Log In
BREAKING NEWS >
ಪುತ್ತಿಗೆಮಠದ ನೂತನ ಉತ್ತರಾಧಿಕಾರಿ ಸುಶ್ರೀ೦ದ್ರ ತೀರ್ಥಶ್ರೀಪಾದರಿ೦ದ ಶ್ರೀಕೃಷ್ಣಮಠ, ಶ್ರೀಅನ೦ತೇಶ್ವರ, ಚ೦ದ್ರಮೌಳೇಶ್ವರ ಮತ್ತು ಪುತ್ತಿಗೆ ಮಠಕ್ಕೆ ಸೋಮವಾರ ಸಾಯ೦ಕಾಲ ಭೇಟಿ...

ಅಕ್ರಮ ಗಣಿಗಾರಿಕೆ: ಕುಮಾರಸ್ವಾಮಿ, ಧರಂಸಿಂಗ್ ವಿರುದ್ಧ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ: ಅಕ್ರಮ ಗಣಿಗಾರಿಕೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಗಳಾದ  ಎಚ್.ಡಿ.ಕುಮಾರಸ್ವಾಮಿ ಮತ್ತು  ಧರಂಸಿಂಗ್ ಅವರ ವಿರುದ್ಧದ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ತನಿಖೆ ನಡೆಸಿ ಮೂರು ತಿಂಗಳ ಒಳಗೆ ವರದಿ ನೀಡುವಂತೆ ಎಸ್‌ಐಟಿಗೆ ಸೂಚಿಸಿದೆ.

ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಗೆ ಅವಕಾಶ ಕಲ್ಪಿಸಿರುವ ಆರೋಪ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮೇಲಿದೆ.

ಕುಮಾರ ಸ್ವಾಮಿ, ಧರಂಸಿಂಗ್ ಸೇರಿದಂತೆ ಹಿರಿಯ ಅಧಿಕಾರಿಗಳಾದ ವಿ.ಉಮೇಶ್, ಎಂ.ರಾಮಪ್ಪ ಹಾಗೂ ಗಂಗಾರಾಮ್ ಬಡೇರಿಯಾ  ಸೇರಿ 11 ಅಧಿಕಾರಿಗಳ ವಿರುದ್ಧವು  ತನಿಖೆ ನಡೆಯಲಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ತನಿಖೆಗೆ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.  ಇದರಿಂದ ಎಸ್‌.ಎಂ. ಕೃಷ್ಣ ನಿರಾಳರಾಗಿದ್ದಾರೆ.

ಅಕ್ರಮ ಗಣಿಗಾರಿಕೆ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

No Comments

Leave A Comment