``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಮೈಸೂರು: ಕಾವೇರಿ ನೀರಿಗಾಗಿ ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ರೈತರ ಪ್ರತಿಭಟನೆಯೊಂದಿಗೆ ರಾಜ್ಯದ ಕನ್ನಡಪರ ಸಂಘಟನೆಗಳು ಕೈಜೋಡಿಸಿದ್ದು, ಶ್ರೀರಂಗಪಟ್ಟಣದ ಹನುಮಂತನಗರದಲ್ಲಿ ವಿನೂತನ ರೀತಿಯಲ್ಲಿ ನಡೆಸಿದ್ದಾರೆ. ಮಿನರಲ್ ವಾಟರ್‌ನಲ್ಲಿ ಭತ್ತದ ಪೈರು ನಾಟಿ ಮಾಡಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಅಲ್ಲದೆ, ಕೆಲ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕಾವೇರಿ ನದಿಗಿಳಿದು, ತಮಿಳುನಾಡಿಗೆ

ನವದೆಹಲಿ:ಚಂದ್ರಯಾನ-3 ಕಾರ್ಯಾಚರಣೆಯ ವಿಕ್ರಮ್ ಲ್ಯಾಂಡರ್ ಮತ್ತೆ ಚಂದ್ರನ ಮೇಲೆ ಇಳಿದಿರುವುದಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರ ಹೇಳಿದೆ. ಈ ಕುರಿತು ಟ್ವೀಟ್ ಮಾಡಿರುವ ಇಸ್ರೋ,ತನ್ನ ಯೋಜನೆಯ ಉದ್ದೇಶಗಳನ್ನು ಮೀರಿ ಕಾರ್ಯನಿರ್ವಹಿಸುತ್ತಿದೆ.ಭಾನುವಾರ ನಡೆದ ಚಂದ್ರಯಾನ-3 ಲ್ಯಾಂಡರ್ ಹಾಪ್ ಪರೀಕ್ಷೆ (ಮತ್ತೊಂದು ಕಡೆಗೆ ಜಿಗಿತ) ಯಶಸ್ವಿಯಾಗಿದೆ. ಆಜ್ಞೆಯ ಮೇರೆಗೆ ವಿಕ್ರಮ್ ಲ್ಯಾಂಡರ್ ತನ್ನ

ನವದೆಹಲಿ: ಮಧ್ಯಪ್ರದೇಶದಲ್ಲಿ ತಮ್ಮದೇ ಬಿಜೆಪಿ ಪಕ್ಷ ಹಮ್ಮಿಕೊಂಡಿರುವ ಜನಾಶೀರ್ವಾದ್ ಯಾತ್ರೆಗೆ ಆಹ್ವಾನಿಸದಿದ್ದಕ್ಕೆ ನಿರಾಶೆ ವ್ಯಕ್ತಪಡಿಸಿದ್ದ ಬಿಜೆಪಿ ಫೈರ್ ಬ್ರಾಂಡ್ ನಾಯಕಿ ಉಮಾಭಾರತಿ ಇದೀಗ ಯಾತ್ರೆಗೆ ಆಹ್ವಾನ ನೀಡಿದರೂ ಹೋಗುವುದಿಲ್ಲ ಎಂದು ಖಜಕ್ ಆಗಿ ಹೇಳಿದ್ದಾರೆ. ಉಮಾಭಾರತಿ ಅವರ ಹೇಳಿಕೆ ಪಕ್ಷದೊಳಗೆ ಬಿರುಗಾಳಿ ಎಬ್ಬಿಸಿದ್ದು, ಅವರು ಯಾತ್ರೆಯ ಸಮಯದಲ್ಲಿ ಹಾಜರಿದ್ದರೆ ಬಿಜೆಪಿ ನಾಯಕರು

ಶ್ರೀಹರಿಕೋಟ: ಚಂದ್ರಯಾನ-3 ಉಡಾವಣೆ ಕ್ಷಣಗಣನೆಯ ಹಿಂದಿನ ಧ್ವನಿಯಾಗಿದ್ದ ಇಸ್ರೋ ವಿಜ್ಞಾನಿ ನಿಧನರಾಗಿದ್ದಾರೆ. ಭಾರತದ ಸ್ಥಾನಮಾನವನ್ನು ಉತ್ತಂಗಕ್ಕೇರಿಸಿದ ಚಂದ್ರಯಾನ-3 ಉಡಾವಣೆ ಸಮಯದಲ್ಲಿ ಹಿಂದಿನ ಧ್ವನಿಯಾಗಿದ್ದ ವಿಜ್ಞಾನಿ ಕೊನೆಯುಸಿರೆಳೆದಿದ್ದಾರೆ. ಶ್ರೀಹರಿಕೋಟಾದಲ್ಲಿ ರಾಕೆಟ್ ಉಡಾವಣೆಗಾಗಿ ಕ್ಷಣಗಣನೆಯಲ್ಲಿ ಧ್ವನಿ ನೀಡಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿ ವಲರ್ಮತಿ ಅವರು ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಇವರು ಕೊನೆಯ

ಬೆಂಗಳೂರು: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ತನ್ನ ಮೊದಲ ಸೂರ್ಯ ಯೋಜನೆ ಆದಿತ್ಯಾ ಎಲ್ 1  ನ ಮೊದಲ ಹಂತದ ಕಾರ್ಯಾಚರಣೆ ಯಶಸ್ವಿಯಾಗಿದೆ. ಹೌದು.. ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯನ್ನು ಕಕ್ಷೆಗೆ ಏರಿಸುವ ಮೊದಲ ಹಂತದ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ತಿಳಿಸಿದೆ.

ಉಡುಪಿ:ಪ್ರತಿವರ್ಷ ವಾಡಿಕೆಯ೦ತೆ ಉಡುಪಿ ಶ್ರೀಕೃಷ್ಣಮಠದಲ್ಲಿ ಜರಗುವ ಶ್ರೀಕೃಷ್ಣಜನ್ಮಾಷ್ಟಮಿ ಮತ್ತು ವಿಟ್ಲಪಿ೦ಡಿ ಮಹೋತ್ಸವವು ಈ ಬಾರಿ ಸೆ.6ಮತ್ತು 7ರ೦ದು ಜರಗಲಿರುವುದು.ಈ ಕಾರ್ಯಕ್ರಮದ ಅ೦ಗವಾಗಿ ಈಗಾಗಲೇ ಸಾ೦ಸ್ಕೃತಿಕ ಕಾರ್ಯಕ್ರಮಕ್ಕೆ ಸೆ.1ರ೦ದು ಉದ್ಘಾಟನೆಯನ್ನು ನೆರವೇರಿಸಿ ಚಾಲನೆಯನ್ನು ನೀಡಲಾಗಿದೆ. ಜೊತೆಗೆ ಮಕ್ಕಳಿಗೆ ಮಹಿಳೆಯರಿಗೆ ವಿವಿಧ ಸ್ಪರ್ಧೆಯನ್ನು ಶ್ರೀಕೃಷ್ಣಮಠದಲ್ಲಿ ನಡೆಸಲಾಗುತ್ತಿದೆ. ಉಡುಪಿಯ ರಥಬೀದಿಯ ಸುತ್ತಲೂ ಮೊಸರಕುಡಿಕೆಗೆ ಬೇಕಾಗುವ

ಹರಾರೆ: ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ (49 ವರ್ಷ) ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ವತಃ ಹೀತ್ ಸ್ಟ್ರೀಕ್ ಅವರ ಪತ್ನಿ ನಾಡಿನ್ ಸ್ಟ್ರೀಕ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, ಅವರ ನಿಧನವನ್ನು ಖಚಿತಪಡಿಸಿದ್ದಾರೆ. ಮೇ ತಿಂಗಳ ಆರಂಭದಲ್ಲಿ, ಸ್ಟ್ರೀಕ್ ಕ್ಯಾನ್ಸರ್ ವಿರುದ್ಧ