ಸನಾ: ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ನಿಮಿಷ ಪ್ರಿಯಾಗೆ ಅಧಿಕೃತವಾಗಿ ಶಿಕ್ಷೆಯನ್ನು ರದ್ದುಪಡಿಸಲಾಗಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿಯ ಹೇಳಿಕೆ ಖಚಿತಪಡಿಸಿದೆ. ತಿಂಗಳುಗಳ ಕಾಲ ಉನ್ನತ ಮಟ್ಟದ ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಯೆಮೆನ್‌ನ ರಾಜಧಾನಿ ಸನಾದಲ್ಲಿ ನಡೆದ ಕೊನೆಯ ಕ್ಷಣದ ಸಭೆಯ ನಂತರ
ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪ ಹೊತ್ತಿರುವ ಐವರು ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಹಲವು ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಬೆಂಗಳೂರಿನಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಎನ್ಎಚ್ಎಐ ವಿಭಾಗ ಹಾಸನದ ಕಾರ್ಯಪಾಲಕ ಎಂಜಿನಿಯರ್ ಜಯಣ್ಣ ಆರ್,
ಉಡುಪಿ: ಉಡುಪಿ ಇತಿಹಾಸ ಪ್ರಸಿದ್ಧ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶ್ರಾವಣ ಮಾಸದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವಕ್ಕೆ ಈ ಬಾರಿ 125ನೇ ವರ್ಷದಾಗಿದೆ.ಈಗಾಗಲೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಬೇಕಾಗುವ ಸಕಲ ಸಿದ್ದತೆಯನ್ನು ಬಿರುಸಿನಿ೦ದ ಮಾಡಲಾಗುತ್ತಿದೆ. ಮುಖ್ಯವಾಗಿ ಒ೦ದುವಾರಗಳ ಕಾಲ ಪೂಜೆ ನಡೆಯಲಿರುವ ಶ್ರೀವಿಠೋಬರಖುಮಾಯಿ ದೇವರ ಪೀಠವನ್ನು ಹಾಗೂ ಮೂರ್ತಿಯನ್ನು
ಬೆಂಗಳೂರು, (ಜುಲೈ 27): ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನೋರ್ವನ ಬರ್ಬರ ಹತ್ಯೆಗೈದಿರುವ ಘಟನೆ ಜಿಲ್ಲೆಯ ಬೆಂಗಳೂರು ದಕ್ಷಿಣ(ರಾಮನಗರ) ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಗ್ರಾಮದ ಡಾಬಾವೊಂದರ ಬಳಿ ನಡೆದಿದೆ. ಜಮೀನು ವಿವಾದ ಹಿನ್ನೆಲೆಯಲ್ಲಿ ನಾಲ್ಕೈದು ಜನರ ತಂಡ, ಡಾಬಾವೊಂದರಲ್ಲಿ ಪಾರ್ಟಿ ಮಾಡುತ್ತಿದ್ದ ನಂಜೇಶ್(45) ಎನ್ನುವರ ಮೇಲೆ ದಾಳಿ ಮಾಡಿ
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಆರು ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ಗರ್ವಾಲ್ ವಿಭಾಗ ಆಯುಕ್ತರು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಭಾರಿ ಜನಸಮೂಹ ಜಮಾಯಿಸಿ ಉಂಟಾದ ಕಾಲ್ತುಳಿತದಲ್ಲಿ 6 ಜನರು ಮೃತಪಟ್ಟಿದ್ದಾರೆ. ನಾನು ಸ್ಥಳಕ್ಕೆ
ಉಡುಪಿ:"ಭಗವಾನ್ ಶ್ರೀಕೃಷ್ಣನ ದಿವ್ಯ ಬೋಧನೆಗಳು ಕರ್ಮ, ಧರ್ಮ, ಭಕ್ತಿ, ಜ್ಞಾನ ಮತ್ತು ಸೇವೆಯನ್ನು ಸಮತೋಲನಗೊಳಿಸಲು ಜೀವನದಲ್ಲಿ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸುತ್ತವೆ. ಭಗವಾನ್ ಶ್ರೀಕೃಷ್ಣನ ಸಂದೇಶದಂತೆ ಧರ್ಮದ ಹಾದಿಯಲ್ಲಿ ನಡೆದು ಸಮಾಜ ಕಲ್ಯಾಣಕ್ಕೆ ಶ್ರಮಿಸೋಣ" ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು. ಜುಲೈ 25 ರಂದು ಉಡುಪಿ ಶ್ರೀಕೃಷ್ಣ
ಬೆಳ್ತಂಗಡಿ;ಜು. 26.ಧರ್ಮಸ್ಥಳ ಗ್ರಾಮದಲ್ಲಿ ವರ್ಷಗಳ ಹಿಂದೆ ವರದಿಯಾದ ನೂರಾರು ಮೃತದೇಹ ಹೂತಿಟ್ಟ ಸಾವಿನ ಪ್ರಕರಣಗಳ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಔಪಚಾರಿಕವಾಗಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಸತತ ಸಭೆಗಳನ್ನು ನಡೆಸುತ್ತಿದೆ.ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಂತಿ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿದೆ. ಪೊಲೀಸ್
ಉಡುಪಿ, ಜು. 26 : ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ಮುಖ್ಯ ದ್ವಾರದಲ್ಲಿ ಶನಿವಾರ ಮುಂಜಾನೆ 1.30ಗಂಟೆ ಸುಮಾರಿಗೆ ಕಳ್ಳತನ ನಡೆಸಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಸಾರ್ವಜನಿಕರು ಹಿಡಿದಿದ್ದಾರೆ. ದುಷ್ಕರ್ಮಿಗಳು ದೇವಸ್ಥಾನದ ಮುಂಭಾಗದ ಗೇಟ್‌ನ ಬೀಗ ಮುರಿಯಲು ಯತ್ನಿಸಿದ್ದು ಕರ್ತವ್ಯದಲ್ಲಿದ್ದ ಭದ್ರತಾ ಸಿಬ್ಬಂದಿಯೊಬ್ಬರು ಅವರನ್ನು ತಡೆದಾಗ ಅಲ್ಲಿಂದ ಪರಾರಿಯಾಗಿದ್ದಾರೆ. ಅವರ ಚಟುವಟಿಕೆಗಳಿಂದ ಸಂದೇಹಗೊಂಡ
ಪಣಜಿ: ಗೋವಾ ನೂತನ ರಾಜ್ಯಪಾಲರಾಗಿ ಮಾಜಿ ಕೇಂದ್ರ ಸಚಿವ ಅಶೋಕ್ ಗಜಪತಿ ರಾಜು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರು ಗಜಪತಿ ರಾಜು ಅವರಿಗೆ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಇತರ ಗಣ್ಯರು
ಬೆಂಗಳೂರು, ಜುಲೈ 26: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 5 ಐರಾವತ ಕ್ಲಬ್ ಕ್ಲಾಸ್ 2.0 ವೋಲ್ವೋ ಬಸ್ಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶುಕ್ರವಾರ ಚಾಲನೆ ನೀಡಿದ್ದಾರೆ. ಬಳಿಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನುಕಂಪದ ಆಧಾರದ ಮೇಲೆ ಕ.ರಾ.ಸಾ ಪೇದೆ ಹುದ್ದೆಗೆ