ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮಡಿಕೇರಿ: ಥಾಯ್ಲೆಂಡ್ ಮತ್ತು ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಸೆಸ್ಟೊಬಾಲ್ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನ ಗೆದ್ದಿದ್ದ ಕೊಡಗಿನ ಮೂಲದ ಇಬ್ಬರು ಕ್ರೀಡಾ ಪಟುಗಳು ಜಿಲ್ಲೆಗೆ ಚಿನ್ನದ ಪದಕದೊಂದಿಗೆ ವಾಪಸ್ ಆಗಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ತ್ರಿಕೋನ ಸೆಸ್ಟೊಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಥಾಯ್ಲೆಂಡ್ ಮತ್ತು ಶ್ರೀಲಂಕಾ ತಂಡಗಳನ್ನು ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ

ಉಡುಪಿ: ಉಡುಪಿ ಜಿಲ್ಲೆಯ ಜನವಸತಿ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಳ ಮಾಡಲಾಗುತ್ತದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಒಂದೇ ಕುಟುಂಬದ ನಾಲ್ವರು ಹತ್ಯೆಗೀಡಾದ ಮನೆಗೆ ಭೇಟಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಇಲ್ಲಿನ ನೇಜಾರಿನ ತೃಪ್ತಿ ಲೇಔಟ್‌ನಲ್ಲಿ ಹತ್ಯೆಗೀಡಾದ ಮೊಹಮ್ಮದ್ ನೂರ್ ಅವರ ಮನೆಗೆ ಭೇಟಿ ನೀಡಿ

ಉಡುಪಿ: ಉಡುಪಿಯ ನೇಜಾರ್ ಬಳಿಯ ತ್ರಿಪಾಠಿ ನಗರದಲ್ಲಿ ಇತ್ತೀಚೆಗೆ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ ಸಂಬಂಧ ಸಂತ್ರಸ್ಥೆಯ ತಂದೆ ಮೊಹಮ್ಮದ್ ನೂರ್ ಅವರು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಸೀನಾ(48) ಮತ್ತು ಆಕೆಯ ಮಕ್ಕಳಾದ ಅಫ್ಸಾನ್(23), ಅಸೀಮ್ (12) ಮತ್ತು ಅಯ್ನಾಜ್ (21)

ಉತ್ತರಕಾಶಿ(Uttarkashi)ಯಲ್ಲಿ ಸುರಂಗ ಮಾರ್ಗ ಕುಸಿದು 40 ಕಾರ್ಮಿಕರು ಅವಶೇಷಗಳ ಹಿಂಬದಿ ಸಿಲುಕಿಕೊಂಡಿದ್ದಾರೆ, 96 ಗಂಟೆಗಳು ಕಳೆದರೂ ಅವರ ರಕ್ಷಣೆ ಇನ್ನೂ ಸಾಧ್ಯವಾಗಿಲ್ಲ. ಕಾರ್ಮಿಕರಿಗೆ ಆಹಾರ, ಔಷಧಗಳ ಪೂರೈಕೆ ಮಾಡಲಾಗುತ್ತಿದೆ. ಬುಧವಾರ ಭೂಕುಸಿತ ಉಂಟಾದ ಹಿನ್ನೆಲೆ ರಕ್ಷಣಾ ಕಾರ್ಯ ವಿಳಂಬವಾಗಿದೆ. ಕಾರ್ಮಿಕರು ಹಾಗೂ ಅವರ ಕುಟುಂಬದವರು ಸುರಂಗದ ಎದುರು ಪ್ರತಿಭಟನೆ

ಟೆಲ್ ಅವೀವ್: ಹಮಾಸ್ ಉಗ್ರರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಇಸ್ರೇಲ್ ಸೇನೆ ಗಾಜಾದ ಮೂಲೆ ಮೂಲೆಯಲ್ಲೂ ಉಗ್ರರಿಗಾಗಿ ತೀವ್ರ ಶೋಧ ನಡೆಸುತ್ತಿದ್ದು, ಏತನ್ಮಧ್ಯೆ ಹಮಾಸ್ ಉಗ್ರ ಸಂಘಟನೆಯ ಮುಖಂಡನ ಮನೆಯನ್ನೇ ಇಸ್ರೇಲ್ ವಾಯುಸೇನೆ ಬಾಂಬ್ ಹಾಕಿ ಉಡಾಯಿಸಿದೆ. ಹೌದು.. ಹಮಾಸ್ ಉಗ್ರ ಸಂಘಟನೆಯ ಪ್ರಮುಖ ಉಗ್ರನೊಬ್ಬನ ಮನೆಯನ್ನೇ ಇಸ್ರೇಲ್‌ ಬಾಂಬಿಟ್ಟು ಧ್ವಂಸಗೊಳಿಸಿದೆ.

ಬೆಂಗಳೂರು: ಸಿಎಸ್ ಆರ್ ಫಂಡಿಂಗ್ ಬಗ್ಗೆ ನನ್ನ ಪುತ್ರ ಡಾ ಯತೀಂದ್ರ ಪ್ರಸ್ತಾಪಿಸಿದ್ದು ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ್ದಾರೆ. ಡಾ ಯತೀಂದ್ರ ಸಿದ್ದರಾಮಯ್ಯ ಮೊಬೈಲ್ ನಲ್ಲಿ ಮಾತನಾಡಿರುವ ವಿಡಿಯೊ ಮಾಧ್ಯಮಗಳಲ್ಲಿ ತೀವ್ರ ಸುದ್ದಿಯಾಗಿ ವಿರೋಧ ಪಕ್ಷಗಳು ಟೀಕಿಸುತ್ತಿರುವ ಸಂದರ್ಭದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಶಾಲೆಗಳನ್ನು ದುರಸ್ತಿ ಮಾಡಲಾಗುತ್ತಿದೆ.  ಅದಕ್ಕೆ ಸಿಎಸ್

ಪಾಟ್ನಾ: ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ಮಾಜಿ ಸೈನಿಕನಿಗೆ ಗುಂಡಿಕ್ಕಿ ಹತ್ಯೆಗೈದು ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂರನೇ ಆಪಾದಿತ ದಾಳಿಕೋರನನ್ನು ಸಹ ತೀವ್ರವಾಗಿ ಥಳಿಸಲಾಗಿದೆ. ಸದ್ಯ ಆತ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ. ಮೃತರನ್ನು ಮಾಜಿ

ಚಿತ್ರದುರ್ಗ: ನಗರದ ಹೊರವಲಯದಲ್ಲಿರುವ ಮುರುಘಾ ಮಠದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾ ಶ್ರೀ ಇಂದು ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಕಳೆದ 13 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾ ಮಠದ ಶಿವಮೂರ್ತಿ ಶರಣರು ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮುರುಘಾ ಶ್ರೀಗಳಿಗೆ

ಬೆಂಗಳೂರು: ದೀಪಾವಳಿ ಹಬ್ಬದ ನಿಮಿತ್ತ ನಗರದ ಜೆ.ಪಿ.ನಗರದಲ್ಲಿರುವ ತಮ್ಮ ಮನೆಗೆ ದೀಪಾಲಂಕಾರ ಮಾಡಲು ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಎಳೆದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬೆಸ್ಕಾಂ ಎಫ್ಐಆರ್ ದಾಖಲಿಸಿದೆ. ಕುಮಾರಸ್ವಾಮಿ ಅವರ ಮನೆಯನ್ನು ಪರಿಶೀಲಿಸಿದ ಬೆಸ್ಕಾಂ ಅಧಿಕಾರಿಗಳು ಏಳು ದಿನಗಳೊಳಗೆ 68,000

ಉಡುಪಿ:ನ,15: ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಗೃಹ ಸಚಿವ ಡಾ. ವಿ.ಎಸ್. ಆಚಾರ್ಯರವರ ನಿಕಟವರ್ತಿ, ಕುಂಜಿಬೆಟ್ಟು ಕಟ್ಟೆ ಆಚಾರ್ಯ ಮಾರ್ಗ ನಿವಾಸಿ ಕರಾಮತ್ ಆಲಿ ನಿಧನರಾಗಿದ್ದಾರೆ. ಪಕ್ಷದ ಅಲ್ಪಸಂಖ್ಯಾತ ಮೋರ್ಚಾದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಅಲ್ಪಸಂಖ್ಯಾತ ಸಮುದಾಯವನ್ನು ಬಿಜೆಪಿ ಜೊತೆ