ಮಂಗಳೂರು, ಡಿಸೆಂಬರ್ 28: ಕಂದಕಕ್ಕೆ ಆಲ್ಟೋ ಕಾರು ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ನಡೆದಿದೆ. ಅಣ್ಣು ನಾಯ್ಕ್, ಚಿದಾನಂದ, ರಮೇಶ್ ನಾಯ್ಕ್ ಮೃತ ದುರ್ದೈವಿಗಳು. ಮೃತರು ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳು ಎಂದು ತಿಳಿದುಬಂದಿದೆ. ಕಾರು ಸುಳ್ಯದಿಂದ ಪುತ್ತೂರಿನ
ರಾಮನಗರ: ಸಾಲ ಕೊಡಿಸುವುದಾಗಿ ಹೇಳಿ ಲಾಡ್ಜ್ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೋರ್ವಳು ಬಿಜೆಪಿ ಮುಖಂಡನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬ್ಯೂಟಿಷನ್ ಕೆಲಸ ಮಾಡಿಕೊಂಡಿರುವ ವಿವಾಹಿತ ಮಹಿಳೆಗೆ ಸಾಲ ಕೊಡಿಸುವುದಾಗಿ ನಂಬಿಸಿ ರಾಮನಗರದ ಲಾಡ್ಜ್ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು. ಮಹಿಳೆ ನೀಡಿದ ಈ ದೂರಿನ
ಮದನಪಲ್ಲಿ: ಆಂಧ್ರ ಪ್ರದೇಶದಲ್ಲಿ ಕ್ಷುಲ್ಲಕ ವಿಚಾರಕ್ಕೆ ದುಷ್ಕರ್ಮಿಯೋರ್ವ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಮೇಲೆ ಹಲ್ಲೆ ಮಾಡಿದ್ದು, ಮಾತ್ರವಲ್ಲದೇ ಪವಿತ್ರ ಮಾಲೆಯನ್ನು ಕಿತ್ತು ಹಾಕಿದ್ದ. ಈ ವಿಚಾರ ಹಿಂದೂ ಪರ ಸಂಘಟನೆಗಳ ವ್ಯಾಪಕ ಆಕ್ರೋಶ ತುತ್ತಾಗುತ್ತಿದ್ದಂತೆಯೇ ಆತ ಸಂತ್ರಸ್ಥ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಕಾಲಿಗೆ ಬಿದ್ದು ಕ್ಷಮೆ ಯಾಚಿಸಿದ್ದಾನೆ. ಆಂಧ್ರ ಪ್ರದೇಶದ ಮದನಪಲ್ಲಿ
ವಡೋದರ: ಇಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಐದು ವಿಕೆಟ್ ಗಳಿಂದ ಗೆಲುವು ಸಾಧಿಸಿದ ಭಾರತ, ಸರಣಿ ಕ್ಲೀನ್ ಸ್ವೀಪ್ ಮಾಡುವ ಮೂಲಕ ಶುಕ್ರವಾರ ಹೊಸ ದಾಖಲೆ ಬರೆಯಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಗೆ ಭಾರತದ ಬೌಲರ್ ಗಳು ಇನ್ನಿಲ್ಲದಂತೆ ಕಾಡಿದರು.
ಚೆನ್ನೈ:ಡಿ.27ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಮಲೈ ಭೀಷ್ಮ ಶಪತ ಕೈಗೊಂಡಿದ್ದು. ಅಣ್ಣಾಮಲೈ ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದ್ದಾರೆ. ಇಂದು ಬೆಳಗ್ಗೆ ಅವರ ನಿವಾಸದ ಮುಂದೆ ಚಾಟಿಯಿಂದ ಹೊಡೆದುಕೊಂಡು ತಮಗೆ ತಾವೇ ನೋವು ಮಾಡಿಕೊಂಡಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ, ಅಣ್ಣಾಮಲೈ ಅವರು ತಮ್ಮ ಶೂಗಳನ್ನು ತೆಗೆದು
ಉಡುಪಿ:ಮೇಲ್ಸೇತುವೆ ಪಿಲ್ಲರ್ನ ಅಡಿಪಾಯಕ್ಕಾಗಿ ಅಗೆದಿದ್ದ ಬೃಹತ್ ಗುಂಡಿಗೆ ಕಾರೊಂದು ಪಲ್ಟಿಯಾದ ಘಟನೆ ಅಂಬಲಪಾಡಿ ಜಂಕ್ಷನ್ನಲ್ಲಿ ನಡೆದಿದೆ. ಮಂಗಳೂರಿನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಮತ್ತೊಂದು ವಾಹನಕ್ಕೆ ದಾರಿ ಮಾಡಿಕೊಡುವ ವೇಳೆ ನಿಯಂತ್ರಣ ತಪ್ಪಿ ಬೃಹತ್ ಗುಂಡಿಗೆ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂಬಲಪಾಡಿ ಜಂಕ್ಷನ್ನಲ್ಲಿ ಸಂಚಾರ ದಟ್ಟಣೆಯನ್ನು
ಆಕಸ್ಮಿಕವಾಗಿ ಸ್ವೀಟ್ಸ್ ಮಳಿಗೆಗೆ ಬೆಂಕಿ ಹತ್ತಿಕೊಂಡು ಲಕ್ಷಾಂತರ ರೂ. ನಷ್ಟವಾದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಸಮತಾ ಸ್ವೀಟ್ಸ್ ಮಳಿಗೆಯಲ್ಲಿ ಸಂಭವಿಸಿದೆ. ಮಳಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಳಿಗೆಯ ಮಾಲಕರು ಬಂದ್ ಮಾಡಿ ಮನೆಗೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ತಡರಾತ್ರಿ ಮಳಿಗೆಯಿಂದ ಹೊಗೆ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನಲೆ ಡಿಸೆಂಬರ್ 28 ಮತ್ತು 29ರಂದು ತಣ್ಣೀರುಭಾವಿ ಬೀಚ್ನಲ್ಲಿ ಆಯೋಜಿಸಲಾಗಿದ್ದ ಬೀಚ್ ಉತ್ಸವವನ್ನು ದ.ಕ ಜಿಲ್ಲಾಡಳಿತ ಮುಂದೂಡಿ ಪ್ರಕಟನೆ ಹೊರಡಿಸಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಳು ದಿನಗಳ ಶೋಕಾಚರಣೆ ಘೋಷಿಸಿದೆ. ಇದೀಗ ಬೀಚ್
ನವದೆಹಲಿ: ಆಧುನಿಕ ಭಾರತದ ಆರ್ಥಿಕತೆಯ ವಾಸ್ತುಶಿಲ್ಪಿ ಎಂದೇ ಪರಿಗಣಿಸಲ್ಪಟ್ಟ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಸಾಮಾನ್ಯವಾಗಿ ನೀಲಿ ಪೇಟವನ್ನು ಧರಿಸಿ ಕಾಣಿಕೊಳ್ಳುತ್ತಿದ್ದರು. ನೀಲಿ ಬಣ್ಣದ ಪೇಟವನ್ನೇ ಏಕೆ ಧರಿಸುತ್ತಾರೆ ಎಂಬ ಬಗ್ಗೆ ಆಗ್ಗಾಗ್ಗೆ ಪ್ರಶ್ನೆಗಳನ್ನು ಎದುರಿಸುತ್ತಿದ್ದರು. ಗುರುವಾರ ರಾತ್ರಿ ನಿಧನರಾದ ಮಾಜಿ ಪ್ರಧಾನಿ ಈ ಹಿಂದೆ ತಮ್ಮ
ನವದೆಹಲಿ: ಆಧುನಿಕ ಭಾರತದ ಕೀರ್ತಿ ಪತಾಕೆಯನ್ನು ಜಗದೆತ್ತರಕ್ಕೆ ಏರಿಸಿದ್ದ ಆರ್ಥಿಕ ತಜ್ಞ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ (92) ಅವರು ಗುರುವಾರ ರಾತ್ರಿ 9.51ಕ್ಕೆ ನಿಧನ ಹೊಂದಿದ್ದು, ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವದೊಂದಿಗೆ ಶನಿವಾರ ನಡೆಯಲಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯಕರ್ಶಿ ಕೆ.ಸಿ.ವೇಣುಗೋಪಾಲ್ ಅವರು ಮಾತನಾಡಿ, ಮಾಜಿ ಪ್ರಧಾನಿ