಕ್ಕೂ ರಚಿಸಬಾರದು. ಎರಡೂ ರಾಜ್ಯಗಳಿಗೆ ಅಧಿಕಾರಿಗಳ ತಂಡವನ್ನು ಕಳುಹಿಸಿ ವಾಸ್ತವ ಪರಿಸ್ಥಿತಿಯ ವರದಿ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಅದೇ ವೇಳೆ ರಾಯಣ್ಣ ಬ್ರಿಗೇಡ್ ಕುರಿತ ಪ್ರಶ್ನೆಗೆ ನೋ ಕಾಮೆಂಟ್ಸ್ ಎಂದು ಶೋಭಾ ಹೇಳಿದ್ದಾರೆ.

ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಸದಾನಂದಗೌಡ ರಾಜ್ಯಕ್ಕೆ ನ್ಯಾಯ ದೊರೆಯುವ ವಿಶ್ವಾಸವಿದೆ. ನಾಳೆ ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ ನಡೆಯಲಿದ್ದು, ಕರ್ನಾಟಕದ ಪರ ತೀರ್ಪು ಬರುವ ವಿಶ್ವಾಸವಿದೆ. ಬೇರೆ ಪಕ್ಷದವರಂತೆ ಕೇವಲ ಮಾತನಾಡದೆ ಮಾಡಿ ತೋರಿಸಿದ್ದೇವೆ. ಅಂತ:ಕರಣ ಸಾಕ್ಷಿಯಾಗಿ ಈ ಪ್ರಯತ್ನ ಮಾಡಿದ್ದೇವೆ. ಕಾವೇರಿ ಐತೀರ್ಪು ಕುರಿತು ಲೋಧಾ ನ್ಯಾಯಪೀಠ ಎದುರು ಕರ್ನಾಟಕ ಅರ್ಜಿ ಸಲ್ಲಿಸಿರುವುದರಿಂದ ನೀರು ನಿರ್ವಹಣೆ ಮಂಡಳಿಯನ್ನು ರಚಿಸಲು ಬರುವುದಿಲ್ಲ ಎಂದಿದ್ದಾರೆ.

No Comments

Leave A Comment