Log In
BREAKING NEWS >
ಪುತ್ತಿಗೆಮಠದ ನೂತನ ಉತ್ತರಾಧಿಕಾರಿ ಸುಶ್ರೀ೦ದ್ರ ತೀರ್ಥಶ್ರೀಪಾದರಿ೦ದ ಶ್ರೀಕೃಷ್ಣಮಠ, ಶ್ರೀಅನ೦ತೇಶ್ವರ, ಚ೦ದ್ರಮೌಳೇಶ್ವರ ಮತ್ತು ಪುತ್ತಿಗೆ ಮಠಕ್ಕೆ ಸೋಮವಾರ ಸಾಯ೦ಕಾಲ ಭೇಟಿ...

ಸಚಿವ ಯು.ಟಿ.ಖಾದರ್ ವಿರುದ್ಧ FIR ದಾಖಲು!

ಮಂಗಳೂರು(ಮಾ.30): ಆಹಾರ ಸಚಿವ ಯು.ಟಿ.ಖಾದರ್ ಹಾಗೂ ಅವರ ಕಾರು ಚಾಲಕನ ವಿರುದ್ಧ FIR ದಾಖಲಾಗಿದೆ. ಕಳೆದ 27ರಂದು ಗುಂಡ್ಲುಪೇಟೆಯಲ್ಲಿ ಕಾರಿನಲ್ಲಿ ಕುಳಿತು ಹಣ ಹಂಚಿದ್ದಾರೆಂದು ಆಹಾರ ಸಚಿವ ಯು.ಟಿ.ಖಾದರ್ ವಿರುದ್ಧ ಆರೋಪ ಕೇಳಿಬಂದಿತ್ತು. ಈ ಸಂಬಂಧ ಮಾಧ್ಯಮಗಳು ವರದಿಯನ್ನು ಪ್ರಸಾರ ಮಾಡಿದ್ದವು.

ಮಾಧ್ಯಮಗಳ ವರದಿ ಆಧರಿಸಿ ಸಚಿವ ಖಾದರ್​​ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಈ ಸಂಬಂಧ ಚುನಾವಣಾಧಿಕಾರಿಗಳು ನ್ಯಾಯಾಲಯದ ಅನುಮತಿ ಪಡೆದು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

No Comments

Leave A Comment