ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ನಿನ್ನೆ ಮಂಗಳವಾರ ನೂತನ ರಾಜ್ಯಸಭಾ ಸದಸ್ಯ ಡಾ ಸೈಯದ್ ನಾಸಿರ್ ಹುಸೇನ್ ಅಭಿಮಾನಿಗಳು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ರಾಜಕೀಯ ಆರೋಪ-ಪ್ರತ್ಯಾರೋಪ ತೀವ್ರಗೊಂಡಿದ್ದು ಇಂದು ಬುಧವಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ತೀವ್ರ ಗದ್ದಲ-ಕೋಲಾಹಲ ಏರ್ಪಟ್ಟಿದೆ. ಈ ವಿಚಾರವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ,

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಸೋತಿದ್ದ ಕುಪೇಂದ್ರ ರೆಡ್ಡಿ ಅಲ್ಲ, ಎಚ್.ಡಿ.ಕುಮಾರಸ್ವಾಮಿ. ಮಾಜಿ ಮುಖ್ಯಮಂತ್ರಿಗಳ ಆತ್ಮ ವಿಶ್ವಾಸ, ಹೀಗೆಂದು ಹೇಳಲಾಗುತ್ತಿದೆ. ಚುನಾವಣೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುವಾಗ ಅವರ ಮುಖದ ಮೇಲೆ ಕೋಪ, ಆಕ್ರೋಶ, ಹತಾಶೆ ಎದ್ದು ಕಾಣುತ್ತಿತ್ತು. ರಾಜ್ಯ ಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕುಪೇಂದ್ರ ರೆಡ್ಡಿ ಕೇವಲ 36

ಮೈಸೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೆಲ್ಲುವ ಅಭ್ಯರ್ಥಿಗಳ ಪಟ್ಟಿ ಮಾಡಲು ಆರಂಭಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ಹಳೇ ಮೈಸೂರು ಭಾಗದಲ್ಲಿ ಗರಿಷ್ಠ ಸಂಖ್ಯೆಯ ಸೀಟುಗಳಿಸಿದ, ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳನ್ನು

ಹಾವೇರಿ: ಬೈಕ್​ಗೆ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಬಳಿಯ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ದಂಪತಿ ಹಾಗೂ ಇಬ್ಬರು ಮಕ್ಕಳು ಬೈಕ್ ನಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದರು. ಮೊಟೇಬೆನ್ನೂರು ಬಳಿ ವೇಗವಾಗಿ ಬಂದ ಲಾರಿ ಬೈಕ್

ಆಮ್ ಆದ್ಮಿ ಪಕ್ಷ ದೆಹಲಿ ಮತ್ತು ಹರಿಯಾಣ ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದೆ. ಪೂರ್ವ ದೆಹಲಿ – ಕುಲದೀಪ್ ಕುಮಾರ್ (ಶಾಸಕ) ನವದೆಹಲಿ – ಸೋಮನಾಥ್ ಭಾರತಿ (ಶಾಸಕ) ಪಶ್ಚಿಮ ದೆಹಲಿ – ಮಹಾಬಲ್ ಮಿಶ್ರಾ (ಮಾಜಿ ಕಾಂಗ್ರೆಸ್ ಸಂಸದ) ದಕ್ಷಿಣ ದೆಹಲಿ – ಸಾಹಿ ರಾಮ್ ಪಹಲ್ವಾನ್ (ಶಾಸಕ) ಹರಿಯಾಣ ಕುರುಕ್ಷೇತ್ರ – ಸುಶೀಲ್ ಗುಪ್ತಾ (ಮಾಜಿ

ಬೆಂಗಳೂರು, (ಫೆಬ್ರವರಿ 27): ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ (Karnataka rajyasabha Election) ನಾಲ್ಕು ಸ್ಥಾನಗಳಿಗೆ ನಡೆದ ಮತದಾನದ ಸಮಯ ಮುಕ್ತಾಯವಾಗಿದೆ. ಇಂದು (ಫೆಬ್ರವರಿ 27) ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ನಡೆದಿದ್ದ ಮತದಾನ ಇದೀಗ ಅಂತ್ಯವಾಗಿದ್ದು,  ಒಟ್ಟು 223 ಮತಗಳ

ಉಡುಪಿ: ಕಳೆದ ಎರಡು ಲೋಕಸಭಾ ಚುನಾವಣೆಯಲ್ಲಿ ಗೆದ್ದು ಸಂಸದೆಯಾಗಿ ಕೇಂದ್ರದ ಸಚಿವೆಯಾಗಿ ಆಯ್ಕೆಯಾದ ಶೋಭಾ ಕರಂದ್ಲಾಜೆ ರವರು ಸಂಪೂರ್ಣವಾಗಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಕಡೆಗಣಿಸಿ ಬೆಂಗಳೂರು ಮತ್ತು ದೆಹಲಿಯಲ್ಲಿ ಉಳಿದುಕೊಂಡು ರಾಜಕಾರಣ ಮಾಡಿದ್ದಾರೆ ಹೊರತು ಕ್ಷೇತ್ರದ ಅಭಿವೃದ್ಧಿಗೆ ತಮ್ಮ ಯಾವುದೇ ಕೊಡುಗೆಯನ್ನು ನೀಡಲಿಲ್ಲ ಇಂದ್ರಾಳಿಯ ರೈಲ್ವೆ ಬ್ರಿಡ್ಜ್

ಮಂಗಳೂರು: ಆಳ ಸಮುದ್ರ ಮೀನುಗಾರಿಕೆಯಲ್ಲಿ ರಿಬ್ಬನ್ ಮೀನು ಅಥವಾ ಪಾಂಬೋಲ್ ಮೀನು ಹಿಡಿಯುವುದಕ್ಕೆ ಸಂಬಂಧಿಸಿದಂತೆ ಘರ್ಷಣೆ ಉಂಟಾಗಿರುವುದು ಅಂತಾರಾಜ್ಯ ವಿವಾದಕ್ಕೆ ಕಾರಣವಾಗಿದೆ. ತಮಿಳುನಾಡಿನ ಮೀನುಗಾರರು ಮಂಗಳೂರು ಬೋಟ್ ಗಳ ಮೇಲೆ ದಾಳಿ ನಡೆಸಿದ್ದಾರೆ. ಅಕ್ರಮ ಮೀನುಗಾರಿಕೆ ಆರೋಪ: ತಮಿಳುನಾಡಿನ 18 ಮೀನುಗಾರರ ಬಂಧಿಸಿದ ಶ್ರೀಲಂಕಾ ನೌಕಾಪಡೆ ಮೀನುಗಳ ಸಂಖ್ಯೆ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ, ಊಟಕ್ಕೆ ಬಳಕೆ

ಕೋಟ: ಕೋಟದ ದಿನೇಶ್ ಗಾಣಿಗ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ನಲ್ಲಿ ಮೂರು ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಫೆ. 22 ರಿಂದ 25 ರ ತನಕ ಥೈಲ್ಯಾಂಡ್‌ನ ರಾಜಾಬಟಾ ಸ್ಟೇಡಿಯಂನಲ್ಲಿ ನಡೆದ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಒಂದು ಚಿನ್ನ, ಹಡಲ್ಸ್ ನಲ್ಲಿ ದ್ವೀತಿಯ,

ತುಮಕೂರು: ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯ ನಂತರ ಮೂವರು ಮಹಿಳೆಯರು ಮೃತಪಟ್ಟ ಪ್ರಕರಣದಲ್ಲಿ ಸ್ತ್ರೀರೋಗ ತಜ್ಞೆ ಹಾಗೂ ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಿ