ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ವಾರ್ಷಿಕೋತ್ಸವ ಪರ್ಯಾಯ ಉಭಯ ಶ್ರೀಪಾದರು ಹಾಗೂ ಭಂಡಾರಕೇರಿ ಮಠದ ಶ್ರೀ ವಿದ್ಯೇಶತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಬೆಳಿಗ್ಗೆ ರಥರೋಹಣ ಕಾರ್ಯಕ್ರಮವು ಜರಗಿತು.ಸ೦ಜೆ ರಥೋತ್ಸವವು ಜರಗಲಿದೆ.

ಉಡುಪಿ:ಭಾವಿ ಪರ್ಯಾಯ ಶೀರೂರು ಮಠದ ಪರ್ಯಾಯ ಪೂರ್ವ ಮುಹೂರ್ತಗಳಲ್ಲಿ ಪ್ರಥಮವಾದ ಬಾಳೆಮುಹೂರ್ತ ಡಿ. 6ರಂದು ಬೆಳಿಗ್ಗೆ 7 ಗಂಟೆಗೆ ವೃಶ್ಚಿಕ ಲಗ್ನ ಸುಹೂರ್ತದಲ್ಲಿ ನಗರದ ಪೂರ್ಣಪ್ರಜ್ಞ ಕಾಲೇಜು ಬಳಿಯ ಶೀರೂರು ಮಠದ ತೋಟದಲ್ಲಿ ನಡೆಯಲಿದೆ ಎಂದು ಶೀರೂರು ಮಠದ ದಿವಾನ ಡಾ. ಉದಯ ಸರಳತ್ತಾಯ ತಿಳಿಸಿದರು. ಸೋಮವಾರ ಪತ್ರಿಕಾ ಗೋಷ್ಠಿಯಲ್ಲಿ

ಮೈಸೂರು: ನಿರಂತರವಾಗಿ ಸುರಿದ ಮಳೆಗೆ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತಗೊಂಡಿದ್ದು, ಮಂಗಳವಾರ ಬೆಳಿಗಿನ ಜಾವ ರಸ್ತೆಗೆ ಬಂಡೆಯೊಂದು ಉರುಳಿ ಬಿದ್ದಿದೆ. ಮುಂಜಾನೆಯಾದ್ದರಿಂದ ಯಾರಿಗೂತೊಂದರೆಯಾಗಿಲ್ಲ. ಸೋಮವಾರ ಇಡೀ ದಿನ ನಿರಂತರವಾಗಿ ಮಳೆ ಸುರಿದಿದೆ. ಇರಿಂದ ಸಣ್ಣ ಗುಡ್ಡ ಕುಸಿದು ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಶ್ರೀನಗರ:ಡಿ.03,ಜಮ್ಮು ಮತ್ತು ಕಾಶ್ಮೀರದ ದಾಚಿಗಂ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಉಗ್ರರಿರುವ ಮಾಹಿತಿಯ ಹಿನ್ನೆಲೆ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಡಿ.01ರಂದು ಕಾರ್ಯಾಚರಣೆ ಪ್ರಾರಂಭವಾಗಿದ್ದು, ಇಂದು ಬೆಳಿಗ್ಗೆ ಓರ್ವ ಉಗ್ರ ಸಾವನ್ನಪ್ಪಿದ್ದಾನೆ. ದಾಚಿಗಂ ಅರಣ್ಯ

ಆಲಪ್ಪುಳ: ಕೇರಳದ ಆಲಪ್ಪುಳದಲ್ಲಿ ಸಾರಿಗೆ ಬಸ್‌ಗೆ ಕಾರು ಡಿಕ್ಕಿ ಹೊಡೆದು ಐವರು ಯುವಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಕಳರ್‌ಕೋಡ್ ಬಳಿ ಅವಘಡ ಸಂಭವಿಸಿದೆ. ಮೃತರು ಸರ್ಕಾರಿ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್‌ ವಿದ್ಯಾರ್ಥಿಗಳಾಗಿದ್ದಾರೆ. ಲಕ್ಷದ್ವೀಪ್‌ನ ದೇವಾನಂದನ್ ಮತ್ತು ಮುಹಮ್ಮದ್ ಇಬ್ರಾಹಿಂ , ಆಯುಷ್ ಶಾಜಿ,

ಚೆನ್ನೈ: ನಿಧಾನವಾಗಿ ಚಲಿಸುತ್ತಿರುವ ‘ಫೆಂಗಲ್’ ಚಂಡಮಾರುತ ವಿಲ್ಲುಪುರಂ ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯನ್ನುಂಟು ಮಾಡಿದೆ. ಶನಿವಾರ ರಾತ್ರಿಯಿಂದ ವಿಲ್ಲುಪುರಂ, ಪುದುಚೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ. ಇದರ ಪರಿಣಾಮವಾಗಿ ಕೇಂದ್ರಾಡಳಿತ ಪ್ರದೇಶದಲ್ಲಿ ದಾಖಲೆಯ 49 ಸೆಂ.ಮೀ ಮಳೆಯಾಗಿದೆ. ಇದು ಪುದುಚೇರಿ ಇತಿಹಾಸದಲ್ಲಿಯೇ ಅತ್ಯಧಿಕವಾಗಿದೆ ಮತ್ತು ವಿಲ್ಲುಪುರಂನಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದ್ದು,ಮೈಲಂನಲ್ಲಿನ

ಬೆಂಗಳೂರು: 2024 ರಲ್ಲಿ ರೈಲ್ವೆ ರಕ್ಷಣಾ ಪಡೆಯ ಮಕ್ಕಳ ಕಳ್ಳಸಾಗಣೆ ವಿರೋಧಿ ಘಟಕದಿಂದ 49 ಬಾಲಕಿಯರು ಸೇರಿದಂತೆ ಒಟ್ಟು 253 ಮಕ್ಕಳನ್ನು ಸಂಭಾವ್ಯ ಶೋಷಣೆಯಿಂದ ರಕ್ಷಿಸಲಾಗಿದೆ. ರೈಲಿನಲ್ಲಿ ಪ್ರಯಾಣಿಸುವ ದುರ್ಬಲ ಮಕ್ಕಳ ಸುರಕ್ಷತೆ ಖಾತ್ರಿ ನಿಟ್ಟಿನಲ್ಲಿ ಈ ವಿಶೇಷ ಪಡೆ, 'ನನ್ಹೆ ಫರಿಷ್ಟೆಯನ್ನು ('Nanhe Farishteh) ಮೇ 2018 ರಲ್ಲಿ

ಹೆಬ್ರಿ ತಾಲೂಕಿನ ನಾಡಪಾಲ್ ಗ್ರಾಮದ ಪೀತಬೈಲು ಎಂಬಲ್ಲಿ ನಡೆದ ನಕ್ಸಲ್ ನಾಯಕ ವಿಕ್ರಂ ಗೌಡನ ಎನ್‌ಕೌಂಟರ್ ಬಳಿಕ ನಕ್ಸಲರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಕಬ್ಬಿನಾಲೆ, ಮತ್ತಾವು, ನಾಡ್ಪಾಲು, ಪೀತಬೈಲು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಎನ್‌ಎಫ್ ಸಿಬ್ಬಂದಿ ತೀವ್ರ ನಿಗಾ ವಹಿಸಿದ್ದಾರೆ. ಹೆಬ್ರಿ ಪೊಲೀಸ್ ಠಾಣೆಯ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹೆಬ್ರಿ

ಕನ್ನಡದ ನಟಿ ಶೋಭಿತಾ ಶಿವಣ್ಣ ಅವರು ಇತ್ತೀಚೆಗೆ ಹೈದರಾಬಾದ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವು ಅನೇಕರಿಗೆ ಶಾಕಿಂಗ್ ಎನಿಸಿದೆ. ಮದುವೆ ಆಗಿ ಇನ್ನೂ ಎರಡು ವರ್ಷ ತುಂಬಿತ್ತಷ್ಟೇ. ಆಗಲೇ ಜೀವನ ಕೊನೆ ಮಾಡಿಕೊಳ್ಳುವ ನಿರ್ಧಾರಕ್ಕೆ ಅವರು ಬಂದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಹೈದರಾಬಾದ್​ನ ಗಚ್ಚಿಬೌಲಿ ಪೊಲೀಸರು ತನಿಖೆ ನಡೆಸಿದ್ದಾರೆ.

ಹಾಸನ, ಡಿಸೆಂಬರ್​ 02: ಚಾಲಕನ ನಿಯಂತ್ರ ತಪ್ಪಿ ಜೀಪ್ ರಸ್ತೆ ಬದಿಗೆ ಬಿದ್ದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಹರ್ಷವರ್ಧನ್ (26) ಚಿಕಿತ್ಸೆ ಫಲಕಾರಿಯಾಗದೆ ರವಿವಾರ (ಡಿಸೆಂಬರ್​ 01) ರಾತ್ರಿ 9.30ರ ವೇಳೆಗೆ ಮೃತಪಟ್ಟಿದ್ದಾರೆ. ಹಾಸನ ತಾಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿ ಜೀಪ್‌ ಪಲ್ಟಿಯಾಗಿತ್ತು. ಕರ್ತವ್ಯಕ್ಕೆ