ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಉತ್ತರಕಾಶಿ(Uttarkashi)ಯಲ್ಲಿ ಸುರಂಗ ಮಾರ್ಗ ಕುಸಿದು 40 ಕಾರ್ಮಿಕರು ಅವಶೇಷಗಳ ಹಿಂಬದಿ ಸಿಲುಕಿಕೊಂಡಿದ್ದಾರೆ, 96 ಗಂಟೆಗಳು ಕಳೆದರೂ ಅವರ ರಕ್ಷಣೆ ಇನ್ನೂ ಸಾಧ್ಯವಾಗಿಲ್ಲ. ಕಾರ್ಮಿಕರಿಗೆ ಆಹಾರ, ಔಷಧಗಳ ಪೂರೈಕೆ ಮಾಡಲಾಗುತ್ತಿದೆ. ಬುಧವಾರ ಭೂಕುಸಿತ ಉಂಟಾದ ಹಿನ್ನೆಲೆ ರಕ್ಷಣಾ ಕಾರ್ಯ ವಿಳಂಬವಾಗಿದೆ. ಕಾರ್ಮಿಕರು ಹಾಗೂ ಅವರ ಕುಟುಂಬದವರು ಸುರಂಗದ ಎದುರು ಪ್ರತಿಭಟನೆ

ಟೆಲ್ ಅವೀವ್: ಹಮಾಸ್ ಉಗ್ರರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಇಸ್ರೇಲ್ ಸೇನೆ ಗಾಜಾದ ಮೂಲೆ ಮೂಲೆಯಲ್ಲೂ ಉಗ್ರರಿಗಾಗಿ ತೀವ್ರ ಶೋಧ ನಡೆಸುತ್ತಿದ್ದು, ಏತನ್ಮಧ್ಯೆ ಹಮಾಸ್ ಉಗ್ರ ಸಂಘಟನೆಯ ಮುಖಂಡನ ಮನೆಯನ್ನೇ ಇಸ್ರೇಲ್ ವಾಯುಸೇನೆ ಬಾಂಬ್ ಹಾಕಿ ಉಡಾಯಿಸಿದೆ. ಹೌದು.. ಹಮಾಸ್ ಉಗ್ರ ಸಂಘಟನೆಯ ಪ್ರಮುಖ ಉಗ್ರನೊಬ್ಬನ ಮನೆಯನ್ನೇ ಇಸ್ರೇಲ್‌ ಬಾಂಬಿಟ್ಟು ಧ್ವಂಸಗೊಳಿಸಿದೆ.

ಬೆಂಗಳೂರು: ಸಿಎಸ್ ಆರ್ ಫಂಡಿಂಗ್ ಬಗ್ಗೆ ನನ್ನ ಪುತ್ರ ಡಾ ಯತೀಂದ್ರ ಪ್ರಸ್ತಾಪಿಸಿದ್ದು ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ್ದಾರೆ. ಡಾ ಯತೀಂದ್ರ ಸಿದ್ದರಾಮಯ್ಯ ಮೊಬೈಲ್ ನಲ್ಲಿ ಮಾತನಾಡಿರುವ ವಿಡಿಯೊ ಮಾಧ್ಯಮಗಳಲ್ಲಿ ತೀವ್ರ ಸುದ್ದಿಯಾಗಿ ವಿರೋಧ ಪಕ್ಷಗಳು ಟೀಕಿಸುತ್ತಿರುವ ಸಂದರ್ಭದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಶಾಲೆಗಳನ್ನು ದುರಸ್ತಿ ಮಾಡಲಾಗುತ್ತಿದೆ.  ಅದಕ್ಕೆ ಸಿಎಸ್

ಪಾಟ್ನಾ: ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ಮಾಜಿ ಸೈನಿಕನಿಗೆ ಗುಂಡಿಕ್ಕಿ ಹತ್ಯೆಗೈದು ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂರನೇ ಆಪಾದಿತ ದಾಳಿಕೋರನನ್ನು ಸಹ ತೀವ್ರವಾಗಿ ಥಳಿಸಲಾಗಿದೆ. ಸದ್ಯ ಆತ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ. ಮೃತರನ್ನು ಮಾಜಿ

ಚಿತ್ರದುರ್ಗ: ನಗರದ ಹೊರವಲಯದಲ್ಲಿರುವ ಮುರುಘಾ ಮಠದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾ ಶ್ರೀ ಇಂದು ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಕಳೆದ 13 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾ ಮಠದ ಶಿವಮೂರ್ತಿ ಶರಣರು ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮುರುಘಾ ಶ್ರೀಗಳಿಗೆ

ಬೆಂಗಳೂರು: ದೀಪಾವಳಿ ಹಬ್ಬದ ನಿಮಿತ್ತ ನಗರದ ಜೆ.ಪಿ.ನಗರದಲ್ಲಿರುವ ತಮ್ಮ ಮನೆಗೆ ದೀಪಾಲಂಕಾರ ಮಾಡಲು ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಎಳೆದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬೆಸ್ಕಾಂ ಎಫ್ಐಆರ್ ದಾಖಲಿಸಿದೆ. ಕುಮಾರಸ್ವಾಮಿ ಅವರ ಮನೆಯನ್ನು ಪರಿಶೀಲಿಸಿದ ಬೆಸ್ಕಾಂ ಅಧಿಕಾರಿಗಳು ಏಳು ದಿನಗಳೊಳಗೆ 68,000

ಉಡುಪಿ:ನ,15: ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಗೃಹ ಸಚಿವ ಡಾ. ವಿ.ಎಸ್. ಆಚಾರ್ಯರವರ ನಿಕಟವರ್ತಿ, ಕುಂಜಿಬೆಟ್ಟು ಕಟ್ಟೆ ಆಚಾರ್ಯ ಮಾರ್ಗ ನಿವಾಸಿ ಕರಾಮತ್ ಆಲಿ ನಿಧನರಾಗಿದ್ದಾರೆ. ಪಕ್ಷದ ಅಲ್ಪಸಂಖ್ಯಾತ ಮೋರ್ಚಾದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಅಲ್ಪಸಂಖ್ಯಾತ ಸಮುದಾಯವನ್ನು ಬಿಜೆಪಿ ಜೊತೆ

ಉಡುಪಿ:ಮೂವರು ಮಕ್ಕಳು ಸೇರಿದಂತೆ ನಾಲ್ವರ ಬರ್ಬರ ಹತ್ಯೆ ಪ್ರಕರಣದ ತನಿಖೆಯಲ್ಲಿ ಪೊಲೀಸರು ಮಹತ್ವದ ಘಟ್ಟ ತಲುಪಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಹಾಗೂ ಫೋನ್ ಕರೆಗಳ ದಾಖಲೆಗಳ ಆಧಾರದ ಮೇಲೆ ಮಹಾರಾಷ್ಟ್ರದ ಸಾಂಗ್ಲಿ ಮೂಲದ ವ್ಯಕ್ತಿಯನ್ನು ಮಂಗಳವಾರ ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ವಶಕ್ಕೆ ಪಡೆದಿರುವ ಶಂಕಿತ ಆರೋಪಿ ಪ್ರವೀಣ್

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಇಂದು ಬುಧವಾರ ಅಧಿಕಾರ ಸ್ವೀಕರಿಸಿದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಪುತ್ರ ಬಿ ವೈ ವಿಜಯೇಂದ್ರ ಅವರು ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲ ಇದ್ದರೂ ಸರ್ಕಾರ ಯಾವುದೇ ಕ್ರಮವಿಲ್ಲ. ಬರಪೀಡಿತ ಜಿಲ್ಲೆಗಳಿಗೆ ಈವರೆಗೂ ಯಾವುದೇ ಸಚಿವರು ಭೇಟಿ

ದೋಡಾ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬುಧವಾರ ಪ್ರಯಾಣಿಕರ ಬಸ್ಸೊಂದು ರಸ್ತೆಯಿಂದ ಸ್ಕಿಡ್ ಆಗಿ ಸುಮಾರು 300 ಅಡಿ ಆಳದ ಕಮರಿಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇಂದು ಬೆಳಗ್ಗೆ