Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶನಿವಾರ ಮತ್ತು ಭಾನುವಾರದ೦ದು ಸಮಾಜ ಬಾ೦ಧವರ ಮಕ್ಕಳಿಗೆ ಬೇಸಿಗೆ ಶಿಬಿರ ನಡೆಯಲಿದೆ....

ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿ ಜಯಾ ಆರೋಗ್ಯ ವಿಚಾರಿಸಿದ ರಜನಿಕಾಂತ್

rajani-jayaಚೆನ್ನೈ: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಭಾನುವಾರ ಚೆನ್ನೈನ ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆರೋಗ್ಯ ವಿಚಾರಿಸಿದ್ದಾರೆ.
ಇಂದು ಸಂಜೆ ತಮ್ಮ ಹಿರಿಯ ಪುತ್ರಿ ಐಶ್ವರ್ಯಾ ಅವರೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿದ ರಜನಿಕಾಂತ್ ಅವರು, ಅಲ್ಲಿನ ವೈದ್ಯರಿಂದ ಜಯಲಲಿತಾ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.
ಸೆ.22ರಿಂದ ಜಯಲಲಿತಾ ಅವರು ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆ ಮೂಲಗಳ ಪ್ರಕಾರ ತಮಿಳುನಾಡು ಸಿಎಂ ಇನ್ನೂ ತೀವ್ರ ನಿಗಾ ಘಟಕದಲ್ಲಿದ್ದು, ವೈದ್ಯರು ನಿರಂತರ ಚಿಕಿತ್ಸೆ ನೀಡುತ್ತಿದ್ದಾರೆ.
No Comments

Leave A Comment