ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಉಡುಪಿ : ಮಾಜಿ ಶಾಸಕ ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್ ಗೆ ಒಂದು ವರ್ಷ ಜೈಲು ಮತ್ತು ದಂಡ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ. ಉಡುಪಿ ಜಿಲ್ಲಾ ಸಿಜೆಎಂ ನ್ಯಾಯಾಲಯದಿಂದ ಮಹತ್ವದ ಆದೇಶ ಎಂದು ತಿಳಿಯಲಾಗಿದೆ. ಮೋಸ, ವಂಚನೆ ,ನಕಲಿ

ಉಡುಪಿ :ನ.11, ಬಿ. ಜೆ. ಪಿ. ರಾಜ್ಯಾಧ್ಯಕ್ಷರಾಗಿ ಬಿ. ವೈ. ವಿಜಯೇಂದ್ರ ಆಯ್ಕೆ ಪಕ್ಷದ ಶಕ್ತಿಯನ್ನು ಇನ್ನಷ್ಟು ಗಟ್ಟಿಗೊಳಿಸಿದೆ. ಯುವ ನಾಯಕನಾಗಿ, ಕೊಟ್ಟ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿ ಉತ್ತಮ ಫಲಿತಾಂಶ ದಾಖಲಿಸಿದ ಹಿರಿಮೆ ಬಿ.ವೈ.ರಾಘವೇಂದ್ರ ಅವರಿಗೆ ಇದೆ. ಅವರ ನಾಯಕತ್ವದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿ.

ಬೆಂಗಳೂರು: ಬಹಳ ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ಬಿಜೆಪಿಗೆ ಸಂಬಂಧಪಟ್ಟಂತೆ ಬಹಳ ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ. ಸೂಕ್ತ ಸಮಯದಲ್ಲಿ ರಾಜ್ಯಾಧ್ಯಕ್ಷರ ನೇಮಕ ಮಾಡಿದ್ದಾರೆ. ವಿಜಯೇಂದ್ರ ನೇಮಕ ನಿರೀಕ್ಷೆಯಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿಜಯೇಂದ್ರ ನೇಮಕದ

ಬೆಂಗಳೂರು: ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿದ್ದು ಆಕಾಂಕ್ಷಿಗಳಲ್ಲಿ ಅಸಮಾಧಾನ ಕಟ್ಟೆ ಒಡೆಯುವಂತೆ ಮಾಡಿದೆ. ಪಕ್ಷದ ಹಿರಿಯರು, ಅನುಭವಿಗಳೂ ಆದ ನಮಗೇ ಪಕ್ಷದ ಸಾರಥ್ಯ ಸಿಗುತ್ತದೆ ಎಂದುಕೊಂಡಿದ್ದವರು ಈಗ ಬೇಸರಗೊಂಡಿದ್ದಾರೆ. ವಿಜಯೇಂದ್ರಗೆ ಪಕ್ಷದ ಸಾರಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಲು ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಸೋಮಣ್ಣ ನಿರಾಕರಿಸಿದ್ದು, ಮೌನವಾಗಿದ್ದರು. ವಿಜಯೇಂದ್ರ

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದಾದ್ಯಂತ ಶನಿವಾರ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಮಧ್ಯ ಕರ್ನಾಟಕದ ಜಿಲ್ಲೆಗಳಾದ ದಾವಣಗೆರೆ, ಚಿತ್ರದುರ್ಗ, ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ,

ಬೆಂಗಳೂರು: ಅಡುಗೆ ಮನೆಯನ್ನೇ ಡ್ರಗ್ಸ್ ತಯಾರಿಸುವ ಕಾರ್ಖಾನೆಯನ್ನಾಗಿ ಮಾಡಿಕೊಂಡಿದ್ದ ನೈಜೀರಿಯಾದ ಪ್ರಜೆಯನ್ನು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ನೈಜೀರಿಯಾ ಪ್ರಜೆ ಬೆಂಜಮಿನ್ ಅವಲಹಳ್ಳಿಯ ತನ್ನ ಮನೆಯ ಕಿಚನ್‌ನಲ್ಲಿ ಕಚ್ಚಾ ಪದಾರ್ಥ ಬಳಸಿಕೊಂಡು ಸ್ಟೌ ಮೇಲಿಟ್ಟು ಬೆಂಕಿ ಹೊತ್ತಿಸಿ, ದೋಸೆಯ ರೀತಿ ಮಾಡಿಕೊಳ್ತಿದ್ದ. ಆ ಬಳಿಕ

ಬೆಂಗಳೂರು: ಮಾತ್ರೆ ಹಾಗೂ ಒಳ ಉಡುಪಿನಲ್ಲಿ ಚಿನ್ನಭಾರಣ ಕಳ್ಳಸಾಗಣೆ ಮಾಡುತ್ತಿದ್ದ ಐವರನ್ನು ಬೆಂಗಳೂರು ವಿಮಾನ ನಿಲ್ದಾಣದ ಏರ್ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರಿಂದ 3.9 ಕೋಟಿ ರೂ. ಮೌಲ್ಯದ 5.135 ಕೆಜಿ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಎರಡು ದಿನದಲ್ಲಿ ಕುವೈತ್, ದುಬೈ, ಶಾರ್ಜಾ, ಮತ್ತು ಬ್ಯಾಂಕಾಕ್‍ನಿಂದ ಬೆಂಗಳೂರು ಅಂತರರಾಷ್ಟ್ರೀಯ

ಗೋರಖ್‌ಪುರ: ಜಗದೀಶ್‌ಪುರ ಸಮೀಪದ ಗೋರಖ್‌ಪುರ-ಕುಶಿನಗರ ಹೆದ್ದಾರಿಯಲ್ಲಿ ವೇಗವಾಗಿ ಬಂದ ಟ್ರಕ್‌ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ. ಐದು ಆಂಬ್ಯುಲೆನ್ಸ್‌ಗಳ ಸಹಾಯದಿಂದ ಗಾಯಾಳುಗಳನ್ನು ಜಿಲ್ಲಾಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಇಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ.

ನವದೆಹಲಿ: ಹೀರೋ ಮೋಟೋಕಾರ್ಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಪವನ್ ಕುಮಾರ್ ಮುಂಜಾಲ್ ವಿರುದ್ಧ ಜಾರಿ ನಿರ್ದೇಶನಾಲಯವು ಇಂದು ಧನ್ತೇರಸ್ ಮೇಲೆ ಮಹತ್ವದ ಕ್ರಮ ಕೈಗೊಂಡಿದೆ. ಮಾಹಿತಿಯ ಪ್ರಕಾರ, ಇಡಿ ದೆಹಲಿಯಲ್ಲಿರುವ ಪವನ್ ಮುಂಜಾಲ್ ಅವರ ಮೂರು ಆಸ್ತಿಗಳನ್ನು ವಶಪಡಿಸಿಕೊಂಡಿದೆ. ಇವರ ಬೆಲೆ ಸುಮಾರು 25 ಕೋಟಿ ಎಂದು ಹೇಳಲಾಗುತ್ತಿದೆ. ಮನಿ

ಮಂಗಳೂರು: ನಗರದಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಕೆ ಸಿ ರೋಡ್ ನ ರಾಷ್ಟ್ರೀಯ ಹೆದ್ದಾರಿ 66ರ ಬಳಿಯಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳು ಕೇರಳ ಮೂಲದ ಮುಸ್ತಫಾ (37)