ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಮಂಗಳೂರು: ಹಾಸನ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಯಾರ್ಡ್ ಮರುನಿರ್ಮಾಣಕ್ಕೆ ಅನುಕೂಲವಾಗಲು ನಾಳೆ ಡಿಸೆಂಬರ್ 14 ರಿಂದ 22ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವೆ ಹಲವು ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ರದ್ದುಗೊಳಿಸಿದೆ. ಡಿಸೆಂಬರ್ 11 ರಂದು ಪ್ರಧಾನ ಮುಖ್ಯ ಕಾರ್ಯನಿರ್ವಾಹಕ ವ್ಯವಸ್ಥಾಪಕರು, ರೈಲ್ವೆ ಸಚಿವಾಲಯವು ಡಿಸೆಂಬರ್ 14 ರಿಂದ ಡಿಸೆಂಬರ್ 18

ಉಡುಪಿ:ಡಿ,13.ಉಡುಪಿಯಲ್ಲಿ 2024 ಜನವರಿ ತಿಂಗಳಲ್ಲಿ ನಡೆಯಲಿರುವ ಉಡುಪಿ ಶ್ರೀ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವಕ್ಕೆ ಪರ್ಯಾಯ ಸಮಿತಿಯ,ಜಿಲ್ಲೆಯ ಶಾಸಕರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಇತರ ಗಣ್ಯರಿಗೆ ಭೇಟಿ ಮಾಡಿ ಆಹ್ವಾನವನ್ನು ನೀಡಿದರು. ಕಾರ್ಯಧ್ಯಕ್ಷರು ಹಾಗೂ ಉಡುಪಿ ನಿಕಟಪೂರ್ವ ಶಾಸಕರಾದ ಕೆ ರಘುಪತಿ ಭಟ್ ಅವರು ಉಡುಪಿ ಶ್ರೀ ಪುತ್ತಿಗೆ ಮಠದ

ಕಾಪು:ಡಿ13, ರಂಗಕರ್ಮಿ, ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ (68) ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ (59) ಆತ್ಮಹತ್ಯೆ ಶರಣಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಸರಳ ಸಜ್ಜನ ವ್ಯಕ್ತಿತ್ವದ ಲೀಲಾಧರ ಶೆಟ್ಟಿ ಒಮ್ಮೆ ಕಾಪು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು.‌ ಅತ್ಯುತ್ತಮ ನಾಟಕ ತಂಡ ಹೊಂದಿದ್ದರು. ಬಂಟರ

ಬೆಂಗಳೂರು: ದೇಶದಲ್ಲಿ ದುಷ್ಕೃತ್ಯ ನಡೆಸಲು ಉಗ್ರರು ಸಂಚು ನಡೆಸಿರುವ ಹಿನ್ನೆಲೆ ಎನ್ಐಎ ತನ್ನ ದಾಳಿಯನ್ನು ಮುಂದುವರೆಸಿದ್ದು, ಇಂದು ಬೆಳಗಿನ ಜಾವ ಬೆಂಗಳೂರಿನ ಒಟ್ಟು 6 ಕಡೆಗಳಲ್ಲಿ ದಾಳಿ ನಡೆಸಿ, ತೀವ್ರ ಪರಿಶೀಲನೆ ನಡೆಯುತ್ತಿದೆ. ಶಂಕಿತ ತಉಗ್ರ ನಸೀರ್ ನೀಡಿರುವ ಮಾಹಿತಿ ಮೇರೆಗೆ ಎನ್ಐಎ ಈ ದಾಳಿಯನ್ನು ನಡೆಸಿದೆ ಎಂದು ವರದಿಗಳಿಂದ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ 370 ನೇ ವಿಧಿಯಿಂದ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮತ್ತು ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ (UTs) ವಿಭಜಿಸುವ (J &K and Ladakh) ಕೇಂದ್ರದ ಆಗಸ್ಟ್ 5, 2019 ರ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (Chief

ಲಖನೌ: ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಭಾನುವಾರ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ರಾಜಕೀಯ ಉತ್ತರಾಧಿಕಾರಿ ಎಂದು ಘೋಷಿಸಿದ್ದಾರೆ ಎಂದು ಪಕ್ಷದ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಬಿಎಸ್‌ಪಿಯ ಷಹಜಹಾನ್‌ಪುರ ಜಿಲ್ಲಾ ಘಟಕದ ಮುಖ್ಯಸ್ಥ ಉದಯವೀರ್ ಸಿಂಗ್, ಆಕಾಶ್ ಆನಂದ್ ಅವರನ್ನು ತಮ್ಮ ಉತ್ತರಾಧಿಕಾರಿ

ಜಾಂಜ್‌ಗಿರ್: ಛತ್ತೀಸ್‌ಗಢದ ಜಾಂಜ್‌ಗಿರ್-ಚಂಪಾ ಜಿಲ್ಲೆಯಲ್ಲಿ ಭಾನುವಾರ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ನವವಿವಾಹಿತ ದಂಪತಿ ಮತ್ತು ಇತರ ಮೂವರು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಲ್ಮುಲಾ ಪೊಲೀಸ್ ಠಾಣಾ ವ್ಯಾಪ್ತಿಯ ಪಕರಿಯಾ ಜುಲಾನ್ ಗ್ರಾಮದ ಬಳಿ ಮುಂಜಾನೆ ಶಿವನಾರಾಯಣ ಪಟ್ಟಣದಲ್ಲಿ ದಂಪತಿ ವಿವಾಹ ಮುಗಿಸಿ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು

ರಾಯ್ಪುರ: ಛತ್ತೀಸ್ ಗಢದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಕೇಂದ್ರ ಸಚಿವ ವಿಷ್ಣುದೇವ್ ಸಾಯಿ ಆಯ್ಕೆಯಾಗಿದ್ದಾರೆ. ಬಿಜೆಪಿ ವೀಕ್ಷಕರ ಸಮ್ಮುಖದಲ್ಲಿ ನಡೆದ ಶಾಸಕರ ಸಭೆಯಲ್ಲಿ ಸಿಎಂ ಹುದ್ದೆಗೆ ವಿಷ್ಣುದೇವ್ ಸಾಯಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಶಾಸಕಾಂಗ ಸಭೆಯಲ್ಲಿ ಬಿಜೆಪಿ ಹೈಕಮಾಂಡ್ ಕಳಿಸಿದ್ದ ವೀಕ್ಷಕರ ತಂಡ ವಿಷ್ಣುದೇವ್ ಸಾಯಿ ಅವರ ಹೆಸರನ್ನು ಸೂಚಿಸಿದ್ದು, ಶಾಸಕರು ಅದನ್ನು

ನವದೆಹಲಿ: ಶ್ರೀ ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಇಬ್ಬರು ಶೂಟರ್‌ಗಳು ಸೇರಿದಂತೆ ಮೂವರನ್ನು ಚಂಡೀಗಢದಲ್ಲಿ ರಾಜಸ್ಥಾನ ಪೊಲೀಸರೊಂದಿಗೆ ಭಾನುವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ದೆಹಲಿ ಪೊಲೀಸರ ಅಪರಾಧ ವಿಭಾಗ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಡಿಸೆಂಬರ್ 5 ರಂದು

ಲಖನೌ: ಗುಟ್ಕಾ ಕಂಪನಿಗಳಿಗೆ ಜಾಹೀರಾತು ನೀಡಿರುವ ಸಂಬಂಧ ನಟರಾದ ಅಕ್ಷಯ್ ಕುಮಾರ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಅಲಹಾಬಾದ್ ಉಚ್ಛ ನ್ಯಾಯಾಲಯದ ಲಖನೌ ಪೀಠಕ್ಕೆ ತಿಳಿಸಿದೆ. ಸುಪ್ರೀಂ ಕೋರ್ಟ್‌ನಲ್ಲೂ ಇದೇ ವಿಷಯದ ವಿಚಾರಣೆ ನಡೆಯುತ್ತಿದ್ದು, ತ್ವರಿತವಾಗಿ ಅರ್ಜಿಯನ್ನು ವಜಾಗೊಳಿಸಬೇಕು ಎಂದು