Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶನಿವಾರ ಮತ್ತು ಭಾನುವಾರದ೦ದು ಸಮಾಜ ಬಾ೦ಧವರ ಮಕ್ಕಳಿಗೆ ಬೇಸಿಗೆ ಶಿಬಿರ ನಡೆಯಲಿದೆ....

ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ, 9 ಸಾವು, ಹಲವರಿಗೆ ಗಾಯ

shiva-kashiಚೆನ್ನೈ: ತಮಿಳು ನಾಡಿನ ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8 ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.

ಐದು ಮಹಿಳೆಯರು ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 15 ಕ್ಕೂ ಹೆಚ್ಚು ಮಂದಿಗೆ ತೀವ್ರಗಾಯಗಳಿಗಾಗಿದ್ದು, ಅವರನ್ನೆಲ್ಲಾ ಸ್ಥಲೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಮಧ್ಯಾಹ್ನ ಲಾರಿಯಲ್ಲಿದ್ದ ಪಟಾಕಿಯನ್ನು ಅನ್ ಲೋಡ್ ಮಾಡುವ ವೇಳೆ ಈ ದುರಂತ ಸಂಭವಿಸಿದೆ, ಕ್ಷಣ ಮಾತ್ರದಲ್ಲಿ ಆವರಿಸಿದ ಅಗ್ನಿಯ ಕೆನ್ನಾಲಗೆಗೆ 9 ಮಂದಿ ಬಲಿಯಾಗಿದ್ದಾರೆ.ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮ ಸಿಬ್ಬಂದಿ ಗಾಯಗೊಂಡವರನ್ನು ರಕ್ಷಿಸಿ ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ, ಇಬ್ಬರ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವರ್ಷದಲ್ಲಿ ಶಿವಕಾಶಿಯಲ್ಲಿ ನಡೆದ ಬಹುದೊಡ್ಡ ದುರಂತ ಇದಾಗಿದೆ. ಮಾಲೀಕರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

No Comments

Leave A Comment