Log In
BREAKING NEWS >
ಪುತ್ತಿಗೆಮಠದ ನೂತನ ಉತ್ತರಾಧಿಕಾರಿ ಸುಶ್ರೀ೦ದ್ರ ತೀರ್ಥಶ್ರೀಪಾದರಿ೦ದ ಶ್ರೀಕೃಷ್ಣಮಠ, ಶ್ರೀಅನ೦ತೇಶ್ವರ, ಚ೦ದ್ರಮೌಳೇಶ್ವರ ಮತ್ತು ಪುತ್ತಿಗೆ ಮಠಕ್ಕೆ ಸೋಮವಾರ ಸಾಯ೦ಕಾಲ ಭೇಟಿ...

ಉಗ್ರರ ವಿರುದ್ಧ ಹೋರಾಡಲು ಗೋ ರಕ್ಷಕರನ್ನು ಕಳುಹಿಸಿ; ಬಿಜೆಪಿಗೆ ಠಾಕ್ರೆ

ಮಹಾರಾಷ್ಟ್ರ: ಅಮರನಾಥ ಯಾತ್ರಾರ್ಥಿಗಳ ಮೇಲೆ ಉಗ್ರರು ದಾಳಿ ನಡೆಸಿ ಹತ್ಯೆಗೈದಿರುವ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿಗೆ ತಿರುಗೇಟು ನೀಡಿರುವ ಮೈತ್ರಿಕೂಟದ ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ, ಕಣಿವೆ ರಾಜ್ಯದಲ್ಲಿ ಭಯೋತ್ಪಾದಕರ ವಿರುದ್ಧ ಹೋರಾಡಲು ಗೋ ರಕ್ಷಕರನ್ನು ಕಳುಹಿಸಿ ಎಂದು ಸಲಹೆ ನೀಡಿದ್ದಾರೆ!

ಹಿಂದೂಗಳ ಪವಿತ್ರ ಅಮರನಾಥ ಯಾತ್ರೆ ವೇಳೆ ಲಷ್ಕರ್ ಉಗ್ರರು ಏಕಾಏಕಿ ನಡೆಸಿದ ಗುಂಡಿನ ದಾಳಿಗೆ ಆರು ಮಹಿಳೆಯರು ಸೇರಿದಂತೆ 7 ಮಂದಿ ಯಾತ್ರಾರ್ಥಿಗಳು ಬಲಿಯಾಗಿದ್ದರು. 19 ಜನರು ಗಾಯಗೊಂಡಿದ್ದರು. ಇವರಲ್ಲಿ ಐದು ಮಂದಿ ಗುಜರಾತ್, ಇಬ್ಬರು ಮಹಾರಾಷ್ಟ್ರದವರು.

ಮುಂಬರುವ ಗಣೇಶೋತ್ಸವದ ಹಿನ್ನೆಲೆಯಲ್ಲಿ ವಿವಿಧ ಗಣೇಶೋತ್ಸವ ಸಮಿತಿ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ಗೋ ರಕ್ಷಕರ ವಿಚಾರವನ್ನು ಪ್ರಸ್ತಾಪಿಸಿ, ಕಣಿವೆ ರಾಜ್ಯದಲ್ಲಿ ಭಯೋತ್ಪಾದಕರ ವಿರುದ್ಧ ಹೋರಾಡಲು ಗೋ ರಕ್ಷಕರನ್ನು ಯಾಕೆ ಕಳುಹಿಸಬಾರದು ಎಂದು ಪ್ರಶ್ನಿಸಿರುವುದಾಗಿ ವರದಿ ತಿಳಿಸಿದೆ.

ಒಂದು ವೇಳೆ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ  ಸಮಸ್ಯೆ ಪರಿಹರಿಸುವ ನೆಲೆಯಲ್ಲಿ ಕಣಿವೆ ರಾಜ್ಯದ ಪ್ರತ್ಯೇಕತಾವಾದಿಗಳ ಜೊತೆ ಮಾತನಾಡುವುದಾದರೆ, ಅದೇ ರೀತಿ ಗಣೇಶೋತ್ಸವ ನಡೆಸುವ ಬಗ್ಗೆಯೂ  ನಿಸ್ಸಂದೇಹವಾಗಿ ಮಾತುಕತೆ ನಡೆಸಬಹುದು ಎಂದು ಠಾಕ್ರೆ ಹೇಳಿದರು.

No Comments

Leave A Comment