Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶನಿವಾರ ಮತ್ತು ಭಾನುವಾರದ೦ದು ಸಮಾಜ ಬಾ೦ಧವರ ಮಕ್ಕಳಿಗೆ ಬೇಸಿಗೆ ಶಿಬಿರ ನಡೆಯಲಿದೆ....

RSS ಕಾರ್ಯಕರ್ತನ ಅಂತಿಮ ಯಾತ್ರೆ:ಕಲ್ಲು ತೂರಾಟ ;ಲಾಠಿ ಪ್ರಹಾರ

ಮಂಗಳೂರು: ಬಿ.ಸಿ.ರೋಡ್‌ನ‌ಲ್ಲಿ ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಶುಕ್ರವಾರ ರಾತ್ರಿ  ಕೊನೆಯುಸಿರೆಳೆದ ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌ ಮಡಿವಾಳ (28) ಅವರ ಪಾರ್ಥೀವ ಶರೀರವನ್ನು ಮೆರವಣಿಗೆಯ ಮೂಲಕ ಸಜಿಪ ಮುನ್ನೂರು ನಿವಾಸಕ್ಕೆ ಕೊಂಡೊಯ್ಯಲಾಗಿದೆ.

ಆಸ್ಪತ್ರೆಯ ಸಿಬಂದಿಗಳು ಸಂಬಂಧಿಕರ ವಶಕ್ಕೆ ನೀಡಿದ ಮೃತದೇಹಕ್ಕೆ ಮೈಸೂರು ಪೇಟ ತೊಡಿಸಿ , ಕೇಸರಿ ಶಾಲು ಹೊದಿಸಿ ಹೂವಿನಿಂದ ಅಲಂಕೃತ ಅಂಬುಲೆನ್ಸ್‌ನಲ್ಲಿ ಇರಿಸಿ ಮನೆಗೆ ಮೆರವಣಿಗೆಯ ಮೂಲಕ ಕೊಂಡೊಯ್ಯಲಾಗುತ್ತಿದೆ.

 

ನೂರಾರು ಸಂಘಪರಿವಾರದ ಕಾರ್ಯಕರ್ತರು, ಮುಖಂಡರು ಆಸ್ಪತ್ರೆಯ ಬಳಿ ಜಮಾವಣೆಗೊಂಡು ಅಮರ್‌ ರಹೇ ಶರತ್‌ ಎಂಬ ಘೋಷಣೆಗಳನ್ನು ಮೊಳಗಿಸಿರುವುದು ಕಂಡು ಬಂದಿತು.

ಬಂಟ್ವಾಳ ತಾಲೂಕಿನಾಧ್ಯಂತ ನಿಷೇಧಾಜ್ಞೆ ಜಾರಿಯಲ್ಲಿದ್ದು ಪರಿಸ್ಥಿತಿ ನಿಭಾಯಿಸಲು ಭಾರೀ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ. ಮೆರವಣಿಗೆ ತೆರಳುತ್ತಿರುವ ಆಯಕಟ್ಟಿನ ಪ್ರದೇಶಗಳಲ್ಲಿ ಹದ್ದಿನ ಕಣ್ಣು ಇರಿಸಲಾಗಿದೆ.

ಕಲ್ಲು ತೂರಾಟ 
ಮೆರವಣಿಗೆ ಸಾಗಿದ ಬಳಿಕ ಕಿಡಿಗೇಡಿಗಳು ಕೈಕಂಬ ಬಳಿ ಕಲ್ಲುತೂರಾಟ ನಡೆಸಿದ ಘಟನೆ ನಡೆದಿದ್ದು, ಈ ವೇಳೆ ಪೊಲೀಸರು ಲಾಟಿ ಪ್ರಹಾರ ನಡೆಸಿ ಉದ್ರಿಕ್ತರನ್ನು ಚದುರಿಸಿದ್ದಾರೆ. ಕಲ್ಲು ತಗುಲಿ ಓರ್ವ ಯುವಕನಿಗೆ ಗಂಭೀರ ಗಾಯವಾಗಿದ್ದು, ಕೆಲ ವಾಹನಗಳ ಗಾಜುಗಳು ಪುಡಿಯಾಗಿರುವ ಬಗ್ಗೆ ವರದಿಯಾಗಿದೆ. i

ಸಜೀಪ ನಿವಾಸದಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದ್ದು ಭಾರೀ ಸಂಖ್ಯೆಯಲ್ಲಿ ಜನ ಸೇರುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ಈಗಾಗಲೇ ಪೊಲೀಸರು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ.

ಸಜಿಪಮುನ್ನೂರು ಗ್ರಾಮದ ಮಡಿವಾಳಪಡುನಿವಾಸಿ ತನಿಯಪ್ಪ ಮಡಿವಾಳ ಅವರ ಪುತ್ರಶರತ್‌ ಮಂಗಳವಾರ ರಾತ್ರಿ ಬಿ.ಸಿ.ರೋಡ್‌ನ‌ಲ್ಲಿರುವ ತನ್ನ ಲಾಂಡ್ರಿ ಅಂಗಡಿಯನ್ನು ಬಂದ್‌ ಮಾಡುತ್ತಿದ್ದಾಗ ಬೈಕ್‌ನಲ್ಲಿ ಬಂದ ಮೂವರು ಮಾರಕಾಯುಧ ಗಳಿಂದ ಕಡಿದು ಚೂರಿಯಿಂದ ಇರಿದು ಪರಾರಿಯಾಗಿದ್ದರು.

No Comments

Leave A Comment