ಬೆಳಗಾವಿ: ಮಧ್ಯಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಸಂಭವಿಸಿದ ಅಪಘಾತದಲ್ಲಿ ಗೋಕಾಕ್ ನಗರದ ಆರು ಮಂದಿ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ ಗೌಡರ (50), ಸುನೀಲ್ ಶೇಡಶ್ಯಾಳೆ (45), ಬಸವರಾಜ್ ಕುರ್ತಿ (63), ಬಸವರಾಜ್ ದೊಡಮಾಳ್ (49), ಈರಣ್ಣ ಶೇಬಿನಕಟ್ಟಿ (27),
ಬೆಳಗಾವಿ: ಫೆ.23, ಕನ್ನಡ ಮಾತನಾಡಿ ಎಂದಿದ್ದಕ್ಕೆ ಮರಾಠಿಗರು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಂಡಕ್ಟರ್ ಮೇಲೆ ಮರಾಠಿಗರು ಸಹ ಕೆಲ ಆರೋಪಗಳನ್ನು ಮಾಡಿದ್ದು, ಈ ಸಂಬಂಧ ಕಂಡಕ್ಟರ್ ವಿರುದ್ಧ ಫೋಕ್ಸೊ ಪ್ರಕರಣ ದಾಖಲಾಗಿದೆ. ಇದರಿಂದ ಕನ್ನಡಿಗರು ಸಿಡಿದೆದಿದ್ದಾರೆ. ಇದರಿಂದ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ
ಬೆಂಗಳೂರು, ಫೆಬ್ರವರಿ 23: ಲೋಕಾಯುಕ್ತ ಡಿವೈಎಸ್ಪಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಸಿದ್ದಾರೆ. ವಜಾಗೊಂಡ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ ಮುರುಗಪ್ಪ ಬಂಧಿತ ಆರೋಪಿ. ಮುರುಗೆಪ್ಪ ವಿರುದ್ಧ ರಾಜ್ಯದ ವಿವಿಧ ಠಾಣೆಯಲ್ಲಿ 60ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಆರೋಪಿ ಮುರುಗಪ್ಪ ಲೋಕಾಯುಕ್ತ ಹೆಸರಿನಲ್ಲಿ ಅಧಿಕಾರಿಗಳಿಗೆ ಬ್ಲ್ಯಾಕ್ಮೇಲ್ ಮಾಡಿ
ಹಾಸನ, ಫೆಬ್ರವರಿ 23: ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಹೋಗುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಆನಗೋಳು ಗ್ರಾಮದ ಸುರೇಶ್ (60), ಕುಮಾರ್ (55) ಮೃತ ದುರ್ದೈವಿಗಳು. ಘಟನೆಯಲ್ಲಿ ಗಂಭೀರವಾಗಿ
ಬೀಜಿಂಗ್: ಕೋವಿಡ್ ಬಳಿಕ ಮತ್ತೊಂದು ಮಹಾಮಾರಿ ಆತಂಕ ಶುರುವಾಗಿದ್ದು, ಕೋವಿಡ್ ವೈರಸ್ ಪತ್ತೆಯಾಗಿದ್ದ ಅದೇ ಚೀನಾದಲ್ಲಿ ಇದೀಗ ಬಾವಲಿ ಮೂಲಕ ಮನಷ್ಯರಿಗೆ ಹರಡುವ HKU5-CoV-2 ಎಂಬ ವೈರಾಣು ಪತ್ತೆಯಾಗಿದೆ. ಹೌದು.. COVID-19 ಸಾಂಕ್ರಾಮಿಕ ರೋಗಕ್ಕೆ ಕಾರಣವಾದ ವೈರಸ್‌ನಂತೆಯೇ, ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಅಪಾಯವನ್ನು ಹೊಂದಿರುವ ಹೊಸ ಕೊರೊನಾವೈರಸ್ ಚೀನಾದಲ್ಲಿ ಪತ್ತೆಯಾಗಿದೆ. ಈ ಬಗ್ಗೆ
ನವದೆಹಲಿ: ಮಹಾ ಕುಂಭಮೇಳದಲ್ಲಿ ನೈರ್ಮಲ್ಯ ಸೌಲಭ್ಯಗಳು ಅಸಮರ್ಪಕವಾಗಿರುವುದರಿಂದ ಲಕ್ಷಾಂತರ ಜನ ಗಂಗಾ ನದಿಯ ದಡದಲ್ಲಿ ಬಯಲು ಮಲವಿಸರ್ಜನೆ ಮಾಡಲು ಕಾರಣವಾಗಿದೆ ಎಂಬ ಆರೋಪದ ಮೇಲೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(NGT) ಇತ್ತೀಚೆಗೆ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ನಿಪುನ್ ಭೂಷಣ್ ಎಂಬವರು ಉತ್ತರ ಪ್ರದೇಶ ಸರ್ಕಾರದಿಂದ 10 ಕೋಟಿ ರೂ.
ಹೈದರಾಬಾದ್: ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ) ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಶನಿವಾರ ಛಾವಣಿಯ ಒಂದು ಭಾಗ ಕುಸಿದು ಕನಿಷ್ಠ ಆರು ಕಾರ್ಮಿಕರು ಸಿಲುಕಿರುವ ಶಂಕೆ ಸಾಧ್ಯತೆಯಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ನಿರ್ಮಾಣ ಕಂಪನಿಯ ತಂಡ ಸುರಂಗದೊಳಗೆ ಹೋಗಿದ್ದು, ಪರಿಶೀಲಿಸುತ್ತಿದೆ ಎಂದು ಅವರು ಹೇಳಿದರು. ಕಂಪನಿ ನೀಡಿದ ಮಾಹಿತಿಯ ಪ್ರಕಾರ
ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲಿನ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರತಾಪ್ ಸಿಂಹ ವಿರುದ್ಧ ಮೈಸೂರು ಯುವ ಕಾಂಗ್ರೆಸ್ ಮುಖಂಡ ಸೈಯದ್ ಅಬ್ರರ್ ನೀಡಿದ ದೂರಿನ ಅನ್ವಯ ಉದಯಗಿರಿ
ಕಾರ್ಕಳ : ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಫೆ. 20 ರಂದು ತೀರ್ಥಹಳ್ಳಿ ತಾಲೂಕಿನ ಬೆಟ್ಟಮಕ್ಕಿಯ ಮನೆಯೊಳಗೆ ಪತ್ತೆಯಾಗಿದೆ. ಮೃತ ಯುವತಿಯನ್ನು ಶ್ರೀನಿಧಿ (24) ಎಂದು ಗುರುತಿಸಲಾಗಿದೆ. ಇವರು ಮೂಲತ: ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಕುದುರುನಬೆಟ್ಟು ನಿವಾಸಿಯಾಗಿದ್ದು, ಒಂದು ವರ್ಷದ ಹಿಂದೆ ಬೆಟ್ಟಮಕ್ಕಿಯ ಸುದೀಪ್ ಶೆಟ್ಟಿ ಜತೆ ವಿವಾಹವಾಗಿದ್ದರು.