ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ-2025 ರಲ್ಲಿ ವೈಮಾನಿಕ ಪ್ರದರ್ಶನದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಗುರುವಾರ ಸ್ವದೇಶಿ ನಿರ್ಮಿತ ತರಬೇತಿ ವಿಮಾನವಾದ HTT-40ಯಲ್ಲಿ ಹಾರಾಟ ನಡೆಸಿದರು. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(HAL) ನಿರ್ಮಿಸಿದ ವಿಮಾನದಲ್ಲಿ ತೇಜಸ್ವಿ ಸೂರ್ಯ ಸುಮಾರು 30 ನಿಮಿಷಗಳ ಕಾಲ ಹಾರಾಟ ನಡೆಸುವ ಮೂಲಕ ಗಮನ ಸೆಳೆದರು. ಬಳಿಕ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಸರ್ವೆ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ನಡೆದಿದೆ. ಮೂಡಿಗೆರೆ ಸರ್ವೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಶಿವಕುಮಾರ್‌ (45) ಅವರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ನೌಕರರ‌‌ ಸಂಘದ ನಿರ್ದೇಶಕರಾಗಿದ್ದ ಶಿವಕುಮಾರ್ ಅವರು ಮೂಡಿಗೆರೆ ಬಸ್ ನಿಲ್ದಾಣದ

ಬ್ರಹ್ಮಾವರ:ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ ಹಗರಣದ ವಿರುದ್ಧ ಕಳೆದ ಎರಡು ವರ್ಷಗಳಿಗೂ ಅಧಿಕ ಸಮಯದಿಂದ ವಿವಿಧ ರೀತಿಯಲ್ಲಿ ಹೋರಾಟ ನಡೆಸಿಕೊಂಡು ಬರುತ್ತಿರುವ ಕುಂದಾಪುರದ ಮಾಜಿ ಶಾಸಕವಿಧಾನಪರಿಷತ್ ನ ಮಾಜಿ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ ಅಧ್ಯಕ್ಷತೆಯ ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ಇಂದು ಬ್ರಹ್ಮಾವರ ವ್ಯವ ಸಾಯ ಸೇವಾ

ಮಂಗಳೂರು: ನಗರದಲ್ಲಿ ನಾಲ್ಕು ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಮಂಗಳೂರಿನ ಪಾನ್ ಮಸಾಲಾ,ಸುಪಾರಿ ಮತ್ತು ಇತರ ಗುಟ್ಕಾ ಉತ್ಪನ್ನಗಳ ವ್ಯವಹಾರಗಳನ್ನು ನಡೆಸುತ್ತಿರುವ ನಾಲ್ಕು ಟ್ರೇಡಿಂಗ್ ಕಂಪೆನಿಗಳ ಮೇಲೆ ಐಟಿ ಅಧಿಕಾರಿಗಳ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಟ್ರೇಡಿಂಗ್

ವಾಷಿಂಗ್ಟನ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ 2 ದಿನಗಳ ಯುಎಸ್ ಪ್ರವಾಸವನ್ನು ಬುಧವಾರ ಪ್ರಾರಂಭಿಸಿದ್ದು, ಜಾಯಿಂಟ್ ಆಂಡ್ರ್ಯೂಸ್ ಬೇಸ್‌ಗೆ ಬಂದಿಳಿದ ಅವರಿಗೆ ಅನಿವಾಸಿ ಭಾರತೀಯರು ಆತ್ಮೀಯ ಸ್ವಾಗತವನ್ನು ಕೋರಿದರು. ಅಮೆರಿಕಕ್ಕೆ ಬಂದಿಳಿದ ಬಳಿಕ ಮೋದಿ ಬ್ಲೇರ್ ಹೌಸ್‌ಗೆ ಭೇಟಿ ನೀಡಿದ್ದರು. ಇದೇ ವೇಳೆ ಭಾರತೀಯ ಸಮುದಾಯದವರು ಮೋದಿ ಅವರನ್ನು

ಮಂಗಳೂರು, ಫೆ.12: ಸಂತ ಅಲೋಶಿಯಸ್ ಯುನಿವರ್ಸಿಟಿಯ ಕಂಪ್ಯೂಟರ್ ಅನಿಮೇಶನ್ ಮುಖ್ಯಸ್ಥರಾದ ಸಂತೋಷ್ ನೋಟಗಾರ್ ಅವರು ಇಂಡೋನೇಷಿಯಾದ ಬಾಲಿಯಲ್ಲಿ ಫೆ.14 ರಿಂದ ಫೆ.16 ರವರೆಗೆ ನಡೆಯುವ ವಿಕಿ ಸೋರ್ಸ್ ಸಮ್ಮೇಳನಕ್ಕೆ ಆಯ್ಕೆಯಾಗಿದ್ದಾರೆ. ಪ್ರಸ್ತುತ ಅವರು ವಿಕಿಪೀಡಿಯ ಏಷ್ಯನ್ ಮಾಸಿಕದ ದಕ್ಷಿಣ ಏಷ್ಯಾದ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ನೇತೃತ್ವದಲ್ಲಿ ದಕ್ಷಿಣ ಏಷ್ಯಾದಲ್ಲಿ ಒಂದು

ಉಡುಪಿ:ಫೆ.12,:ನೇತ್ರಜ್ಯೋತಿ ಚಾರಿಟಬಲ್ ಟ್ರಸ್ಟ್ ಮತ್ತು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಅಂಗವಾದ ನೇತ್ರಜ್ಯೋತಿ ಸಂಸ್ಥೆಗಳ ಸ್ನಾತಕೋತ್ತರ ಕೇಂದ್ರದ ಉದ್ಘಾಟನಾ ಸಮಾರಂಭ ಮತ್ತು ನೇತ್ರಜ್ಯೋತಿ ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್‌ನ ಘಟಿಕೋತ್ಸವ ಸಮಾರಂಭವು 13, 2025, ಕಿನ್ನಿಮುಲ್ಕಿ

ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್​ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಶಾಂತಿನಗರದ ನಿವಾಸಿಗಳಾದ ಸುಹೇಲ್ ರಹಿಲ್ ಪಾಶಾ, ಅಯಾನ್ ಬಿನ್ ಜಬೀವುಲ್ಲಾ, ಗೌಸಿಯಾ ನಗರದ ಸೈಯದ್ ಸಾದಿಕ್ ಬಿನ್ ನವೀದ್, ಸತ್ಯನಗರದ ಇಜಾಜ್ ಬಿನ್ ಅಬ್ದುಲ್ ವಾಜೀದ್, ರಾಜೀವ್ ನಗರದ

ಕಲಬುರಗಿ: ಈಗಾಗಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಾಜ್ಯ ಕಾಂಗ್ರೆಸ್‌ ನಾಯಕರು ನಡುವೆ ಪೈಪೋಟಿ ಆರಂಭವಾಗಿದ್ದು, ಈ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಮಹತ್ವದ ಸುಳಿವು ನೀಡಿದ್ದಾರೆ. ಇಂದು ಕಲಬುರಗಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಶೀಘ್ರದಲ್ಲೇ ಕೆಲವು ರಾಜ್ಯಗಳಲ್ಲಿ ಅಧ್ಯಕ್ಷರ ಬದಲಾವಣೆ