ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆ ನಗರದ ವಾಯುಮಾಲಿನ್ಯ (Air pollution) ಮಟ್ಟವನ್ನು ಕೊಂಚ ಪ್ರಮಾಣದಲ್ಲಿ ತಗ್ಗಿಸಿದ್ದು, ಶನಿವಾರ ನಗರದಲ್ಲಿನ ವಾಯು ಗುಣಮಟ್ಟ (Air Quality Index) ಪ್ರಮಾಣ 19ಕ್ಕೆ ಇಳಿದಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಆಕ್ಯು ವೆದರ್ ವರದಿ ಮಾಡಿದೆ. ವಾಯುಮಾಲಿನ್ಯ (Air Pollution)ದ ವಿಚಾರವಾಗಿ ಸದಾ ಸುದ್ದಿಯಲ್ಲಿರುವ ದೇಶದ ರಾಜಧಾನಿ
ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಭಾರತ ಕ್ರಿಕೆಟ್ ತಂಡ ಅದ್ಭುತ ಪ್ರದರ್ಶನ ನೀಡಿ ಸೆಮಿ ಫೈನಲ್ಗೆ ಲಗ್ಗೆಯಿಟ್ಟಿರುವ ಸಂದರ್ಭ ದೊಡ್ಡ ಆಘಾತ ಉಂಟಾಗಿದೆ. ಗಾಯದಿಂದ ಬಳಲುತ್ತಿರುವ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಆಲ್ ರೌಂಡರ್ ಹಾಗೂ ಉಪನಾಯಕ ಹಾರ್ದಿಕ್ ಪಾಂಡ್ಯ ಅವರು ಗಾಯದಿಂದ
ದೇವಭೂಮಿ ದ್ವಾರಕಾ: ಕೃಷ್ಣಾನುಗ್ರಹವಿದ್ದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಶುಕ್ರವಾರ ಹೇಳುವ ಮೂಲಕ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಸುಳಿವು ನೀಡಿದ್ದಾರೆ. ಇಂದು ಬೆಳಗ್ಗೆ ಶ್ರೀಕೃಷ್ಣನ ಪ್ರಸಿದ್ಧ ದ್ವಾರಕಾಧೀಶ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಂಗನಾ, "ಶ್ರೀ ಕೃಷ್ಣ ಕಿ ಕೃಪಾ ರಹೀ ತೊ
ಮಂಗಳೂರು:ನ.3: ಜಿಲ್ಲೆಯಲ್ಲಿ ಮರಳುಗಾರಿಕೆ ಸ್ಥಗಿತಗೊಂಡು ಹಲವು ತಿಂಗಳುಗಳೇ ಕಳೆದಿವೆ. ಈ ಬಾರಿಯ ಸರ್ವೆಯಲ್ಲಿ ನೇತ್ರಾವತಿ ಹಾಗೂ ಫಲ್ಗುಣಿ ನದಿಯಲ್ಲಿ ಮರಳು ದಿಬ್ಬಗಳನ್ನು ಹೊಸದಾಗಿ ಗುರುತಿಸಿಲಾಗಿದೆ. ಈ ಕುರಿತ ವರದಿಯನ್ನು ಜಿಲ್ಲಾಡಳಿತದ ಹಂತದಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಪೂರೈಸಿ ವರದಿಯನ್ನು ಕೆಸಿಝಡ್‌ಎಂಎ ಗೆ ಕಳುಹಿಸಲಾಗಿದ್ದರೂ ನಿಗದಿತ ಸಮಯದೊಳಗೆ ಸಭೆ ನಡೆಸಿ
ಬೆಂಗಳೂರು: ತಮಿಳುನಾಡಿಗೆ ಮತ್ತೆ ನೀರು ಬಿಡುಗಡೆ ಮಾಡುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಆದೇಶಿಸಿದೆ. ದೆಹಲಿಯಲ್ಲಿಂದು ನಡೆದ ಸಭೆಯಲ್ಲಿ ನವೆಂಬರ್ 1ರಿಂದ 15ರ ತನಕ ನಿತ್ಯ 2,600 ಕ್ಯೂಸೆಕ್ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂಬ ಕಾವೇರಿ ನೀರು ನಿಯಂತ್ರಣಾ ಸಮಿತಿ ಆದೇಶವನ್ನು ಒಪ್ಪದ ಕರ್ನಾಟಕ, ತಮಿಳುನಾಡಿಗೆ
ಬೆಂಗಳೂರು: ಹಿಂದುಳಿದ ಕುರುಬ ಸಮುದಾಯದಿಂದ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ-ಆರ್ಥಿಕ ಜಾತಿ ಸಮೀಕ್ಷೆ ವರದಿಯನ್ನು ತಮ್ಮ ಸರ್ಕಾರ ಶೀಘ್ರದಲ್ಲೇ ಅಂಗೀಕರಿಸಲಿದೆ ಎಂದು ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಸಮುದಾಯದವರಾದ ಕೆ.ಎಸ್.ಈಶ್ವರಪ್ಪ, ಕೋಟಾ ಶ್ರೀನಿವಾಸ ಪೂಜಾರಿ ಮತ್ತು ಪಿಸಿ ಮೋಹನ್ ಅವರೊಂದಿಗೆ ಗುರುವಾರ ನವದೆಹಲಿಯಲ್ಲಿ
ಬೆಂಗಳೂರು: ನವೆಂಬರ್ : 03: ಪ್ರೈಮ್ ಟಿವಿ ನ್ಯೂಸ್ : ಮಹಿಳೆಯೊಬ್ಬರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎಎಲ್) ಶೌಚಾಲಯಕ್ಕೆ ಹೋಗುವ ಮುನ್ನ ಹೊರಗಿಟ್ಟಿದ್ದ ವಜ್ರದ ಉಂಗುರ, ಕಿವಿಯೋಲೆ ಹಾಗೂ ಒಂದು ಲಕ್ಷ ರೂ. ಹಣವಿದ್ದ ಬ್ಯಾಗ್ ನಾಪತ್ತೆಯಾಗಿರುವುದು ವರದಿಯಾಗಿದೆ. ಟರ್ಮಿನಲ್-1ರ ನಿರ್ಗಮನ ಗೇಟ್ ನಂಬರ್-1 ಸಮೀಪದ ಶೌಚಾಲಯದ ಬಳಿ
ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಚಿಕ್ಕಬಳ್ಳಾಪುರದಲ್ಲಿ ಮಾರಕ ಜಿಕಾ ವೈರಸ್ ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಹೈ ಅಲರ್ಟ್ ಹೊರಡಿಸಿದೆ. ಇತ್ತೀಚೆಗೆ ಕೇರಳದಲ್ಲಿ ಕಾಣಿಸಿಕೊಂಡಿದ್ದ ಈ ವೈರಸ್ ಈಗ ಆಂದ್ರದ ಗಡಿಯಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವುದು ಜನರಲ್ಲಿ ತೀವ್ರ ಆತಂಕ ಉಂಟು ಮಾಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಸೊಳ್ಳೆಗಳಲ್ಲಿ ಅಪಾಯಕಾರಿ ಜಿಕಾ ವೈರಸ್ (Zika Virus)
ನವದೆಹಲಿ: ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಗುರುವಾರ ದೆಹಲಿ ಕ್ಯಾಬಿನೆಟ್ ಸಚಿವ ಮತ್ತು ಆಪ್ ನಾಯಕ ರಾಜ್ ಕುಮಾರ್ ಆನಂದ್ ಅವರ ನಿವಾಸದ ಮೇಲೆ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸಿವಿಲ್ ಲೈನ್ಸ್ ಪ್ರದೇಶದಲ್ಲಿರುವ ಸಚಿವರ ನಿವೇಶನ ಮತ್ತು ಇತರ ಕೆಲವು ಸ್ಥಳಗಳಲ್ಲಿ ಇಡಿ