Log In
BREAKING NEWS >
ಮೇ 29ಕ್ಕೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ....ಮೇ 29ರಂದು ಮಂಡ್ಯದಲ್ಲಿ ಸ್ವಾಭಿಮಾನದ ವಿಜಯೋತ್ಸವ: ಸುಮಲತಾ ಅಂಬರೀಶ್....

ಮಂಗಳೂರಿನ ನಾಟೇಕಲ್ ಮಸೀದಿ ಮೇಲೆ ಕಲ್ಲು ತೂರಾಟ

ಮಂಗಳೂರು: ಇಲ್ಲಿನ ಉಳ್ಳಾಲ ಸಮೀಪದ ನಾಟೇಕಲ್‌ನಲ್ಲಿ ಸೋಮವಾರ ನಸುಕಿನಲ್ಲಿ ದುಷ್ಕರ್ಮಿಗಳು ‌ಮಸೀದಿಯೊಂದಕ್ಕೆ ಕಲ್ಲು ತೂರಿದ್ದಾರೆ.

ಘಟನೆಯಲ್ಲಿ ಮಸೀದಿಯ ಕಿಟಕಿ ಗಾಜುಗಳು ಒಡೆದು ಹೋಗಿವೆ. ಸಮೀಪದ ಅಂಗಡಿಯೊಂದರ ಸಿಸಿಟಿವಿ ಕ್ಯಾಮೆರಾಗಳನ್ನೂ ಕದ್ದೊಯ್ದಿದ್ದಾರೆ. ಆರೋಪಿಗಳಿಗೆ ಸಂಬಂಧಿಸಿದ ಒಂದು ಬೈಕ್‌ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭವಾಗಿದೆ.

No Comments

Leave A Comment