ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟು ಮಹಿಳೆಯೊಬ್ಬರು ಮೊಬೈಲ್‌ ಖರೀದಿಸಿದ್ದು, ವಾಲ್‌ಪೇಪರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪೋಟೋ ಹಾಕಿಕೊಂಡು ಸಂತಸ ವ್ಯಕ್ತಪಡಿಸಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ಥಕತೆಯ ಮನೋಭಾವ ವ್ಯಕ್ತಪಡಿಸಿದ್ದಾರೆ. ಹಾವೇರಿ ಕಾಂಗ್ರೆಸ್‌ ಸಮಾವೇಶದಲ್ಲಿ ಮಹಿಳೆಯೊಬ್ಬರು ತಾವು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣ ಕೂಡಿಟ್ಟು ಮೊಬೈಲ್ ಖರೀದಿ ಮಾಡಿರುವುದಾಗಿ

ಬೆಂಗಳೂರು: ಹಾಸನ ಹಾಲಿ ಸಂಸದ ಪ್ರಜ್ವಲ್​ ರೇವಣ್ಣ ಮತ್ತು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಹೆಚ್​ಡಿ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಯಾರ ವಿರುದ್ಧವಾಗಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ. ಹೆಚ್ ಡಿ ರೇವಣ್ಣ ಮತ್ತು ಪ್ರಜ್ವಲ್

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ ಪ್ರಸಾದ್ (V Srinivasa Prasad) (76 ವ) ನಿಧನ ಹೊಂದಿದ್ದಾರೆ. ಮಧ್ಯರಾತ್ರಿ 1.20ರ ಸುಮಾರಿಗೆ ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಬಹು ಅಂಗಾಂಗ ವೈಫಲ್ಯದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸ

ವಾಷಿಂಗ್ಟನ್‌, ಏ. 27: ಅಮೇರಿಕಾದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗುಜರಾತ್‌ನ ಮೂವರು ಮಹಿಳೆಯರು ಮೃತಪಟ್ಟ ದಾರುಣ ಘಟನೆ ನಡೆದಿದೆ. ಗುಜರಾತಿನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನೀಶಾಬೆನ್ ಪಟೇಲ್ ಮೃತ ದುರ್ದೈವಿಗಳು. ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿ ಎಸ್‌ಯುವಿ ಕಾರು ಅಪಘಾತ ಸಂಭವಿಸಿದೆ. ಐ-85

ಪಡುಬಿದ್ರಿ: ನಂದಿಕೂರು ಗ್ರಾಮದ ಮುದರಂಗಡಿ ಜಂಕ್ಷನ್ ಬಳಿ ಶುಕ್ರವಾರ ಕೆಂಪು ಬಣ್ಣದ ವ್ಯಾಗನರ್ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿಯಾದುದರ ಪರಿಣಾಮವಾಗಿ ಅದರ ಚಾಲಕ ಪುರುಷೋತ್ತಮ ಆರ್.   ಅವರ ಪತ್ನಿ ಸುಮಂಗಲಾ (೫೫) ಸಾವನ್ನಪ್ಪಿದ್ದಾರೆ. ರಾಜ್ಯ ಹೆದ್ದಾರಿ-೦೧ರಲ್ಲಿ ಪಡುಬಿದ್ರಿ ಕಡೆಯಿಂದ ಕಾರ್ಕಳ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ

ಕಲಬುರಗಿ: ಕೇಂದ್ರ ಸರ್ಕಾರದಿಂದ ಬಿಡುಗಡೆಗೊಂಡಿರುವ ಬರ ಪರಿಹಾರ ಮೊತ್ತ ಬಹಳ ಕಡಿಮೆಯಾಗಿದೆ. ನಾವು ಕೇಳಿದ್ದು 18, 172 ಕೋಟಿ ರೂಪಾಯಿ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿನಲ್ಲಿಯೇ ಕೇಳಿದ್ದೆವು. ಕರ್ನಾಟಕದಲ್ಲಿ ಬರದಿಂದ ಆಗಿರುವ ಒಟ್ಟು ಬೆಳೆ ನಷ್ಟ 35 ಸಾವಿರ ಕೋಟಿ ರೂಪಾಯಿಗಳಷ್ಟು. ರಾಜ್ಯದ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಆಂಬುಲೆನ್ಸ್ ಡ್ರೈವರ್ʼನ ಅವಾಂತರದ ಚಾಲನೆಯಿಂದ ಸರಣಿ ಅಪಘಾತ ಸಂಭವಿಸಿರುವ ಘಟನೆ ಶುಕ್ರವಾರ ರಾತ್ರಿ 10.45ರ ಸುಮಾರಿಗೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ನಡೆದಿದೆ. ಸಿಟಿ ಮಾರ್ಕೆಟ್ ಕಡೆಯಿಂದ ಗುಡ್ಡದಹಳ್ಳಿ ಮಾರ್ಗವಾಗಿ ವೇಗವಾಗಿ ಬಂದ ಆ್ಯಂಬುಲೆನ್ಸ್ ಚಾಲಕ ನಿಯಂತ್ರಣ ತಪ್ಪಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ಬರೊಬ್ಬರಿ 1 ಕಿ.ಮೀ ವರೆಗೂ ರಸ್ತೆಗಳಲ್ಲಿನ ಭೂಮಿ ಮುಳುಗಡೆಯಾಗಿ 30ಮನೆಗಳು ಹಾನಿಗೊಳಗಾಗಿದೆ. ಗುರುವಾರ ಸಂಜೆಯಿಂದ ಜಮ್ಮು ಮತ್ತು ಕಾಶ್ಮೀರದ ರಂಬಾನ್-ಗೂಲ್ ರಸ್ತೆಯಲ್ಲಿ ಸುಮಾರು 1 ಕಿ.ಮೀ.ನಷ್ಟು ಪ್ರದೇಶದಲ್ಲಿ ಭೂಮಿ ಮುಳುಗಡೆಯಾಗಿದೆ. ಜಮ್ಮು ಮತ್ತು ಕಾಶ್ಮೀರದ ರಾಂಬನ್‌ನಿಂದ 6 ಕಿಮೀ

ಕೋಲ್ಕತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತುವಾಗ ಕಾಲು ಜಾರಿ ಬಿದ್ದಿದ್ದು, ಘಟನೆಯಲ್ಲಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಿಎಂ ಮಮತಾ ಬ್ಯಾನರ್ಜಿ ಅವರು ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತಿ ಸೀಟ್​​​ನಲ್ಲಿ ಕುಳಿತುಕೊಳ್ಳಲು ಹೋದಾಗ ಕಾಲು ಜಾರಿ ಬಿದ್ದಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ತಕ್ಷಣ ಅವರ ಬಳಿಗೆ

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರುಮಾಧ್ಯಮದವರು ಗೇಟಿನ ಹೊರಭಾಗದಲ್ಲಿ