ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾದಲ್ಲಿ ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ 12ನೇ ದಿನವಾದ ಗುರುವಾರವೂ ಮುಂದುವರೆದಿದ್ದು, ಕಾರ್ಮಿಕರನ್ನು ತಲುಪಲು ಇನ್ನು 12 ರಿಂದ 14 ಗಂಟೆ ತೆಗೆದುಕೊಳ್ಳುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಕಾರ್ಮಿಕರನ್ನು ಕರೆತರಲು ಮಾರ್ಗ ಸೃಷ್ಟಿಸುವ ಕೊರೆಯುವ ಯಂತ್ರಕ್ಕೆ ಅಡ್ಡ ಬಂದ ಕಬ್ಬಿಣದ
ಶ್ರೀಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾಪಡ ಮತ್ತು ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನ್ನಡಿಗ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದು, ಮತ್ತಿಬ್ಬರು ಯೋಧರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ರಜೌರಿಯ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ
ಬೆಂಗಳೂರು: ಜಾತಿ ಗಣತಿ ವರದಿ ಎಂದೇ ಜನಪ್ರಿಯವಾಗಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಪ್ರತಿ ನಾಪತ್ತೆಯಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಒಪ್ಪಿಕೊಂಡಿದ್ದಾರೆ. ವರದಿ ನಿಗೂಢವಾಗಿ ಕಣ್ಮರೆಯಾಗಿದೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯಲ್ಲಿ(New Indian Express) ಅಕ್ಟೋಬರ್ 6 ರಂದು ವರದಿ ಮಾಡಲಾಗಿತ್ತು.ಆಗ
ಟೆಲ್ ಅವಿವ್: ಹಮಾಸ್ ವಶದಲ್ಲಿರುವ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50 ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್ ಉಗ್ರರು ಒಪ್ಪಿಗೆ ನೀಡಿದ್ದು, ಇದಕ್ಕೆ ಪ್ರತಿಯಾಗಿ ಗಾಜಾದಲ್ಲಿ 4 ದಿನಗಳ ಕದನ ವಿರಾಮವನ್ನು ಇಸ್ರೇಲ್ ಅನುಮೋದಿಸಿದೆ. ಮಾತುಕತೆಯ ಮಧ್ಯಸ್ಥಿಕೆ ವಹಿಸಿರುವ ಕತಾರ್ ಮತ್ತು ಅಮೆರಿಕದ ಅಧಿಕಾರಿಗಳು, ಇಸ್ರೇಲ್ ಮತ್ತು ಹಮಾಸ್ ಒಪ್ಪಂದವು ಸನ್ನಿಹಿತವಾಗಿದೆ ಎಂದು
ಟೆಲ್ ಅವಿವ್: ಹಮಾಸ್ ವಶದಲ್ಲಿರುವ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50 ಒತ್ತೆಯಾಳುಗಳ ಬಿಡುಗಡೆ ಕುರಿತ ಮಾತುಕತೆಯ ಮಧ್ಯಸ್ಥಿಕೆ ವಹಿಸಿರುವುದನ್ನು ಕತಾರ್ ದೃಢಪಡಿಸಿದ್ದು, ಒತ್ತೆಯಾಳುಗಳ ಬಿಡುಗಡೆ ಕುರಿತ ಹಮಾಸ್-ಇಸ್ರೇಲ್ ಒಪ್ಪಂದವನ್ನು ಅಮೆರಿಕಾ ಸ್ವಾಗತಿಸಿದೆ. ಅಕ್ಟೋಬರ್ 7 ರಂದು ನಡೆಸಲಾದ ದಾಳಿಯಲ್ಲಿ ಹಮಾಸ್ ಬಂಡುಕೋರರು 240 ಮಂದಿ ಇಸ್ರೇಲಿಗರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದು,
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರೌಜರಿಯಲ್ಲಿ ಇಬ್ಬರು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ಆರಂಭಿಸಿದ್ದಾರೆ. ರಜೌರಿಯ ಕಲಕೋಟೆ ತಹಸಿಲ್‌ನ ಬಾಜಿ ಮಾಲ್ ಪ್ರದೇಶದಲ್ಲಿ ಭದ್ರತಾಪಡೆಗಳು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಇಬ್ಬರು ಉಗ್ರರು ಅಡಗಿ ಕುಳಿತಿದ್ದು,
ಮಂಗಳೂರು:ನ.22 : ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ ರಾಜ್ಯದ ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ನಿಗಮ, ಮಂಡಳಿಗಳ ಅಧ್ಯಕ್ಷರ ನೇಮಕಾತಿ, ಲೋಕಸಭಾ ಚುನಾವಣೆ ಕಡೆ ಗಮನ ಹರಿಸುತ್ತಿದೆ ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರನವರು ಆಕ್ಷೇಪಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ತಯಾರಿ
ಲಕ್ನೋ:ನ.22: ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಪರಾರಿಯಾದ ಪರಿಣಾಮ 9 ವರ್ಷದ ಬಾಲಕ ಮೃತಪಟ್ಟ ಘಟನೆ ಲಕ್ನೋದಲ್ಲಿ ನಡೆದಿದೆ. ಮೃತ ಬಾಲಕ ಉತ್ತರ ಪ್ರದೇಶ ಪೊಲೀಸ್‌ನ ವಿಶೇಷ ತನಿಖಾ ತಂಡದಲ್ಲಿ ಎಸ್‌ಐಟಿ ನೇಮಕಗೊಂಡಿರುವ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಶ್ವೇತಾ ಶ್ರೀವಾಸ್ತವ್ ಪುತ್ರನಾಗಿದ್ದಾನೆ. ಲಕ್ನೋದ ಗೋಮ್ತಿನಗರ ವಿಸ್ತಾರ್‌ನಲ್ಲಿರುವ ಜನೇಶ್ವರ
ಉಡುಪಿ: ರಾಜ್ಯದ ಮಾಜಿ ಮುಖ್ಯಮಂತ್ರಿಯಾದ ಮಾನ್ಯ ಕುಮಾರಸ್ವಾಮಿಯವರು ಒಬ್ಬ ಸುಳ್ಳ ಎಂಬುದು ಸಾಬೀತಾಗಿದ್ದು ಕೇವಲ ತನ್ನ ಆಸ್ತಿಯನ್ನು ಉಳಿಸಿಕೊಳ್ಳಲು ತನ್ನ ಸ್ವಂತ ಲಾಭಕ್ಕಾಗಿ ಏನ್ ಡಿ ಎ ಜೊತೆ ಶಾಮಿಲ್ಗಾಗಿ ಬಿಜೆಪಿಯ ನಾಯಕರ ಜೊತೆಗೂಡಿ ಕಾಂಗ್ರೆಸ್ ಪಕ್ಷದ ನಾಯಕರನ್ನು ದೂಷಿಸುತ್ತಿದ್ದಾರೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ
ಉಡುಪಿ: ಗೆಸ್ಟ್ ಹೌಸ್ ಒಂದರ ಗೇಟ್ ಕಳಚಿ ಬಿದ್ದು ಆಲ್ಲೇ ಆಟವಾಡುತ್ತಿದ್ದ ಮಗು ದಾರುಣವಾಗಿ ಪ್ರಾಣ ಕಳೆದುಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಕರೆಯಲ್ಲಿ ಘಟನೆ ನಡೆದಿದ್ದು ಸುಧೀರ್ ಮೊಗವೀರ ಅವರ ಪುತ್ರ ಸುಶಾಂತ್ (3) ಮೃತಪಟ್ಟ ಮಗು . ಪುಟ್ಟ ಮಗು ಸುಶಾಂತ್ ಪ್ರತಿನಿತ್ಯವೂ ಮನೆಯ