ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...

ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಮಂಗಳವಾರ ಬೆಳಗ್ಗೆ ನಡೆದ ಜೈನ ನಿರ್ವಾಣ ಉತ್ಸವದಲ್ಲಿ ವೇದಿಕೆ ಕುಸಿದು 5 ಮಂದಿ ಸಾವನ್ನಪ್ಪಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಜೈನ ಸನ್ಯಾಸಿಗಳ ಸಮ್ಮುಖದಲ್ಲಿ ಭಗವಾನ್ ಆದಿನಾಥನಿಗೆ ಲಡ್ಡೂಗಳನ್ನು ಅರ್ಪಿಸುವ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು

ಜನವರಿ 17 ರಂದು ನಡೆದ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಘೋಷಿಸಿದ್ದಾರೆ. ಮುರುಗಂಡಿ ತೇವರ್ (36); ಯೊಸೊವಾ ರಾಜೇಂದ್ರನ್ (35); ಕಣ್ಣನ್ ಮಣಿ (36); ಮತ್ತು ಮುರುಗಂಡಿ ತೇವರ್ ಅವರ ತಂದೆ ಷಣ್ಮುಗಸುಂದರಂ ಬಂಧಿತ ಆರೋಪಿಗಳು. ಇನ್ನೂ ನಾಲ್ವರು

ಬೆಂಗಳೂರು, (ಜನವರಿ 27): ಮೈಸೂರಿನ ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣ ಸಂಬಂಧ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ  ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್​ ಆದೇಶವನ್ನು ಕಾಯ್ದಿರಿಸಿದೆ. ಹಾಗೇ ಲೋಕಾಯುಕ್ತ ಪೊಲೀಸರ ಅಂತಿಮ ವರದಿ ಸಲ್ಲಿಕೆಗೆ ಗಡುವು ವಿಸ್ತರಣೆ ಮಾಡಿದ್ದು, ಆದೇಶ ಪ್ರಕಟಿಸುವವರೆಗೂ ಗಡುವು

ನವದೆಹಲಿ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನ ಅವರು 2024ರ ICC ವರ್ಷದ ಮಹಿಳಾ ಏಕದಿನ ಕ್ರಿಕೆಟ್ ಆಟಗಾರ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ ವರ್ಷ ಏಕದಿನ ಕ್ರಿಕೆಟ್​ನಲ್ಲಿ 13 ಇನ್ನಿಂಗ್ಸ್​ಗಳನ್ನು ಆಡಿದ್ದ ಮಂಧಾನ ನಾಲ್ಕು ಭರ್ಜರಿ ಶತಕಗಳ ಸಹಿತ ಒಟ್ಟು 747 ರನ್ ಕಲೆಹಾಕಿದ್ದರು. 2024ರಲ್ಲಿ ಅತಿ ಹೆಚ್ಚು

ಬೆಂಗಳೂರು:ಜ.27,ಸೋಮವಾರದ೦ದು ರಾಜ್ಯದ ಮುಖ್ಯಮ೦ತ್ರಿಗಳಾದ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ.

ಸುಳ್ಯ: ಜ.27, ಗಂಡಾನೆಯ ಮೃತದೇಹವೊಂದು ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಮತ್ತು ಕೇರಳ ಗಡಿ ಭಾಗದ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಎರ್ಕಲ್ಪಾಡಿಯಲ್ಲಿ ಭಾನುವಾರ ನಡೆದಿದೆ. ಮಂಡೆಕೋಲು ರಿಸರ್ವ್ ಫಾರೆಸ್ಟ್‌ನಲ್ಲಿ ಸ್ಥಳೀಯರಿಗೆ ಸುಮಾರು 50-55 ವರ್ಷ ಪ್ರಾಯದ ಕಾಡಾನೆ ಮೃತದೇಹ ಕಂಡುಬಂದಿದ್ದು, ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕಾದಾಟದಲ್ಲಿ

ಉಡುಪಿ: ಉಡುಪಿ ಕುಂಜಿಬೆಟ್ಟುವಿನ ರೆಸಿಡೆನ್ಸಿ ಶಾಲೆಗೆ ಬಾಂಬ್ ಬೆದರಿಕೆ ಬಂದಿದ್ದು ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶಾಲಾ ಕಟ್ಟಡವನ್ನು ತಪಾಸಣೆ ನಡೆಸುತ್ತಿದ್ದಾರೆ. ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಮೈದಾನದ ಸಮೀಪದ ಖಾಸಗಿ ಶಾಲೆಯ ಇಮೇಲ್ ಗೆ ಬಾಂಬ್ ಸ್ಪೋಟದ ಸಂದೇಶ ಬಂದಿದ್ದು, ಇದನ್ನು ಗಮನಿಸಿದ ಶಾಲೆಯವರು ಕೂಡಲೇ ಮಕ್ಕಳನ್ನು ಶಾಲೆಯಿಂದ

ಮೈಸೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದ ಪ್ರಕರಣಗಳು ತಾರಕ್ಕಕ್ಕೇರಿದ್ದು, ಪ್ರತಿದಿನ ಹಲವು ಘಟನೆಗಳು ಬೆಳಕಿಗೆ ಬರುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿವಿಧ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಚಿವರ ನೇತೃತ್ವದಲ್ಲಿ ಸಭೆ ನಡೆಸಿದರು, ಜನರಿಗೆ

ಪುಣೆ: ಪುಣೆಯಲ್ಲಿ ಶಂಕಿತ GB ಸಿಂಡ್ರೋಮ್‌ಗೆ ಮೊದಲ ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಚೀನಾ ವೈರಸ್ ಕೋವಿಡ್ ಹಾವಳಿ ಇನ್ನೂ ಸಂಪೂರ್ಣವಾಗಿ ತಣ್ಣಗಾಗಿಲ್ಲ.. ಅದಾಗಲೇ ಒಂದಿಲ್ಲೊಂದು ಆರೋಗ್ಯ ಸಮಸ್ಯೆಗಳು ಆಗಾಗ ಸುದ್ದಿಯಾಗುತ್ತಿವೆ. ಎಂಪಾಕ್ಸ್, ಹೆಚ್ ಎಂಪಿವಿ ವೈರಸ್ ಗಳ ಸುದ್ದಿ ಹಸಿರಾಗಿರುವಂತೆಯೇ ಇತ್ತ ಪುಣೆಯಲ್ಲಿ ಶಂಕಿತ

ಆಫ್ರಿಕನ್ ದೇಶ ನೈಜೀರಿಯಾದಲ್ಲಿ ತೈಲ ಟ್ಯಾಂಕರ್​ ಸ್ಫೋಟಗೊಂಡಿದ್ದು, 18 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ಸ್ಫೋಟದಿಂದಾಗಿ 17 ವಾಹನಗಳು ಸುಟ್ಟು ಭಸ್ಮವಾಗಿವೆ. ಟ್ರಕ್‌ನ ಬ್ರೇಕ್ ವಿಫಲವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ್ದ, ಇದರಿಂದಾಗಿ ಎಕ್ಸ್‌ಪ್ರೆಸ್‌ವೇಯಲ್ಲಿ ಸುಮಾರು 17 ವಾಹನಗಳಿಗೆ ಟ್ರಕ್ ಡಿಕ್ಕಿ ಹೊಡೆದಿದೆ. ಟ್ರೋಲ್ ತುಂಬಿದ ಟ್ಯಾಂಕರ್ ನಿಯಂತ್ರಣ