Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶನಿವಾರ ಮತ್ತು ಭಾನುವಾರದ೦ದು ಸಮಾಜ ಬಾ೦ಧವರ ಮಕ್ಕಳಿಗೆ ಬೇಸಿಗೆ ಶಿಬಿರ ನಡೆಯಲಿದೆ....

ಪೆಟ್ರೋಲ್ ದರದಲ್ಲಿ 0.14 ರು, ಡೀಸೆಲ್ ದರ 0.10 ರು ಏರಿಕೆ

petrolನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಅಲ್ಪ ಪ್ರಮಾಣದ ಏರಿಕೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 0.14 ರು. ಹಾಗೂ ಡೀಸೆಲ್ ದರದಲ್ಲಿ 0.10 ರು ಏರಿಕೆಯಾಗಿದೆ  ಎಂದು ತಿಳಿದುಬಂದಿದೆನಿನ್ನೆ ಮಧ್ಯರಾತ್ರಿಯಿಂದಲೇ ನೂತನ ದರಗಳ ಜಾರಿಗೆ ಬಂದಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಸಂಸ್ಥೆ ತಿಳಿಸಿದೆ.

ಪೆಟ್ರೋಲ್ ಮತ್ತು ಡೀಸೆಲ್ ಡೀಲರ್ ಗಳ ಕಮಿಷನ್  ಏರಿಕೆಯೇ ಈ ನೂತನ ದರ ಏರಿಕೆಗೆ ಕಾರಣ ಎಂದು ಹೇಳಲಾಗುತ್ತಿದೆ. ಇತ್ತೀಚೆಗಷ್ಟೇ ಪ್ರಮುಖ ಡೀಲರ್ ಗಳು ಕಮಿಷನ್ ಏರಿಕೆ ಮಾಡುವಂತೆ ಆಗ್ರಹಿಸಿದ್ದರು. ಈ ಹಿನ್ನಲೆಯಲ್ಲಿ ದರ ಏರಿಕೆ  ಮಾಡುವ ಮೂಲಕ ಇಂಧನ ಸಂಸ್ಥೆಗಳು ಗ್ರಾಹಕರ ಜೇಬಿಗೆ ಕತ್ತರಿ ಹಾಕಿವೆ.ಇನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರುಪಾಯಿ ಮೌಲ್ಯದ ಏರಿಳಿಕೆ ಕೂಡ ದರ ಏರಿಕೆ ಕಾರಣ ಎಂದು ಹೇಳಲಾಗುತ್ತಿದೆ.

No Comments

Leave A Comment